TOP STORIES:

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ ನ್ಯೂಸ್‌ ವತಿಯಿಂದ ಗೌರವಿಸಲಾಯಿತು.

 

ಬೆಂಗಳೂರಿನ ಪ್ರತಿಷ್ಠಿತ ದಿ ರಿಟ್ಜ್‌ ಕಾರ್ಲ್ಟ್ರನ್‌ ಹೋಟೆಲ್‌ನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತಿ ವಹಿಸಿದ್ದರು. ರಾಜ್ಯದ ವಿವಿಧ ಸಾಧಕರಿಗೆ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.

 

ಅಸಿಸ್ಟೆಂಟ್‌ ಕಮೀಶನರ್‌ ಆಫ್‌ ಪೋಲಿಸ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ರೀನಾ ಸುವರ್ಣಾ. ಎನ್‌ ಅವರನ್ನು ಸಹ ಈ ಸಂದರ್ಭದಲ್ಲಿ ಗೌರವಿಸಲಾಯಿತು.

ರೀನಾ ಸುವರ್ಣಾ. ಎನ್‌ ಅವರು 2014 ರಂದು ಪೊಲೀಸ್ ಇಲಾಖೆಗೆ ಸೇರಿ ಪ್ರೊಬೇಷನರಿ ಅವಧಿಯ ಕಾರ್ಯದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಗಮನ ಸೆಳೆದರು, ಅಪರಾಧ ಪ್ರಕರಣಗಳ ಮಿಂಚಿನ ಕಾರ್ಯದಲ್ಲಿ ನಿರತವಾಗಿ ಹಾಗೂ ಸಾಮಾಜಿಕ ಕಾರ್ಯಗಳನ್ನು ಮಾಡಿ ಜನಮನ ಗೆದ್ದ ದಕ್ಷ ಅಧಿಕಾರಿ ಎಂದು ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಭಾಜನರಾದರು.


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »