TOP STORIES:

ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ನಿರಂತರ 18 ಗಂಟೆಗಳ ಪ್ರಯತ್ನದಲ್ಲಿ 900 ಕೆಜಿ ಧಾನ್ಯಗಳಿಂದ ಬೃಹತ್ ತಿರಂಗ ಸೃಷ್ಟಿ


ಮಂಗಳೂರು: ಬಾರಿ ನಾವು ದೇಶ ಸ್ವಾತಂತ್ರ್ಯ ಅಮೃತೋತ್ಸವದ ಸಡಗರದಲ್ಲಿದೆ. ಗಲ್ಲಿಗಲ್ಲಿಗಳಲ್ಲಿ ತಿರಂಗ ರಾರಾಜಿಸುತ್ತಿದೆ. ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ ಮೂಡಿರುವ 900 ಕೆಜಿ ಧಾನ್ಯಗಳ ಬೃಹತ್ ತಿರಂಗ ಭಕ್ತರಗಮನಸೆಳೆಯಿತು. ಬೃಹತ್ ತಿರಂಗ 38 ಫೀಟ್ ಅಗಲವನ್ನು ಹೊಂದಿದೆ. ತಲಾ 300 ಕೆಜಿ ಮಸ್ಸೂರು ದಾಲ್, ಸಬ್ಬಕ್ಕಿ, ಹೆಸರು ಕಾಳುಗಳನ್ನುಬಳಸಲಾಗಿದೆ. ಫೋಮ್ ನಲ್ಲಿ ರಚಿಸಿರುವ ಅಶೋಕ ಚಕ್ರ 8ಫೀಟ್ ಅಗಲವಿದೆ. ಅಲ್ಲದೆ ತಿರಂಗದ ಅಲಂಕಾರಕ್ಕೆ 54 ಕಲಶ, 138 ಬಾಳೆ ಎಲೆಯಲ್ಲಿ ಅಕ್ಕಿ ಎಳೆಯಡಿಕೆ, ಚೆಂಡು ಹೂಗಳನ್ನು ಬಳಸಲಾಗಿದೆ. ಜೊತೆಗೆ ಕ್ಯಾರೆಟ್, ಮೂಲಂಗಿ, ಬೆಂಡೆಯಿಂದ ಮಾಡಿರುವ75 ಅಕ್ಷರದಲ್ಲೂ ತಿರಂಗದ ಕಲ್ಪನೆಯನ್ನು ಮೂಡಿಸಲಾಗಿದೆ.ಫೋಟೋ ಜರ್ನಲಿಸ್ಟ್ ಸತೀಶ್ ಇರಾ ಅವರ ಪರಿಕಲ್ಪನೆ ಹಾಗೂ ಖ್ಯಾತ ಫೋಟೋ ಗ್ರಾಫರ್, ಕಲಾವಿದ ಪುನೀಕ್ ಶೆಟ್ಟಿಯವರಕೈಚಳದಲ್ಲಿ ಬೃಹತ್ ತಿರಂಗವು ಅದ್ಭುತವಾಗಿ ಮೂಡಿ ಬಂದಿದೆ. ಶ್ರೀಕ್ಷೇತ್ರದ ಗುರು ಬೆಳದಿಂಗಳು ಹಾಗೂ ಗೋಕರ್ಣನಾಥಸೇವಾದಳ ತಂಡ ಸಹಕರಿಸಿದೆ. .13 ಮಧ್ಯಾಹ್ನದಿಂದಲೇ ತಿರಂಗ ರಚನೆಗೆ ಸಾಮಾಗ್ರಿಗಳನ್ನು ಖರೀದಿಸಲಾಗಿದೆ. ರಾತ್ರಿ 9ರಿಂದತಿರಂಗದ ಸ್ಕೆಚ್ ತಯಾರಿಸಲಾಗಿದ್ದು, .14 ಬೆಳಗ್ಗೆ 11 ವೇಳೆಗೆ ತಿರಂಗ ಸಂಪೂರ್ಣಗೊಂಡಿದೆ. ಇಂದು ಬೆಳಗ್ಗೆ ಸ್ವಲ್ಪ ಮಳೆಬಂದರೂ ಅದೃಷ್ಟವಶಾತ್ ತಿರಂಗ ಹಾಳಾಗದಿರುವುದು ವಿಶೇಷವೆನಿಸಿದೆ. ಕೇಂದ್ರದ ಮಾಜಿ ಸಚಿವ, ಶ್ರೀಕ್ಷೇತ್ರ ಕುದ್ರೋಳಿಯಅಭಿವೃದ್ಧಿ ರೂವಾರಿ ಜನಾರ್ದನ ಪೂಜಾರಿಯವರು ಬೃಹತ್ ತಿರಂಗವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »