ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು
ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು
ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ
ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆರ್ಯ ಈಡಿಗ ಮಹಾಸಂಸ್ಥಾನ, ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಸಚಿವ ಸಂಪುಟವೂ ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಈ ಸಂದರ್ಭದಲ್ಲಿ ಹಿಂದುಳಿದ ಸಮುದಾಯಗಳ ಆಶೋತ್ತರಗಳಿಗೆ ಸ್ಪಂದಿಸಿ ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕೆಂದು ಮನವಿ ಮಾಡಿದರು. ಬಿ.ಕೆ. ಹರಿಪ್ರಸಾದ್ ಅವರು ಬಿಲ್ಲವ ಸಮಾಜದ ಹಿರಿಯ ನಾಯಕರು, ಅನುಭವಿ ರಾಜಕಾರಣಿಗಳು ಹಾಗೂ ಸಮರ್ಥ ಆಡಳಿತಗಾರರಾಗಿದ್ದಾರೆ. ರಾಜ್ಯಸಭಾ ಸದಸ್ಯರಾಗಿ ಮತ್ತು ವಿಧಾನ ಪರಿಷತ್ನ ವಿಪಕ್ಷ ನಾಯಕರಾಗಿ ಅವರು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನ್ಯಾಯ ಮತ್ತು ಜಾತ್ಯಾತೀತ ಮೌಲ್ಯಗಳ ಪರವಾಗಿ ಯಾವುದೇ ರಾಜಿಯಿಲ್ಲದೆ ಹೋರಾಟ ನಡೆಸಿರುವ ಅವರು ಸಮಾಜದ ವಿಶ್ವಾಸ ಗಳಿಸಿದ್ದಾರೆ ಎಂದು ಹೇಳಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್ ಪ್ರಮುಖರಾಗಿದ್ದು, ಅವರ ಸೇರ್ಪಡೆಯಿಂದ ಸಚಿವ ಸಂಪುಟ ಮತ್ತಷ್ಟು ಬಲಿಷ್ಠವಾಗಲಿದೆ ಎಂ






