TOP STORIES:

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ ಅಡಚಣೆಯುಂಟುಮಾಡುತ್ತಿದ್ದ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ, ಭೂಗತ ಕೇಬಲ್ ಅಳವಡಿಸುವ 67 ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿದೆ.

​ಪ್ರತಿ ವರ್ಷ ಮಂಗಳೂರು ದಸರಾ ಮೆರವಣಿಗೆಯ ಸಂದರ್ಭದಲ್ಲಿ ಸಾಲು ಸಾಲಾಗಿ ಸಾಗುವ ಎತ್ತರದ ಸ್ತಬ್ಧಚಿತ್ರಗಳು ಮತ್ತು ರಥಗಳಿಗೆ ರಸ್ತೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗಳು ದೊಡ್ಡ ಅಡಚಣೆಯಾಗಿದ್ದವು. ಸುರಕ್ಷತೆಯ ದೃಷ್ಟಿಯಿಂದ ಮೆರವಣಿಗೆಯ ಸಮಯದಲ್ಲಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಿತ್ತು. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಈ ಗಂಭೀರ ಸಮಸ್ಯೆಯನ್ನು ಮನಗಂಡ ಕುದ್ರೋಳಿ ಕ್ಷೇತ್ರದ ಆಡಳಿತ ಮಂಡಳಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮೂಲಕ ಸರ್ಕಾರಕ್ಕೆ ವಿಶೇಷ ಮನವಿ ಸಲ್ಲಿಸಿತ್ತು.

ಈ ಸಮಸ್ಯೆಯ ಗಂಭೀರತೆಯನ್ನು ಅರಿತ ಯು.ಟಿ. ಖಾದರ್ ಅವರು ಆಲಿಸಿ, ಇದನ್ನು ಕೇವಲ ಒಂದು ಧಾರ್ಮಿಕ ಕಾರ್ಯಕ್ರಮವನ್ನಾಗಿ ನೋಡದೆ ಮಂಗಳೂರಿನ ಘನತೆಯ ಪ್ರಶ್ನೆಯಾಗಿ ಸ್ವೀಕರಿಸಿ, ಇಂಧನ ಸಚಿವರೊಂದಿಗೆ ಸತತ ಸಂಪರ್ಕ ಸಾಧಿಸಿ, ಬೃಹತ್ ಯೋಜನೆಗೆ ಅನುಮೋದನೆ ದೊರಕಿಸಿಕೊಡುವಲ್ಲಿ ಅವರು ವಹಿಸಿದ ಪಾತ್ರ ಅಮೋಘ. ಟೆಂಡರ್ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಿ, ಕಾಮಗಾರಿ ಆರಂಭಕ್ಕೆ ಹಸಿರು ನಿಶಾನೆ ತೋರುವ ಮೂಲಕ ತಮ್ಮ ‘ಕಾರ್ಯದಕ್ಷತೆ’ಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ

ಈ ಐತಿಹಾಸಿಕ ಯೋಜನೆಯ ಜಾರಿಗೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಇಂಧನ ಸಚಿವ ಕೆ.ಜೆ. ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಎಂಎಲ್‌ಸಿ ಮಂಜುನಾಥ ಭಂಡಾರಿ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

​ಈ ಯೋಜನೆಯಿಂದಾಗಿ ಮುಂದಿನ ದಿನಗಳಲ್ಲಿ ವಿದ್ಯುತ್ ಅಪಘಾತಗಳ ಭಯವಿಲ್ಲದೆ ಮೆರವಣಿಗೆ ಸುಗಮವಾಗಿ ಸಾಗಲಿದ್ದು, ಮಳೆಗಾಲದಲ್ಲಿ ಮರಗಳು ಬಿದ್ದು ವಿದ್ಯುತ್ ವ್ಯತ್ಯಯವಾಗುವ ಸಮಸ್ಯೆಗೂ ಮುಕ್ತಿ ಸಿಗಲಿದೆ. ಅಷ್ಟೇ ಅಲ್ಲದೆ, ರಸ್ತೆಗಳಲ್ಲಿ ವಿದ್ಯುತ್ ತಂತಿಗಳ ಜಾಲವಿಲ್ಲದೆ ಮಂಗಳೂರು ನಗರವು ಮತ್ತಷ್ಟು ಸುಂದರವಾಗಿ ಕಂಗೊಳಿಸಲಿದೆ. ಈ ಮಹತ್ವದ ಕಾಮಗಾರಿಯು ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »