TOP STORIES:

FOLLOW US

ದಿಢೀರ್‌ ಕೋವಿಡ್‌ ಹೆಚ್ಚಳ : ಸಮಾರಂಭಗಳಿಗೆ ಏನಿದೆ ಹೊಸ ರೂಲ್ಸ್..?


ಬೆಂಗಳೂರು: ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೂ ಕೊರೊನಾ ಕಂಟಕ ಎದುರಾಗಿದೆ.‌ ಹಾಗಿದ್ದರೆ ಕೊರೊನಾ ನಡುವೆ ಸಮಾರಂಭಗಳನ್ನು ನಡೆಸುವುದಕ್ಕೂ ಹೊಸ ರೂಲ್ಸ್‌ ಗಳು ಅನ್ವಯವಾಗುತ್ತದೆ.

ಹಾಗಿದ್ದಾರೆ ಯಾವೆಲ್ಲ ಕಡೆಗಳಲ್ಲಿ ಎಷ್ಟ ಜನರು ಸೇರಬಹುದು ಇಲ್ಲಿದೆ ಮಾಹಿತಿ..

ಮದುವೆ ಸಮಾರಂಭಕ್ಕೂ ನಿರ್ಬಂಧ: ಹೊಸ ವರ್ಷದಲ್ಲಿ ಮದುವೆಯಾಗಬೇಕೆಂದುಕೊಂಡವರು ಈ ರೂಲ್ಸ್‌ ಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ. ಹೋರಾಂಗಣದಲ್ಲಿ ಆಗುವ ಮದುವೆಗಳಿಗೆ 200 ಜನರ ಮಿತಿಯನ್ನು ವಿಧಿಸಲಾಗಿದೆ. ಒಳಾಂಗಣದಲ್ಲಿ ನಡೆಯುವಂತಹ ಮದುವೆಗಳಿಗೆ 100 ಜನರ ಮಿತಿ ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಕೂಡಾ ಎರಡು ಡೋಸ್ ಕೋವಿಡ್‌ ಲಸಿಕೆ ಪೂರ್ಣಗೊಂಡಿರಬೇಕು ಎಂಬ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಲ್ಲಿ ಸದ್ಯ ಮದುವೆ ಸೀಜನ್ ಆರಂಭವಾಗುತ್ತಿದ್ದು, ಹೆಚ್ಚಿನ ಜನ ಸೇರುವುದರಿಂದ ಹೆಚ್ಚಿನ ಜನ ಸೇರುತ್ತಾರೆ.
ಈ ನಿಟ್ಟಿನಲ್ಲಿ ಮದುವೆಗಳ ಮೇಲೆ ಸರ್ಕಾರ ವಿಶೇಷ ನಿಗಾ ವಹಿಸಿ ನಿಯಂತ್ರಣಕ್ಕೆ ಸೂಚಿಸಿದೆ.

ದೇವಸ್ಥಾನಗಳಿಗೂ ನಿರ್ಬಂಧ:

ಇನ್ನು ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳು, ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಪೂಜೆ ಪುನಸ್ಕಾರ, ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ. ಅಲ್ಲಿನ ಸೇವೆಗಳು ಎಂದಿನಂತೆ ನಡೆಯುತ್ತವೆ. ಆದರೆ, ಭಕ್ತರ ಪ್ರವೇಶಕ್ಕೆ ಮಾತ್ರ ಮಿತಿ ಇರಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದರು.

ಜಾತ್ರೆಗಳನ್ನು ನಡೆಸುವಂತಿಲ್ಲ:

ಜಾತ್ರೆ ಮತ್ತು ಉತ್ಸವಗಳನ್ನು ನಡೆಸಲು ನಿರ್ಬಂಧ ವಿಧಿಸಲಾಗಿದೆ. ಹೆಚ್ಚಿನ ಜನಜಂಗುಳಿ ಸೇರುವಂತಹ ಜಾತ್ರೆ ಮತ್ತುಉತ್ಸವಗಳನ್ನು ಈ ಕೂಡಲೇ ರದ್ದು ಮಾಡುವಂತೆ ಎಲ್ಲ ಜಿಲ್ಲೆಗಳಿಗೂ ಸೂಚಿಸಲಾಗಿದೆ. ಕೇವಲ ಸಾಂಪ್ರದಾಯಿಕ ಆಚರಣೆಗಳು ಮಾತ್ರ ನಡೆಯಬಹುದು. ಆದರೆ, ಜನ ಗುಂಪಾಗಿ ಉತ್ಸವಗಳನ್ನು ನಡೆಸುವುದು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್‌ ಹರಡುವಿಕೆಯ ತೀವ್ರತೆ ಹೆಚ್ಚಾಗುತ್ತಿರೋದ್ರಿಂದ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು ಸಮಾರಂಭಗಳಲ್ಲೂ ಕೊರೊನಾ ಎಚ್ಚರಿಕೆ ಕ್ರಮಗಳನ್ನು ಪಾಲಿಸೋದು ನಿಮ್ಮ ಆರೋಗ್ಯ ದೃಷ್ಠಿಯಿಂದ ಪಾಲಿಸೋದು ಅತ್ಯಗತ್ಯ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »