TOP STORIES:

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ.

ಈ ಕುರಿತು ಏಪ್ರಿಲ್ 2ರಂದು ಸರಕಾರದ ಅಧೀನ ಕಾರ್ಯದರ್ಶಿಗಳ ಆದೇಶ ಹೊರಬಂದಿದೆ. 2025ರ ಸೆಪ್ಟೆಂಬರ್‌ನಲ್ಲಿ ನೂತನವಾಗಿ ರಚಿಸಲಾದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡರಾದ ಮಂಜುನಾಥ ಪೂಜಾರಿ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ದೊರೆತಿರುವುದು ಅವರ ದೀರ್ಘಕಾಲದ ಪರಿಶ್ರಮಕ್ಕೆ ಸಿಕ್ಕ ಗೌರವವಾಗಿದೆ.

ಕಳೆದ 3 ದಶಕಗಳಿಂದ ನಿರಂತರವಾಗಿ ಪಕ್ಷ ಸಂಘಟನೆಗಾಗಿ ದುಡಿಯುತ್ತಿರುವ ಅವರು, ಡೀಮ್ಸ್ ಫಾರೆಸ್ಟ್ ವಿಷಯದಲ್ಲಿ ಜನಪರ ಹೋರಾಟ ನಡೆಸಿ ಜನಮನ ಗೆದ್ದಿದ್ದಾರೆ. ಗ್ರಾಮೀಣ ಜನರ ಕಲ್ಯಾಣಕ್ಕಾಗಿ ಸಹಕಾರಿ ಸಂಘವನ್ನು ಸ್ಥಾಪಿಸಿ ಸೇವೆ ಸಲ್ಲಿಸಿರುವುದು ವಿಶೇಷ.

ರಾಜಕೀಯ ಕ್ಷೇತ್ರದ ಜೊತೆಗೆ ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿಯೂ ಸಕ್ರಿಯರಾಗಿರುವ ಅವರು, ಎರಡು ಅವಧಿಗೆ ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ತಾಲೂಕು ಬೋರ್ಡ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನುಭವವೂ ಇವರದ್ದಾಗಿದೆ.

ಹೆಬ್ರಿ ತಾಲೂಕು ರಚನೆಗಾಗಿ ನಡೆದ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ ಅವರು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಜೊತೆಗೆ ಹೆಬ್ರಿ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವುದು ಗಮನಾರ್ಹ.

ಇವರಿಗೆ ದೊರೆತಿರುವ ಈ ಗೌರವ ನಮ್ಮ ಬಿಲ್ಲವ ಸಮಾಜಕ್ಕೆ ಸಿಕ್ಕ ಗೌರವವಾಗಿದ್ದು, ಇನ್ನಷ್ಟು ಜನಪರ ಸೇವೆ ಮಾಡಲು ಅವರಿಗೆ ಶಕ್ತಿ ನೀಡಲಿ ಎಂದು ಹಾರೈಸುತ್ತೇವೆ.

ಹಾರ್ದಿಕ ಅಭಿನಂದನೆಗಳು 


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »