TOP STORIES:

FOLLOW US

“ಕುಳಾಯಿ ಫೌಂಡೇಶನ್”ನಿಂದ 250 ಬಡಮಕ್ಕಳ ದತ್ತು ಸ್ವೀಕಾರ -ಪ್ರತಿಭಾ ಕುಳಾಯಿ


ಸುರತ್ಕಲ್: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ಧಿ ಧ್ಯೇಯವನ್ನಿಟ್ಟುಕೊಂಡು ಸ್ಥಾಪಿಸಿರುವಕುಳಾಯಿ ಫೌಂಡೇಶನ್ ಶೈಕ್ಷಣಿಕ ವರ್ಷದಲ್ಲಿ ಸುಮಾರು 250 ಮಂದಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ ಮಕ್ಕಳಸಂಪೂರ್ಣ ವಿದ್ಯಾಭ್ಯಾಸದ ಖರ್ಚು ವೆಚ್ಚ ನಿಭಾಯಿಸುವ ಜೊತೆಗೆ ಅವರನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದತ್ತು ಪಡೆಯುವ ಯೋಜನೆಹಾಕಿಕೊಂಡಿದೆ ಎಂದು ಫೌಂಡೇಶನ್ ಸ್ಥಾಪಕಿ ಪ್ರತಿಭಾ ಕುಳಾಯಿ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿಮಾತಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಿಕೊಂಡುಮುನ್ನಡೆಯುತ್ತಿರುವ ಫೌಂಡೇಶನ್ ಮೂಲಕ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು ಮಾತ್ರವಲ್ಲದೆ ಅವರಮುಂದಿನ ಉದ್ಯೋಗ ಭದ್ರತೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

2019ರಲ್ಲಿ ಸ್ಥಾಪನೆಯಾಗಿರುವ ಕುಳಾಯಿ ಫೌಂಡೇಶನ್ ಈಗಾಗಲೇ 131 ಮಂದಿ ಬಡಮಕ್ಕಳ ಶಿಕ್ಷಣಕ್ಕೆ ನೆರವು ನೀಡುತ್ತಾ ಬಂದಿದೆ. ಕಳೆದ ಎರಡು ವರ್ಷಗಳ ಕೊರೋನಾ ಹಾವಳಿ, ಲಾಕ್ ಡೌನ್ ಸಂದರ್ಭದಲ್ಲಿ ಮಂಗಳೂರಿನ ಹಂಪನಕಟ್ಟೆಯಲ್ಲಿ ಪ್ರತಿನಿತ್ಯ 250 ಮಂದಿ ಕೂಲಿ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಊಟ ನೀಡಿದ್ದಲ್ಲದೆ ಕಿಟ್ ಗಳನ್ನು ವಿತರಿಸಿ ಮಾನವೀಯತೆಯನ್ನು ಮೆರೆದಿದೆ. ಕುಳಾಯಿ ಫೌಂಡೇಶನ್ ವತಿಯಿಂದ ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳನ್ನು ದತ್ತು ಪಡೆದು ಆಂಗ್ಲಮಾಧ್ಯಮ ಕಲಿಕೆಗೆ ಒತ್ತುನೀಡುವ ಕಾರ್ಯಕ್ರಮ ರೂಪಿಸಲಾಗುವುದು ಅಲ್ಲದೆ ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕಾರ್ಯಕ್ರಮಆಯೋಜಿಸಲಾಗುವುದು ಎಂದರು.

ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಪ್ರಾರಂಭವಾಗಿದ್ದು ಫೀಸ್ ಕಟ್ಟಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ತಕ್ಷಣವೇ ಫೀಸ್ ಕಟ್ಟಲುಆರ್ಥಿಕವಾಗಿ ಸಹಾಯ ಮಾಡಲಾಗುವುದು, ಮುಖ್ಯವಾಗಿ ಪಿಯು, ಪದವಿ, ಡಿಪ್ಲೋಮ, ಐಟಿಐ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳುಇದರ ಸದುಪಯೋಗ ಪಡೆದುಕೊಳ್ಳಬೇಕು. ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು ಅಥವಾ ಫೋನ್ ನಂಬರ್ಸಂಪರ್ಕಿಸಲು ಕೋರಿದ್ದಾರೆ.

ಪ್ರತಿಭಾ ಕುಳಾಯಿ

ಕುಳಾಯಿ ಫೌಂಡೇಶನ್

ವಿ.ಟಿ. ರೋಡ್

ಕುಳಾಯಿ ಮಂಗಳೂರು

575019

ಮೊಬೈಲ್ ಸಂಖ್ಯೆ :9964756410


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »