TOP STORIES:

ಯುವಕರಿಗೆ ಸ್ಫೂರ್ತಿ, ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದವರು ತಮ್ಮಯರು: ಮಹಾಬಲೇಶ್ವರ ಹೆಬ್ಬಾರ್ ಬಂಟ್ವಾಳ ಯುವವಾಹಿನಿಯಿಂದ ಬಿ.ತಮ್ಮಯ ಸಂಸ್ಮರಣೆ


ಬಂಟ್ವಾಳ: ಕಂದಾಯ ಇಲಾಖೆಯ ಅಧಿಕಾರಿಯಾಗಿದ್ದು, ಸಾಹಿತ್ಯ, ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ, ಯುವವಾಹಿನಿಯನ್ನು ಬೆಳೆಸುವ ಮೂಲಕ ಬಿ.ತಮ್ಮಯರು ಯುವಕರಿಗೆ ಸ್ಫೂರ್ತಿದಾಯಕರಾಗಿ, ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದರು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಟಿ. ಹೆಬ್ಬಾರ್ ಹೇಳಿದರು.

ತುಳುಲಿಪಿ ಶಿಕ್ಷಕರಾಗಿ, ಸಾಹಿತ್ಯ, ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಯುವವಾಹಿನಿ ಬಂಟ್ವಾಳದ ಸ್ಥಾಪಕಾಧ್ಯಕ್ಷ ಬಿ.ತಮ್ಮಯ್ಯರ ಸಂಸ್ಮರಣಾ ಕಾರ್ಯಕ್ರಮವನ್ನು ಬಂಟ್ವಾಳ ಯುವವಾಹಿನಿ ಗುರುವಾರ ಸಂಜೆ ಯುವವಾಹಿನಿ ಸಭಾಭವನದಲ್ಲಿ ಆಯೋಜಿಸಿದ್ದು, ಈ ವೇಳೆ ತಮ್ಮಯರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ, ನುಡಿನಮನ ಸಲ್ಲಿಸಿದ ಹೆಬ್ಬಾರ್, ಅವರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು.

ಈ ವೇಳೆ ಮಾತನಾಡಿದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಸ್ಥಾಪಕ ಡಾ. ತುಕಾರಾಮ ಪೂಜಾರಿ, ತಮ್ಮಯರ ಜ್ಞಾನಸಂಪತ್ತು ಅಗಾಧ, ಅವರು ಸ್ನೇಹಜೀವಿಯಾಗಿದ್ದುಕೊಂಡು, ಇತಿಹಾಸದ ಕುರಿತು ಸಾಕಷ್ಟು ಅಧ್ಯಯನ ನಡೆಸಿದ್ದರು ಎಂದರು.
ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘದ ಅಧ್ಯಕ್ಷ ಲೋಕನಾಥ್ ಶೆಟ್ಟಿ, ದ.ಕ. ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಉಪಾಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಬಂಟ್ವಾಳ ತಾಲೂಕು ಕಂದಾಯ ನಿರಿಕ್ಷಕ ನವೀನ್ ಬೆಂಜನಪದವು ತಮ್ಮಯರ ನೆನಪುಗಳನ್ನು ಮೆಲುಕು ಹಾಕಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಬಿ.ಇಂದಿರೇಶ್ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಮಾಜಿ ಅಧ್ಯಕ್ಷ ಶ್ರೀಧರ ಅಮೀನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಅಧ್ಯಕ್ಷ ಲೋಕೇಶ ಸುವರ್ಣ ಅಲೆತ್ತೂರು ವಂದಿಸಿದರು.

ಕಾರ್ಯಕ್ರಮದಲ್ಲಿ ತಮ್ಮಯ ಅವರ ಪುತ್ರ ನಿಶಾಂತ್, ಬಂಟ್ವಾಳ ಗ್ಯಾರೇಜ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಬಿ, ಪಿಂಚಣಿದಾರರ ಸಂಘದ ಕಾರ್ಯದರ್ಶಿ ನೀಲೋಜಿ ರಾವ್, ಬಿ.ಸಿ.ರೋಡ್ ರಕ್ತೇಶ್ವರಿ ದೇವಿ ದೇವಸ್ಥಾನದ ಆಡಳಿತ ಸಮಿತಿಯ ಶಿವಶಂಕರ್, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಪುರುಷೋತ್ತಮ ಕಾಯರ್ ಪಲ್ಕೆ, ಸಲಹೆಗಾರರಾದ ಅಣ್ಣು ಪೂಜಾರಿ, ಪ್ರೇಮನಾಥ್ ಕೆ, ಬಂಟ್ವಾಳ ತಾಲೂಕು ಕಚೇರಿಯ ಜನಾರ್ಧನ್, ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಸಹಿತ ತಮ್ಮಯರ ಅಭಿಮಾನಿಗಳು ಉಪಸ್ಥಿತರಿದ್ದರು.
ರಾಜೇಶ್ ಸುವರ್ಣ ಸ್ವಾಗತಿಸಿದರು, ಯತೀಶ್ ಕಾರ್ಯಕ್ರಮ ನಿರ್ವಹಿಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »