ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದ್ಯೆತಿ–ಕೋಟಿ ಚೆನ್ನಯ ಮೂಲಸ್ಥಾನದ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಪೀತಾಂಬರಹೇರಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಪೊಲೀಸ್ ಇಲಾಖೆಯ ನಿವೃತ್ತ ವರಿಷ್ಠಾಧಿಕಾರಿ ಯಾಗಿರುವ ಪೀತಾಂಬರ ಹೇರಾಜೆಯವರು ಕಳೆದ ಎರಡು ವರ್ಷಗಳ ಹಿಂದೆ ಗೆಜ್ಜೆಗಿರಿಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ನೇಮೋತ್ಸವ ಸಮಿತಿಯ ಅಧ್ಯಕ್ಷರಾಗಿ, ಕ್ಷೇತ್ರಾಡಳಿತ ಸಮಿತಿಯಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಇದೀಗ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ್ದಾರೆ. ಜೊತೆಗೆ ಮೂಲ್ಕಿರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾಗಿಯೂ ಪುನರಾಯೆಗೊಂಡಿದ್ದಾರೆ.
ಬೆಂಗಳೂರು ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷರಾಗಿ, ಎರಡು ಅವಧಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷರಾಗಿ, ಲಾಲ ಶ್ರೀ ಗುರುರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ, ಉಜಿರೆ ಶ್ರೀ ಧ.ಮಂ ಕಾಲೇಜಿನಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಹಲವಾರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿತೊಡಗಿಸಿಕೊಂಡಿದ್ದಾರೆ.