TOP STORIES:

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಿವಗಿರಿ ಮಠದಿಂದ ಮನವಿ ಮಾಡಿದಂತೆ ಐದು ಎಕರೆ ಭೂಮಿಗೆ ಬಿ.ಕೆ.ಹರಿಪ್ರಸಾದ್ ಮತ್ತು ಇತರ ನಾಯಕರು ಭೂಮಿ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಾರಾಯಣ ಗುರು ಮತ್ತು ಗಾಂಧಿ ಸಮಾಗಮ ಬಗ್ಗೆ ಪ್ರಧಾನ ಸಂದೇಶ ಭಾಷಣ ಮಾಡಿದ ಲೋಕಸಭೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧ್ಯಕ್ಷ ಕೆ. ಸಿ. ವೇಣುಗೋಪಾಲ್, ಬಸವಣ್ಣ, ಮಹಾತ್ಮ ಗಾಂಧಿ, ನಾರಾಯಣ ಗುರು ತತ್ವಗಳು ದೇಶದ ಸಂವಿಧಾನದಲ್ಲಿ ಅಡಕವಾಗಿವೆ. ಇಂಥ ಮಹಾನ್ ಸಂವಿಧಾನವೇ ಈಗ ಬೆದರಿಕೆ ಎದುರಿಸುತ್ತಿದೆ. ಗಾಂಧಿ, ಗುರುಗಳು ದಶಕಗಳ ಹಿಂದೆ ಎದುರಿಸಿದ ಬೆದರಿಕೆಯಂತೆಯೇ ಸಂವಿಧಾನ ಬೆದರಿಕೆ ಎದುರಿಸುತ್ತಿರುವುದು ದುರದೃಷ್ಟ. ಈ ಮಹಾನ್ ನಾಯಕರ ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ಮುಂದುವರಿಯಬೇಕಿದೆ ಎಂದರು. ಒಂದೇ ದೇಶ ಒಂದೇ ಮತ ಒಂದೇ ದೇವರು ಎಂಬ ಸಿದ್ಧಾಂತ ಪಸರಿಸಿದವರು ನಾರಾಯಣ ಗುರುಗಳು. ಸತ್ಯ ಅಹಿಂಸೆಯ ಸಂದೇಶ ಗಾಂಧಿ ಅವರದು. 1925ರಲ್ಲಿ ಈ ಇಬ್ಬರು ಮಹಾನ್ ನಾಯಕರು ಸಂವಾದ ನಡೆಸಿದ್ದು ಐತಿಹಾಸಿಕ ದಾಖಲೆಯಾಗಿ ಉಳಿದಿದೆ. ಆ ಕಾಲದಲ್ಲಿ ಒಂದೆಡೆ ಸ್ವಾತಂತ್ರ್ಯ ಹೋರಾಟ ಇದ್ದರೆ ಇನ್ನೊಂದೆಡೆ ಅಸ್ಪೃಶ್ಯತೆ, ಅಸಮಾನತೆ ತಾಂಡವ ಆಡುತಿತ್ತು. ಈ ಸಂವಾದ ದೇಶದ ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿತ್ತು ಎಂದು ಹೇಳಿದರು. ಗಾಂಧಿ- ಗುರುಗಳ ಈ ಐತಿಹಾಸಿಕ ಸಂವಾದದಿಂದ ಸುದೀರ್ಘ ವೈಕಂ ಸತ್ಯಾಗ್ರಹಕ್ಕೆ ಕಾರಣವಾಯಿತು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಇತಿಹಾಸವನ್ನು ಭವಿಷ್ಯಕ್ಕೆ ತಿಳಿಸುವ ಈ ಕಾರ್ಯಕ್ರಮ ನಡೆದ ಈ ಮೈದಾನಕ್ಕೆ ಗುರು-ಗಾಂಧಿ ಮೈದಾನ ಎಂದು ನಾಮಕರಣಗೊಳಿಸಿ ಪಾರ್ಕ್, ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದರು. ನನ್ನ ಪ್ರಕಾರ ಅಭಿವೃದ್ಧಿ ಎಂದರೆ ರಸ್ತೆ, ಸೇತುವೆ ನಿರ್ಮಾಣ ಮಾತ್ರ ಅಲ್ಲ, ನನ್ನ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಮ್, ದಲಿತರು, ಕ್ರೈಸ್ತರು, ಶ್ರೀಮಂತರು, ಶೋಷಿತರ ಮಕ್ಕಳು ಕೈ ಕೈ ಹಿಡಿದು ಜೊತೆಯಾಗಿ ಸಾಗುವ ವಾತಾವರಣ ನಿರ್ಮಾಣ ಅದಾಗ ಅಭಿವೃದ್ಧಿ ಆದಂತೆ ಎಂದವರು ಹೇಳಿದರು. ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾತನಾಡಿದ ಶತಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, 2013ರಲ್ಲಿ ಮಂಗಳೂರು ವಿವಿಯಲ್ಲಿ ನಾರಾಯಣ ಗುರುಗಳ ಪೀಠ ಸ್ಥಾಪನೆಗೆ ಮನವಿ ಮಾಡಿ ಹಿಂದುಳಿದ ನಾಯಕರು ಮುಂದೆ ಬಂದು ನಾರಾಯಣ ಗುರು ಪೀಠ ಸ್ಥಾಪನೆಗೆ ಮುಂದಾದ ಸಂದರ್ಭ ನನ್ನ ಎಂಎಲ್ಸಿ ನಿಧಿಯಿಂದ 35 ಲಕ್ಷ ರೂ. ಒದಗಿಸಿದ್ದೆ. ಸಂಸದರಾಗಿದ್ದ ಸಂದರ್ಭ ನಳಿನ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾಗಿದ್ದ ಹರೀಶ್ ಕುಮಾರ್ ತಲಾ 10 ಲಕ್ಷ ರೂ. ಅನುದಾನ ಒದಗಿಸಿದ್ದರು. ಅಧ್ಯಯನ ಪೀಠದ ಕಾರ್ಯಕ್ಕೆ ಇನ್ನಷ್ಟು ಅನುದಾನ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದಾಗ ಎರಡು ಕೋಟಿ ರೂ. ಅನುದಾನ ಒದಗಿಸಿದ್ದರು. ಇದೀಗ ಶಿವಗಿರಿ ಮಠದ ಶಾಖೆ ಸ್ಥಾಪಿಸಲು ಐದು ಎಕರೆ ಜಾಗ ಗುರುತಿಸುವಂತೆ ಮುಖ್ಯ ಮಂತ್ರಿ ಹೇಳಿದ್ದಾರೆ ಎಂದರು. ಶಿವಗಿರಿ ಮಠದ ಕಾರ್ಯದರ್ಶಿ ಶುಭಗಾನಂದ ಸ್ವಾಮೀಜಿ, ಗೃಹಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್, ಮಾಜಿ ಸಚಿವ ಜನಾರ್ದನ ಪೂಜಾರಿ. ಶಾಸಕರಾದ ಅಶೋಕ್ ರೈ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಕಾಂಗ್ರೆಸ್ ನಾಯಕರಾದ ಹರೀಶ್ ಕುಮಾರ್, ಪಿವಿ ಮೋಹನ್, ಎಂ.ಎ.ಗಫೂರ್, ಪದ್ಮರಾಜ್, ರಕ್ಷಿತ್ ಶಿವರಾಂ, ಪ್ರತಿಭಾ ಕುಳಾಯಿ, ವಿಶ್ವಾಸ್ ಕುಮಾರ್ ದಾಸ್, ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಸ್ವಾಗತಿಸಿದರು. ಜಮೀನು ಒದಗಿಸಲು ಸ್ವಾಮೀಜಿ ಮನವಿ ಶಿವಗಿರಿ ಮಠದ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಶಿವಗಿರಿ ಮಠದ ಶಾಖೆಯನ್ನು ಕರ್ನಾಟಕದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಆದ್ಯತೆ ನೀಡಿ ಅಗತ್ಯ ಭೂಮಿಯನ್ನು ಒದಗಿಸಬೇಕು ಎಂದು ಮನವಿ ಮಾಡಿದರು. ಬಳಿಕ ಮಠದ ವತಿಯಿಂದ ಮನವಿ ಪತ್ರವನ್ನು ಕೆ.ವೇಣುಗೋಪಾಲ್ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.

ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ , ಶಿವಗಿರಿ ಮಠ ವರ್ಕಲಾ , ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಆಶ್ರಯದಲ್ಲಿ ಬುಧವಾರ ಆಯೋಜಿಸಲಾದ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ , ಶ್ರೀಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ , ಯತಿ ಪೂಜೆ ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ದಿನೇಶ್ ಗುಂಡೂ ರಾವ್, ಸಚಿರಾದ ಝಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ , ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ, ಕೇಂದ್ರ ಸಂಘಟನಾ ಸಮಿತಿಯ ರಕ್ಷಣಾಧಿಕಾರಿ ಶ್ರೀ ಶಿವಗಿರಿ ಮಠದ ಶ್ರೀ ಜ್ಞಾನ ತೀರ್ಥ ಸ್ವಾಮೀಜಿ, ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಗುರು–ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ಸೌಹಾರ್ದ–ಮಾನವೀಯ ಮೌಲ್ಯಗಳ ಸಂದೇಶ

ಉಳ್ಳಾಲ: ಗುರು–ಗಾಂಧಿ ಸಂವಾದ ಶತಮಾನೋತ್ಸವ ಕಾರ್ಯಕ್ರಮವು ಮಾನವ ಸಹೋದರತೆ, ಧಾರ್ಮಿಕ ಸಹಿಷ್ಣುತೆ, ಸತ್ಯ ಮತ್ತು ಅಹಿಂಸೆ ಎಂಬ ಮೌಲ್ಯಗಳನ್ನು ಮರುಜಾಗೃತಗೊಳಿಸಿದ ಸಾರ್ಥಕ ಮಹೋತ್ಸವವಾಗಿ ನೆರವೇರಿತು. ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳ ಗಣ್ಯರು ಒಂದೇ ವೇದಿಕೆಯಲ್ಲಿ ಸೇರಿ ಸಮಾನತೆ, ಸ್ನೇಹ ಮತ್ತು ಶಾಂತಿಯ ಸಂದೇಶವನ್ನು ಹರಡಿದ ಈ ಆಚರಣೆ, ಗುರು–ಗಾಂಧಿಗಳ ತತ್ವಗಳಿಗೆ ಹೊಸ ಜೀವ ತುಂಬಿತು.

ಕಾರ್ಯಕ್ರಮಕ್ಕೆ ವಿಧಾನಪರಿಷತ್‌ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರು ಅಧ್ಯಕ್ಷತೆ ವಹಿಸಿ “ಸರ್ವಮತ ಸಂದೇಶ”ದ ಮಹತ್ವವನ್ನು ಪ್ರಸ್ತಾಪಿಸಿದರು. ಶಿವಗಿರಿ ಮಠದ ಸ್ವಾಮಿ ರೀತಾಂಭರಾನಂದ, ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀಮತ್ ಸ್ವಾಮಿ ಜಿತಕಾಮಾನಂದಜಿ ಮಹಾರಾಜ, ಖ್ಯಾತ ಬರಹಗಾರ ಮತ್ತು ಶಿಕ್ಷಣ ತಜ್ಞರಾದ ಸಯ್ಯದ್ ಪಾಣಕ್ಕಾಡ್ ಮುನವರ್ ಆಲಿ ಹಾಗೂ ಶಿಹಾಬ್ ತಂಜಳ್, ಮಂಗಳೂರು ಧರ್ಮ ಪ್ರಾಂತ್ಯದ ಅತಿ ವಂದನೀಯ ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನ, ಚಿಂತಕರಾದ ಗಣೇಶ್ ದೇವಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಶಿರಸಿಯ ಬ್ರಹ್ಮಕುಮಾರಿ ವೀಣಾ ಬೆಹನ್‌ಜಿ, ಅತಿ ವಂದನೀಯ ಬಿಷಪ್ ಮಾರ್ ಜೇಮ್ಸ್ ಪಟ್ಟಿರಿಲ್ ಹಾಗೂ ಹನೂರು ಅಶೋಕ ಆರಾಮ ಬುದ್ಧವಿಹಾರದ ಪೂಜ್ಯ ಭಿಕ್ಕು ಧಮ್ಮತಿಸ್ಸ ಸೇರಿದಂತೆ ತಿರುವನಂತಪುರಂನ ಧಾರ್ಮಿಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಭಾವಿ ಸಂವಾದಕ್ಕೆ ಕಾರಣರಾದರು.

ಅತಿಥಿಗಳು ಮಾನವೀಯ ಮೌಲ್ಯಗಳು ಮತ್ತು ಶಾಂತಿಯ ಬದುಕು ಇಂದಿನ ಜಗತ್ತಿಗೆ ಅತ್ಯವಶ್ಯಕವಾಗಿದ್ದು, ಗುರು ಹಾಗೂ ಗಾಂಧಿಯವರ ಸಂದೇಶಗಳು ಸಮಾಜವನ್ನು ಒಗ್ಗೂಡಿಸುವ ಶಕ್ತಿಯಾಗಿದೆ ಎಂದು ತಮ್ಮ ಭಾಷಣದಲ್ಲಿ ಒತ್ತಿ ಹೇಳಿದರು. ವಿವಿಧ ಮತಗಳ ಪ್ರತಿನಿಧಿಗಳು ಒಂದೇ ವೇದಿಕೆಯಲ್ಲಿ ಮಾನವೀಯತೆ ಮತ್ತು ಸೌಹಾರ್ದವನ್ನು ಪ್ರತಿಪಾದಿಸಿದ ಕಾರಣ ಕಾರ್ಯಕ್ರಮವು ಎಲ್ಲರ ಮನದಲ್ಲಿ ವಿಶೇಷ ಸ್ಥಾನ ಗಳಿಸಿತು.

 

ಕರಾವಳಿ ಶೈಲಿಯ ಭರ್ಜರಿ ಮೀನು ಊಟ ಸವಿದ

ಮುಖ್ಯಮಂತ್ರಿ ಸಿದ್ಧರಾಮಯ್ಯ

ಉಳ್ಳಾಲ: ಗುರು–ಗಾಂಧಿ ಸಂವಾದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ನಂತರ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದ ಕಾವೇರಿ ಗೆಸ್ಟ್‌ ಹೌಸ್‌ನಲ್ಲಿ ವಿಶೇಷವಾಗಿ ಸಿದ್ಧಪಡಿಸಿದ್ದ ಕರಾವಳಿ ಶೈಲಿಯ ಭರ್ಜರಿ ಮೀನು ಊಟವನ್ನು ಸವಿದರು.

ಮುಖ್ಯಮಂತ್ರಿಗಾಗಿ ಅಂಜಲ್‌, ಕಾನೆ, ಪಾಮ್ಲೆಟ್‌ ಮೀನು ಫ್ರೈ, ಜೊತೆಗೆ ನಾಟಿ ಕೋಳಿ, ನೀರು ದೋಸೆ, ಆಪಂ, ಪ್ರಾನ್ಸ್‌ ಗೀ ರೋಸ್ಟ್‌ , ಅಂಜಲ್‌ ತವಾ ಫ್ರೈ, ಲೈವ್‌ ಆಪಂ ತಯಾರಿ ಸೇರಿದಂತೆ ಮಂಗಳೂರಿನ ವೈವಿಧ್ಯಮಯ ಅಡುಗೆ ಪರಂಪರೆಯನ್ನು ಒಳಗೊಂಡ ವಿಶೇಷ ಆಹಾರ ಪಥ್ಯವನ್ನು ವ್ಯವಸ್ಥೆ ಮಾಡಲಾಗಿತ್ತು. ಬಾಯ್ಲ್ಡ್‌ ರೈಸ್‌ ಸಹಿತ ಸ್ಥಳೀಯ ರುಚಿಗುಣಗಳನ್ನು ಪ್ರತಿಬಿಂಬಿಸುವಂತೆ ಖಾದ್ಯಗಳನ್ನು ನಗರದ ಖ್ಯಾತ ಹೊಟೇಲ್‌ನಿಂದ ತರಿಸಲಾಗಿತ್ತು. ಕರಾವಳಿ ತಿನಿಸುಗಳ ಖ್ಯಾತಿಯನ್ನು ಮುಖ್ಯಮಂತ್ರಿ ಅನುಭವಿಸುವುದಕ್ಕಾಗಿ ಆಯೋಜಕರು ವಿಶೇಷ ಗಮನ ಹರಿಸಿದ್ದರು. ರುಚಿಗರ ಊಟದ ನಂತರ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕೊಣಾಜೆ ನಡುಪದವಿ ನಿವಾಸಿ ನಝರ್‌ ಷಾ ಅವರ ಮನೆಯಲ್ಲಿ ನಡೆದ ಚಹಾ ಕೂಟದಲ್ಲಿ ಪಾಲ್ಗೊಂಡರು.


Related Posts

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »