TOP STORIES:

ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.


ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಸವೇಶ್ವರನಗರದ ಪಿವಿಪಿಸ್ಕೂಲ್ ನಲ್ಲಿ ತಾ.13 ನವೆಂಬರ್ 2021 ಶನಿವಾರದಂದು ಬೆಳಿಗ್ಗೆ 9.00 ರಿಂದ 1.00 ಗಂಟೆಯವರೆಗೆ ಬಹಳ ಅದ್ದೂರಿಯಾಗಿಆಚರಿಸಲಾಯಿತು.

ಮಕ್ಕಳೆಲ್ಲರೂ ಸೇರಿ ನಾಡಗೀತೆಯನ್ನು ಹಾಡಿ, ಶ್ರೀ ನಾರಾಯಣ ಗುರುಗಳ ಹಾಗೂ ನೆಹರೂ ಭಾವಚಿತ್ರಕ್ಕೆ ಪೂಜೆಯನ್ನುಸಲ್ಲಿಸುವುದರ ಮೂಲಕ ಆರಂಭವಾದ ಕಾರ್ಯಕ್ರಮವನ್ನು ಘಟಕದ ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ಶ್ರೀಮತಿ ಅನಿತಾಕಮಲಾಕ್ಷ  ಜೊತೆ ಕಾರ್ಯದರ್ಶಿ ಶ್ರೀಮತಿ ಅಕ್ಷತಾ ಸುಧೀರ್ ಇವರು ಮುನ್ನಡೆಸಿ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನುನಡೆಸಿಕೊಟ್ಟರು.

ಬಳಿಕ ಪ್ರೇರಕ ವಾಗ್ಮಿ ಶ್ರೀ ರಾಜೇಶ್ ಗೋಪೆ ಇವರು ಮಕ್ಕಳಿಗಾಗಿ ವಿವಿಧ ಪ್ರೇರೇಪಣಾ ಚಟುವಟಿಕೆಗಳನ್ನು ನಡೆಸಿ ಮಕ್ಕಳೊಂದಿಗೆಹಾಡಿ ಕುಣಿದರಲ್ಲದೆ ಮಕ್ಕಳೆಲ್ಲರನ್ನೂ ಧ್ಯಾನಾಸಕ್ತರನ್ನಾಗಿಸಿದರು.

11.30 ಸುಮಾರಿಗೆ ಸಭಾ ಕಾರ್ಯಕ್ರಮವು ಆರಂಭಗೊಂಡಿತು. ಪಿವಿಪಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಾಲೈವೇಣಿ ಅವರು ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದ ಉದ್ಘಾಟಕರಾದ ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ. ಅವರು ದೀಪಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ಕಾರಿ ಶಾಲೆಯಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನುನೆನಪಿಸಿಕೊಂಡು ಶಾಲಾಮಕ್ಕಳಿಗೆ ಉತ್ತಮ ನಡವಳಿಕೆಯ ಕಿವಿಮಾತುಗಳನ್ನಾಡಿದರು.

ಪಿವಿಪಿ ಶಾಲೆಯ ವಿದ್ಯಾಧಿಕಾರಿಗಳಾದ ಶ್ರೀ ಸೋಮಶೇಖರ್ ಅವರು ಮಾತನಾಡಿ ಯುವವಾಹಿನಿಯ ಸಮಾಜ ಸೇವಾಕಾರ್ಯಗಳನ್ನು ಶ್ಲಾಘಿಸಿದರು.

ಬಳಿಕ ಡಾ. ಉಷಾ ಮೋಹನ್ ಮತ್ತು ಬಿರುವೆರ್ ಕುಡ್ಲ ಮಂಗಳೂರು ಇವರ ಸಹಯೋಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಶೂವಿತರಣೆಯನ್ನು ಮಾಡಲಾಯಿತು.

ಮಕ್ಕಳಿಂದ ಹಾಗೂ  ಘಟಕದ ಸದಸ್ಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಕೂಡ ನಡೆಸಲಾಯಿತು.

ಅತಿಥಿಗಳಾಗಿ ಆಗಮಿಸಿದ ಬಿಗ್ ಬಾಸ್ ಸ್ಪರ್ಧಿಗಳಾದ ಶ್ರೀ ಧನರಾಜ್ ಮತ್ತು ಶ್ರೀ ಶಮಂತ್ ( ಬ್ರೋ ಗೌಡ) ಇವರು ಮಾತನಾಡಿಮಕ್ಕಳನ್ನು ಮನರಂಜಿಸಿದರು.

ಪತ್ರಕರ್ತರಾದ ಶ್ರೀ ನವೀನ್ ಸೂರಿಂಜೆ ಯವರು ಕೂಡ ಇಡೀ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಹಿತವಚನ ಗಳನ್ನಾಡಿದರು.

ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ನೆ ನರೇಂದ್ರಬಾಬು ಅವರು ಮುಖ್ಯ ಅತಿಥಿಯ ಭೂಮಿಕೆಯಲ್ಲಿ ಮಾತನಾಡಿ ಪಿವಿಪಿ ಶಾಲೆಯಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಸ್ಮರಿಸಿಕೊಂಡು, ಯುವವಾಹಿನಿ ಯಂತಹ ಸಂಘಟನೆಗಳುಇನ್ನೂ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ  ಬರಬೇಕೆಂದು ಪ್ರೇರೇಪಿಸಿದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷರು ನೆಲೆಯಲ್ಲಿ ಮಾತನಾಡಿದ ಶ್ರೀ ರಾಘವೇಂದ್ರ ಪೂಜಾರಿ ಅವರು ಮಕ್ಕಳ ದಿನಾಚರಣೆ ಕಾರ್ಯಕ್ರಮದಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಮರ್ಪಿಸಿದರು.

ಕಾರ್ಯಕ್ರಮದ ಗಣ್ಯ ಅತಿಥಿಗಳ ಸಾಲಿನಲ್ಲಿ ಶ್ರೀ ಪಿವಿಪಿ ಪಿಯು ಕಾಲೇಜಿನ ಪ್ರಾಂಶುಪಾಲರಾದ  ಶ್ರೀ ಪ್ರಕಾಶ್ ಎಸ್, ಯುವವಾಹಿನಿಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಅಶೋಕ್ ಕುಮಾರ್ ಪಡ್ಪು, ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಸುಧೀರ್ಪೂಜಾರಿ, ಹಾಗೂ ಯುವವಾಹಿನಿ ಬೆಂಗಳೂರು ಘಟಕದ ಸಲಹೆಗಾರರಾದ ಶ್ರೀ ರಘು ಮಟ್ಟು ಇನ್ನಿತರರು ಭಾಗವಹಿಸಿದ್ದರು.

ಎಲ್ಲಾ ಗಣ್ಯ ಅತಿಥಿಗಳಿಗೆ ಪುಸ್ತಕ ನೀಡುವ ಮೂಲಕ ಗೌರವಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿಗಳಾದ ಶ್ರೀ ಶಶಿಧರ ಕೋಟ್ಯಾನ್ ಇವರು ಮಕ್ಕಳಿಗೆ 1098 ಮಕ್ಕಳ ಸಹಾಯವಾಣಿಯಮಾಹಿತಿಯನ್ನು ಒದಗಿಸಿಕೊಟ್ಟು ನೆರೆದ ಅತಿಥಿಗಳಿಗೆ ಹಾಗೂ ಶಾಲೆಯ ಆಡಳಿತ ವರ್ಗ, ಶಿಕ್ಷಕ ವರ್ಗಕ್ಕೆ ಮತ್ತು ಮಕ್ಕಳಿಗೆ ಹೃತ್ಪೂರ್ವಕಧನ್ಯವಾದಗಳನ್ನು ಸಮರ್ಪಿಸಿದರು.

ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು,

ಯುವವಾಹಿನಿ (ರಿ)  ಬೆಂಗಳೂರು ಘಟಕ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »