TOP STORIES:

ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಪ.ಗೋ.ಪ್ರಶಸ್ತಿ ಪ್ರದಾನ


ಮಂಗಳೂರು: ಯಾವುದೇ ಆಮಿಷಕ್ಕೆ ಬಲಿಯಾಗದೇ ವಿಶ್ವಾಸರ್ಹತೆಯನ್ನು ಉಳಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹತೆಯೇ ಪತ್ರಕರ್ತರಿಗೆ ಜೀವಾಳ ಎಂದು ಮಂಗಳೂರು ವಿ.ವಿ.ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ. ಮಂಗಳೂರು ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ಪ.ಗೋ. ಪ್ರಶಸ್ತಿಯನ್ನು ಪತ್ರಕರ್ತ ಪ್ರದೀಶ್.ಎಚ್.ಮರೋಡಿ ಅವರಿಗೆ ಪ್ರದಾನ ಮಾಡಿ ಅವರು ಮಾತನಾಡಿದರು. ಪತ್ರಕರ್ತರು ಮಾಡುವ ಪ್ರತಿಯೊಂದು ವರದಿಗಳು ನಂಬಿಕೆ ಮತ್ತು ವಿಶ್ವಾಸದಿಂದ ಕೂಡಿರಬೇಕು. ಪ.ಗೊ ಅವರು ಪತ್ರಕರ್ತರಿಗೆ ಆದರ್ಶಪ್ರಾಯರಾಗಿದ್ದರು. ಅವರ ಹೆಸರಿನಲ್ಲಿ ನೀಡುವ ಈ ಪ್ರಶಸ್ತಿ ಗ್ರಾಮೀಣ ಬದುಕಿನ ಬಗ್ಗೆ ಕನ್ನಡಿ ಹಿಡಿಯಲು ಪತ್ರಕರ್ತರಿಗೆ ಪ್ರೇರಣೆಯಾಗಲಿ ಎಂದು ಆಶಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ವಿಭಿನ್ನವಾಗಿ ಮತ್ತು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಶ್ಲಾಘಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರದೀಶ್.ಎಚ್.ಮರೋಡಿ ಪ.ಗೋ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಪಡೆದಿರುವುದು ಜೀವನದ ಅವಿಸ್ಮರಣೀಯ ಕ್ಷಣ ಎಂದು ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರ ಶೇಖರಯ್ಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಚಂದ್ರಶೇಖರಯ್ಯ ಅವರು 50 ಸಾವಿರ ರೂ. ಹಸ್ತಾಂತರಿಸಿದರು. ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾದ ಪುತ್ತೂರು ಡಾ.ಶಿವರಾಮ ಕಾರಂತರ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ.ಸುಂದರ ಕೇನಾಜೆ, ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ. ಮಾತನಾಡಿದರು.

ಪದ್ಯಾಣ ಗೋಪಾಲಕೃಷ್ಣ ಅವರ ಪುತ್ರ ಪದ್ಯಾಣ ರಾಮಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಕಾರ್ಯಕಾರಿ ಸಮಿತಿ ಸದಸ್ಯೆ ಸತ್ಯವತಿ ಪ್ರಶಸ್ತಿ ವಿಜೇತರ ಪರಿಚಯ ಮಾಡಿದರು.ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್ ಕಾರ್ಯಕ್ರಮ ನಿರೂಪಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »