TOP STORIES:

ಕನಸಿನ ಮನೆ ನನಸಾಗಿಸಲು ಆಸರೆಯಾದ ಗುರು ಬೆಳದಿಂಗಳು


ಬಂಟ್ವಾಳ: ಮಂಗಳೂರಿನ ಗುರುಬೆಳದಿಂಗಳು ಸಂಸ್ಥೆಯ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪರಾರಿ ಎಂಬಲ್ಲಿ ನಿರ್ಮಾಣಗೊಂಡ ಚಿತ್ರಾಕ್ಷಿ ಅವರ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು.

ಪಣಂಬೂರು ಎಸಿಪಿ ಮಹೇಶ್ ಕುಮಾರ್ ಅವರು ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಲವಾರು ಗೃಹಪ್ರವೇಶಕ್ಕೆ ಹೋಗಿದ್ದೇನೆ. ಆದರೆ ಇದೊಂದು ಹೃದಯಸ್ಪರ್ಷಿ ಗೃಹಪ್ರವೇಶದ ಕಾರ್ಯಕ್ರಮ ಎಂದರು. ಯುವಕರ ತಂಡವನ್ನು ಕಟ್ಟಿಕೊಂಡು ಸಮಾಜಕ್ಕೆ ಆಸರೆಯಾಗುವಂತಹ ಕಾರ್ಯಕ್ರಮವನ್ನು ಗುರುಬೆಳದಿಂಗಳು ತಂಡ ಮಾಡುತ್ತಿದೆ. ಇಂತಹ ಸಂಘ ಸಂಸ್ಥೆಗಳ ಅಗತ್ಯತೆ ಸಮಾಜಕ್ಕೆ ಇದೆ.‌ ಇದು ಯುವ ಸಮುದಾಯಕ್ಕೆ ಮಾದರಿ ಎಂದು ತಿಳಿಸಿದರು.

ಗುರು ಬೆಳದಿಂಗಳು ಸಂಘಟನೆಯ ಅಧ್ಯಕ್ಷ ಪದ್ಮರಾಜ್ ಆರ್. ಅಧ್ಯಕ್ಷತೆ ವಹಿಸಿ ಮಾತನಾಡಿ ಗುರುಬೆಳದಿಂಗಳು ಸಂಘಟನೆಗೆ ಇಂತಹ ಸೇವಾ ಕಾರ್ಯಗಳನ್ನು ಮಾಡಲುವ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶ, ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಯವರು ಗೋಕರ್ಣ ಕ್ಷೇತ್ರದಲ್ಲಿ ಮಾಡಿದ ಜನಪರ ಕಾರ್ಯ ಪ್ರೇರಣೆ ನೀಡಿದೆ. ಬಡವರ ಕಣ್ಣೊರೆಸುವ ಕಾರ್ಯ ಆಗಬೇಕು ಎನ್ನುವ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ, ಆಸರೆ ಎನ್ನುವ ಧ್ಯೆಯೋದ್ದೇಶಗಳನ್ನಿಟ್ಟುಕೊಂಡು ಇಂತಹ ಸೇವಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಯುವಕರ ಪರಿಶ್ರಮದಿಂದ ಹಾಗೂ ಹಲವು ಮಂದಿ ದಾನಿ ಸಹಕಾರದಿಂದ ಮನೆ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.

ಗೋಕರ್ಣ ಕ್ಷೇತ್ರದ ಅಭಿವೃದ್ದಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ,  ಪನಮ ಗ್ರೂಪ್ ವಿವೇಕ್ ರಾಜ್ ಪೂಜಾರಿ, ಉದ್ಯಮಿ ಕಿಶೋರ್ ದಂಡಕೇರಿ, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ, ಮನಪಾ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಅನಿಲ್ ಕುಮಾರ್ ಪೂಜಾರಿ, ಪ್ರಮುಖರಾದ ವಿಷ್ಣುದಾಸ್ ಉಪಸ್ಥಿತರಿದ್ದರು.

ಸಂಚಾಲಕ ಸುನೀಲ್ ಕುಮಾರ್ ಬಜಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ‌ಕಾರ್ಯದರ್ಶಿ ರಾಜೇಶ್ ಸುವರ್ಣ ವಂದಿಸಿದರು.‌ ಮನೆ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »