ಕುಂದಾಪುರ: ಕುಂದಾಪುರ: ಗಣರಾಜ್ಯೋತ್ಸವ ಆಚರಣೆಗೆ ಕೇರಳ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ನಾರಾಯಣಗುರುಗಳಸ್ತಬ್ಧಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರದ ನಡೆ ಅತ್ಯಂತ ಖಂಡನೀಯ. ಸಾಮಾಜಿಕ ಸುಧಾರಣೆಯಕ್ರಾಂತಿಗೆ ಕಾರಣರಾದ ಈ ದೇಶ ಕಂಡ ಸರ್ವಶ್ರೇಷ್ಠ ಸಂತರ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‍ಗೆ ಕೇಂದ್ರ ಸರ್ಕಾರನಿರಾಕರಿಸಿರುವುದು ಇಡೀ ಹಿಂದುಳಿದ ಸಮಾಜಕ್ಕೆ ಮಾಡಿರುವ ಅವಮಾನ ಎಂದು ಬೈಂದೂರಿನ ಮಾಜಿ ಶಾಸಕ ಕೆ ಗೋಪಾಲಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಾನುವಾರ ಹೆಮ್ಮಾಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕೇರಳ ಸರ್ಕಾರನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರದರ್ಶನಕ್ಕೆ ಅನುಮತಿ ಕೋರಿ ಕೇಂದ್ರಕ್ಕೆ ಕಳುಹಿಸಿದ ಮನವಿಯನ್ನು ತಿರಸ್ಕರಿಸಿದೆ. ಈಗಾಗಲೇ ಮಾಡಿರುವ ನಿರಾಕರಣೆಯನ್ನು ಕೇಂದ್ರ ಸರ್ಕಾರ ವಾಪಾಸು ಪಡೆಯಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರುಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಹಿಂದೂಗಳ ಹೆಸರಿನಲ್ಲಿ ಅಧಿಕಾರದ ಗದ್ದುಗೆ ಏರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಕೇಂದ್ರ ಸರ್ಕಾರದ ಹಿಡನ್ ಅಜೆಂಡಾಇದೀಗ ಬಟಾಬಯಲಾಗಿದೆ. ಮಾನವರೆಲ್ಲರೂ ಒಂದೇ ಜಾತಿ ಒಂದೇ ಮತ ಎನ್ನುವ ಮೂಲಕ ಹಿಂದೂ ಧರ್ಮದ ಹುಳುಕುಗಳವಿರುದ್ದ ಜಾಗೃತಿ ಮೂಡಿಸಿ, ಶೋಷಿತ ಸಮುದಾಯದವರಿಗೂ ದೇವಾಲಯಗಳ ಪ್ರವೇಶದ ಹಕ್ಕಿದೆ ಎಂದು ಸಾಮಾಜಿಕ ನ್ಯಾಯದಮೂಲಕ ಹೊಸ ದಾರಿಯನ್ನು ತೋರಿಸಿಕೊಟ್ಟ ಕೇರಳದ ಸಾಮಾಜಿಕ ಕ್ರಾಂತಿಗೆ ಕಾರಣೀಕರ್ತರಾದ ನಾರಾಯಣ ಗುರುಗಳ ಸ್ತಬ್ಧಚಿತ್ರತಿರಸ್ಕಾರ ಮಾಡಿರುವುದು ಅಜಾÐನದ ಪರಮಾವಧಿ ಎಂದು ಕಟುವಾಗಿ ಟೀಕಿಸಿದ ಅವರು, ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡುನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‍ಗೆ ಅಂಗೀಕಾರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.