ಮಂಗಳೂರು, ಉಡುಪಿ: ಕರಾವಳಿಯಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು, ನವೆಂಬರ್ 24 ರವರೆಗೆ ಅಧಿಕ ಮಳೆ ಸುರಿಯುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ನವಂಬರ್ 20ರಿಂದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ನ. 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ನವಂಬರ್ 21ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ದಾರಾವಾಡ, ಚಿಕ್ಕಮಂಗಳೂರು, ಕೊಪ್ಪಳ, ಬಳ್ಳಾರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.
ಈ ಬಾರಿಯ ಮಳೆಯಿಂದಾಗಿ ಅನೇಕ ಕಡೆ ಕೃಷಿಗೆ ಹಾನಿಯಾಗಿದ್ದು, ಜೊತೆಗೆ ಸಿಡಿಲು ಮಿಂಚಿನಿಂದ ಅನೇಕ ಕಡೆಗಳಲ್ಲಿ ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದೆ.