TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ ಹಾಗು ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶುಕ್ರವಾರ ನಡೆಯಿತು.

ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿ, ಕ್ಷೇತ್ರಾಡಳಿತ ಸಮಿತಿಯನ್ನು ಪುನರ್ ರಚಿಸಲಾಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾಗಿ ಸಾಹುಕಾರ್ ಕೊರಗಪ್ಪರವರ ಮೊಮ್ಮಗ ಜಯರಾಜ್ ಎಚ್ ಸೋಮಸುಂದರಂ (ಎಚ್.ಎಸ್.ಜಯರಾಜ್) ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಊರ್ಮಿಳಾ ರಮೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಸುವರ್ಣ, ಕೋಶಾಧಿಕಾರಿಯಾಗಿ ಪದ್ಮರಾಜ್ ಆರ್. ಪೂಜಾರಿ, ಸಮಿತಿ ಸದಸ್ಯರಾಗಿ ಎಚ್.ಎಸ್.ಸಾಯಿರಾಂ, ಸಂತೋಷ್ ಜನಾರ್ದನ ಪೂಜಾರಿ, ಜಗದೀಪ್ ಸುವರ್ಣ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ ಅವರನ್ನು ಆಯ್ಕೆ ಮಾಡಲಾಯಿತು.

ಇದೇ ವೇಳೆ ಅಭಿವೃದ್ಧಿ ಸಮಿತಿಯನ್ನು ಪುನರ್‌ರಚಿಸಿ 51 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಮಾಜದ ಸಂಘಟನೆ ಹಾಗು ಬ್ರಹ್ಮಶ್ರೀ ನಾರಾಯಣಗುರುಗಳ ಕ್ರಾಂತಿಗೆ ಪೂರಕವಾಗಿ ಕಾರ್ಯಕ್ರಮ ಆಯೋಜಿಸುವಂತೆ ಬಿ.ಜನಾರ್ದನ ಪೂಜಾರಿಯವರು ನಿರ್ದೇಶನ ನೀಡಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »