TOP STORIES:

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ ‘ಸೇಮ್ ಟು ಸೇಮ್’ ಎಂದು ಸಾಬೀತುಪಡಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ! ಇತ್ತೀಚೆಗೆ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ಈ ಅವಳಿ ಸಾಧಕಿಯರು ನಿಖರವಾಗಿ ಸಮಾನ ಅಂಕಗಳನ್ನು ಪಡೆಯುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.

​ಈ ಅಪರೂಪದ ಸಾಧನೆ ಮಾಡಿದವರು ಕುಂದಾಪುರ ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ವಂಡ್ಲೆ-ನೆಂಪುವಿನ ವಿದ್ಯಾರ್ಥಿನಿಯರಾದ ಸಮೀಕ್ಷಾ ಎಸ್‌. ಪೂಜಾರಿ ಮತ್ತು ಪ್ರತೀಕ್ಷಾ ಎಸ್. ಪೂಜಾರಿ. ಪ್ರಕಟಗೊಂಡ ಫಲಿತಾಂಶದಲ್ಲಿ ಇಬ್ಬರೂ ಸಹೋದರಿಯರು ನಿಖರವಾಗಿ ತಲಾ 602 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕ ವಲಯದಲ್ಲಿ ‘ಅವಳಿ ಪವಾಡ’ ಸೃಷ್ಟಿಸಿದ್ದಾರೆ.

​ಈ ವಿದ್ಯಾರ್ಥಿನಿಯರ ಯಶಸ್ಸಿನ ಹಿಂದೆ ಆದರ್ಶ ಶಿಕ್ಷಕ ತಂದೆಯ ಪ್ರೇರಣೆ ದೊಡ್ಡದಿದೆ. ಬಸೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಹಾಗೂ ಇಸಿಓ (ECO) ಆಗಿ ಸೇವೆ ಸಲ್ಲಿಸುತ್ತಿರುವ ಸಂತೋಷ್ ಮತ್ತು ಪ್ರೇಮಾ ದಂಪತಿಯ ಪುತ್ರಿಯರಿವರು. ತಾವೊಬ್ಬ ಸರ್ಕಾರಿ ಶಿಕ್ಷಕರಾಗಿದ್ದುಕೊಂಡು, ತಮ್ಮ ಮಕ್ಕಳನ್ನೂ ಸರ್ಕಾರಿ ಶಾಲೆಯಲ್ಲೇ ಓದಿಸಿ, ಅವರು ಉತ್ತಮ ಸಾಧನೆ ಮಾಡುವಂತೆ ಪ್ರೇರೇಪಿಸಿದ ಸಂತೋಷ್ ಅವರ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

​ವಂಡ್ಲೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯವರೆಗೆ ಮತ್ತು ಕೆಪಿಎಸ್ ನೆಂಪುನಲ್ಲಿ 10ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಈ ಜೋಡಿ ಪ್ರತಿಭೆಗಳು, ಶ್ರದ್ಧೆಯಿಂದ ಓದಿದರೆ ಸಾಧನೆಗೆ ಭೌತಿಕ ಸೌಲಭ್ಯಗಳಿಗಿಂತ ದೃಢ ಸಂಕಲ್ಪ ಮುಖ್ಯ ಎಂಬುದನ್ನು ನಿರೂಪಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ‘ಅವಳಿ ಪವಾಡ’ದ ಸುದ್ದಿ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು ಹಾಗೂ ಸಾರ್ವಜನಿಕರು ಈ ಸಾಧಕಿಯರಿಗೆ ಅಭಿನಂದನೆಗಳ ಸುರಿಮಳೆಗರೆಯುತ್ತಿದ್ದಾರೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »