TOP STORIES:

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಖಿಲ ಭಾರತ ಬಿಲ್ಲವರ ಯೂನಿಯನ್ ಬೈಲಾ ಪ್ರಕಾರ ಹೊಸ ಸಮಿತಿ ರಚನೆಯಾಗಿದೆ ಎಂಬ ಕೆಲವರ ಹೇಳಿಕೆ ಭಕ್ತರಲ್ಲಿ ಗೊಂದಲ ಮೂಡಿಸಿದೆ. ಆದರೆ ಕಳೆದ 35 ವರ್ಷಗಳಿಂದ ಈ ಯೂನಿಯನ್ ಮತ್ತು ಕುದ್ರೋಳಿ ಕ್ಷೇತ್ರದ ನಡುವೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು. ಯೂನಿಯನ್‌ನಲ್ಲಿ 18 ವರ್ಷ ಮೇಲ್ಪಟ್ಟ ಸಮುದಾಯದವರಿಗೆ ಸದಸ್ಯತ್ವ ನೀಡಬೇಕು ಎಂಬ ನಿಯಮವಿದ್ದರೂ, ಅಲ್ಲಿರುವವರು ತಮಗೆ ಬೇಕಾದವರನ್ನು ಮಾತ್ರ ಸೇರಿಸಿಕೊಳ್ಳುತ್ತಿದ್ದಾರೆ ಮತ್ತು ಬೈಲಾ ಪಾಲನೆಯಾಗುತ್ತಿಲ್ಲ ಎಂದು ಅವರು ಆರೋಪಿಸಿದರು. “ದೇವಸ್ಥಾನದ ಸ್ಥಾಪಕ ಸಾಹುಕರ್ ಕೊರಗಪ್ಪ ಅವರ ಮೊಮ್ಮಗನೇ ಸಮಿತಿಯ ಅಧ್ಯಕ್ಷರಾಗಿದ್ದಾರೆ. 2025ರ ಜೂನ್ 20ರಂದು ನಡೆದ ಸಭೆಯಲ್ಲಿ ಕಾನೂನಾತ್ಮಕವಾಗಿಯೇ ಹೊಸ ಸಮಿತಿ ರಚಿಸಲಾಗಿದೆ. ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ಮಾತನಾಡಿರುವ ಇತರರ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ” ಎಂದು ಕ್ಷೇತ್ರದ ಕಾನೂನು ಸಲಹೆಗಾರ ಚಿದಾನಂದ ಕೆದಲಾಯ ತಿಳಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »