TOP STORIES:

ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಗೊಂದಲ ಸೃಷ್ಟಿಬೇಡ: ಬಿರುವೆರ್ ಕುಡ್ಲ ಮನವಿ


ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ ಎಂಬುದಾಗಿ ಬಿರುವೆರ್ ಕುಡ್ಲ ತಿಳಿಸಿದೆ.

ಶ್ರೀನಾರಾಯಣ ಗುರುಗಳು ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿನ ವಿರುದ್ಧ ಹೋರಾಟ ನಡೆಸಿದವರು. ಶ್ರೀ ಗುರುಗಳು ಸಮಾಜಕ ಸುಧಾರಕರಾಗಿ ಸಮಾಜದ ತಾರತಮ್ಯಗಳನ್ನು ನಿವಾರಿಸುವ ಜೊತೆಗೆ ಸಮಾಜದಲ್ಲಿ ಧರ್ಮ, ಅಧ್ಯಾತ್ಮ ಜಾಗೃತಿಯನ್ನೂ ಮೂಡಿಸಿದ ಮಹಾತ್ಮರು. ಗಣರಾಜ್ಯೋತ್ಸವಕ್ಕಾಗಿ ಕೇರಳ ಸರಕಾರ ಕಳುಹಿಸಿದ ಇವರ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂಬ ಆರೋಪದ ಮೂಲಕ ವಿವಾದ ಸೃಷ್ಟಿಸಿ ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕೆಂಬ ಉದ್ದೇಶದಿಂದ ಇರುವ ಪಕ್ಷಗಳು ಜನರ ಮನಸ್ಸಿನಲ್ಲಿ ಗೊಂದಲ ಉಂಟು ಮಾಡಲೆತ್ನಿಸುತ್ತಿರುವುದು ಖಂಡನೀಯ. ಸುಳ್ಳು ಪ್ರಚಾರದ ಮೂಲಕ ಜನರ ನಡುವೆ ಒಡಕುಂಟು ಮಾಡಲು ಮುಂದಾಗಿರುವುದು ಖೇದಕರ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದು, ಇಂತಹ ಹುನ್ನಾರಗಳ ವಿರುದ್ಧ ಜನತೆ ಎಚ್ಚರಿಕೆಯಿಂದ ಇರಬೇಕು.

ಗಣರಾಜ್ಯೋತ್ಸವ ದಿನದಂದು ದಿಲ್ಲಿಯ ರಾಜಪಥದಲ್ಲಿ ಸಾಗುವ ಟ್ಯಾಬ್ಲೆಗಳ ಆಯ್ಕೆಗಾಗಿ ಕೆಲವು ಮಾರ್ಗದರ್ಶಿ ಸೂತ್ರಗಳಿವೆ.ಕೇಂದ್ರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ನಿರ್ಲಕ್ಷ್ಯ ಮಾಡಿದೆ. ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನ: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ ಎಂಬುದು ವಾಸ್ತವ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಬ್ರಹಗಳ ಧೈಯ ವಾಕ್ಯವನ್ನು ಪರಿಪಾಲಿಸುವ ಅವರ ಮಾರ್ಗದರ್ಶನ ಅನುಸರಿಸುವ ನಾಯಕರಾಗಿದ್ದಾರೆ.

ಗಣರಾಜ್ಯೋತ್ಸವದಂದು ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರದ ಮೆರವಣಿಗೆಗೆ ನಮ್ಮೆಲ್ಲರ ಬೆಂಬಲವಿದೆ.ಈ ಮೂಲಕ ಶ್ರೀನಾರಾಯಣ ಗುರುಗಳ ಮೇಲೆ ಇಟ್ಟಿರುವ ಅಭಿಮಾನ, ಭಕ್ತಿ ಪ್ರಪಂಚಕ್ಕೆ ಮಾದರಿಯಾಗುವಂತೆ ಆಗಲಿ ಎಂಬುದಾಗಿ ನಮ್ಮ ಹಾರೈಕೆ.

ಸುದ್ದಿಗೋಷ್ಟಿಯಲ್ಲಿ ಬಿರುವೆರ್ ಕುಡ್ಲದ ಸಹನಾ ಕುಂದರ್, ವಿದ್ಯಾ ರಾಕೇಶ್, ರಾಕೇಶ್ ಸಾಲ್ಯಾನ್, ಲಕ್ಷ್ಮೀಶ್ ಸುವರ್ಣ, ಕಿಶೋರ್ ಬಾಬು, ಪ್ರಾಣೇಶ್ ಬಂಗೇರ, ಕಿರಣ್ , ರಕ್ಷಿತ್ ಸುವರ್ಣ ಉಪಸ್ಥಿತರಿದ್ದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »