TOP STORIES:

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರಗಿತು.

ಕಾರ್ಯಕ್ರಮವನ್ನು ಮಂಬೈ ವಿ ಕೆ ಸಮೂಹ ಸಂಸ್ಥೆಯ ಚೆಯರ್ ಮ್ಮಾನ್ ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಿದರು.

ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ ರಂಗಚಾವಡಿ ಸಂಸ್ಥೆ ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಸಂಸ್ಥೆ. ಅನೇಕ ಕಲಾವಿದರನ್ನು ಗುರುತಿಸಿ ನಾಡಿಗೆ ಪರಿಚಯಿಸಿದ ಕೀರ್ತಿ ರಂಗಚಾವಡಿ ಸಂಸ್ಥೆಗೆ ಸಲ್ಲುತ್ತದೆ. ಮುಂದಿನ ದಿನಗಳಲ್ಲಿ ರಂಗಚಾವಡಿ ಅಕಾಡೆಮಿಯನ್ನಾಗಿ ರಚಿಸಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ ಮಾತನಾಡಿ ರಂಗಚಾವಡಿ ಸಂಸ್ಥೆ ರಜತ ಸಂಭ್ರಮವನ್ನು ಆಚರಿಸುತ್ತಿದೆ. ಇದರ ಕಾರ್ಯಚಟುವಟಿಕೆ ಇದೇ ರೀತಿ ಮುಂದುವರಿಯಲಿ ಎಂದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ ರಂಗಚಾವಡಿ ಸಂಸ್ಥೆ ಕಲಾವಿದರನ್ನು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯ ಕೆಲಸ. ನವೀನ್ ಪಡೀಲ್ ರಂತಹ ಮೇರು ನಟನಿಗೆ ರಂಗಚಾವಡಿ ಪ್ರಶಸ್ತಿ ಬಂದಿರುವುದು ಅತೀವ ಸಂತಸ ತಂದಿದೆ ಎಂದರು.

ಉದ್ಯಮಿ ಗಿರೀಶ್ ಎಂ ಶೆಟ್ಟಿ ಮಾತನಾಡಿ ನವೀನ್ ಪಡೀಲ್ ಮುಗ್ದ ಮನಸ್ಸಿನ ಪ್ರತಿಭಾವಂತ ಕಲಾವಿದ. ಸದಾ ಹಸನ್ಮುಖಿಯಾಗಿರುವ ನವೀನ್ ಕಷ್ಟ ಮತ್ತು ಸುಖಗಳನ್ನು ಸಮಾನವಾಗಿ ಸ್ವೀಕರಿಸಿದ್ದಾರೆ. ತುಳುರಂಗಭೂಮಿಗೆ ಅವರ ಕೊಡುಗೆ ದೊಡ್ಡದಿದೆ ಎಂದರು.

ಸಮಾರಂಭದಲ್ಲಿ ನವೀನ್ ಡಿ ಪಡೀಲ್‌ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಡಾ ಸಂಜೀವ ದಂಡೆಕೇರಿ, ಕಿಶೋರ್ ಡಿ ಶೆಟ್ಟಿ, ಕರ್ನೂರು ಮೋಹನ್ ರೈ,  ವಸಂತ ಶೆಟ್ಟಿ,  ಈಶ್ವರ್ ಪ್ರಸಾದ್ ಶೆಟ್ಟಿ, ಅಶೋಕ್ ಶೆಟ್ಟಿ ತಡಂಬೈಲ್, ಭವಾನಿ ಶಂಕರ್ ಶೆಟ್ಟಿ ಬಾಳ,  ರಮೆಶ್ ಶೆಟ್ಟಿ ಸುಭಾಷಿತನಗರ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಎಂ ದೇವಾನಂದ ಶೆಟ್ಟಿ,  ಸುಧಾಕರ ಎಸ್  ಪೂಂಜ, ಉ?ಲಾಸ್ ಆರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »