ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್

ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹರೇನ್ ನ ಉದ್ಯಮಿ, ಮೆಟಲ್ ಕೋ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ದ.ಕ. ಜಿಲ್ಲಾ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಅಬ್ದುಲ್ ರಜಾಕ್ ಕೋಟೆ ಹೆಜಮಾಡಿ, ಬಹರೖನ್ ಕನ್ನಡ ಸಂಘದ ಪೂರ್ವಾಧ್ಯಕ್ಷ ಆಸ್ಟಿನ್ ಸಂತೋಷ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. […]
ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್

ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ ಮುಖಂಡರು ಆಗ್ರಹಿಸಿದ್ದಾರೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಲ್ಲವ ಮುಖಂಡರು, ಸರಕಾರದ ಎಲ್ಲಾ ಮೀಸಲಾತಿ, ಸವಲತ್ತು ಸೌಲಭ್ಯಗಳು ಜನಸಂಖ್ಯೆಯ ಆಧಾರದ ಮೇಲೆಯೇ ನಿರ್ಧಾರ ಆಗುತ್ತದೆ. ನಮ್ಮ ಹೆಸರಿನ ಜೊತೆಗೆ ನಾವು ನಮ್ಮ ‘ಬರಿ’ ನಮೂದಿಸುವ ಪರಿಪಾಠ ಬೆಳೆಸಿಕೊಂಡಿದ್ದರೂ ಜಾತಿ ಎನ್ನುವ ಕಾಲಂನಲ್ಲಿ “ಬಿಲ್ಲವ” […]
ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ ಮತ್ತು ಸೇವಾ ಮನೋಭಾವಕ್ಕಾಗಿ ರಾಷ್ಟ್ರಪತಿಗಳ ಪ್ರತಿಭಾನ್ವಿತ ಸೇವಾ ಪ್ರಶಸ್ತಿಯನ್ನು ಪಡೆದಿದ್ದಾರೆ. ಇದು ಇಡೀ ಬಿಲ್ಲವ ಸಮುದಾಯಕ್ಕೆ ಸಂದ ಗೌರವ. ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದಲ್ಲಿ ಅವರ ನೈತಿಕತೆ, ವೃತ್ತಿಪರತೆ, ಪ್ರಾಮಾಣಿಕತೆ, ಧೈರ್ಯ ಮತ್ತು ಜನಸ್ನೇಹಿ ಕೆಲಸದ ಕಾರ್ಯ ಶೈಲಿಗಾಗಿ ಈಗಾಗಲೇ ಅನೇಕ ಸ್ಥಳಗಳಲ್ಲಿ […]
ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆಗಿ ನಿಯುಕ್ತಿ..

ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಭಡ್ತಿಗೊಳಿಸಿ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.ಪ್ರಸಕ್ತ ಹೊಸಕೋಟೆಯಲ್ಲಿ ಬೆಸ್ಕಾಂ ಜಾಗೃತ ದಳದಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ನೀಡಿ ಯಲಹಂಕಕ್ಕೆ ಕರ್ನಾಟಕ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆಗಿ ನಿಯುಕ್ತಿಗೊಳಿಸಿ ಸರಕಾರ ಆದೇಶಿಸಿದೆ. ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರು: 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ […]
ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್

ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿ ಅವರು ಭಾಜನರಾಗಿದ್ದಾರೆ. ಬೆಂಗಳೂರಿನ ಡಿ ಲಲಿತ್ ಅಶೋಕ್ ಹೊಟೇಲ್‌ನಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಮಾರಂಭದಲ್ಲಿ ವೈದ್ಯಲೋಕದಲ್ಲಿ ಸೇವೆ ಸಲ್ಲಿಸಿದ ಅಪ್ರತಿಮ ಸಾಧಕರಿಗೆ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ […]
ಆಕೆ ಪುಸ್ತಗಳನ್ನು ಓದುತ್ತಿದ್ದಳು, ಇನ್ನಿಲ್ಲದಂತೆ ಮಾಯವಾಗಿ ಬಿಟ್ಟಳು… ರಾಜಶ್ರೀ ಜಯರಾಜ್ ಪೂಜಾರಿ

ಸಾಧಕನಾಗಬೇಕಾದರೆ ಕೇವಲ ಕಠಿಣ ಪರಿಶ್ರಮವಿದ್ದರೆ ಸಾಲದು, ಅದರ ಜೊತೆಗೆ ತಾನು ಎಷ್ಟೇ ಎತ್ತರ ಬೆಳೆದರೂ ನಾನು, ನನ್ನದು ಎಂಬ ಅಹಂಭಾವ ಬಂದರೆ ಆತ ಎಂದಿಗೂ ಸಾಧಕನಾಗಲಾರ ಎಂಬ ಮಾತನ್ನು ತನ್ನ ಕಿರಿಯ ಪ್ರಾಯದಲ್ಲಿಯೇ ಜೀವನಕ್ಕೆ ಅಳವಡಿಸಿಕೊಂಡು, ತಾನು ಬೆಳೆಯುವುದಲ್ಲದೇ ಇತರ ಪ್ರತಿಭೆಗಳಿಗೂ ತನಗೆ ತಿಳಿದ ಕಡೆಯೆಲ್ಲಾ ಅವಕಾಶ ನೀಡಿಸುತ್ತಾ, ತಾನೆಷ್ಟೇ ಸಾಧನೆಯನ್ನು ಮಾಡಿದ್ದರೂ ಎಲ್ಲರೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡು, ನಗುಮೊಗದಿಂದ ಎಲ್ಲರಿಗೂ ಚಿರಪರಿಚಿತರಾಗಿರುವ, ಹವ್ಯಾಸದಲ್ಲಿ ಕವಯಿತ್ರಿ, ಬರಹಗಾರ್ತಿ, ಲೇಖಕಿ, ಯುವಸಾಹಿತಿ, ವಾಗ್ಮಿ, ನಿರೂಪಕಿ, ಕಥಾವಾಚಕಿ, ಹಿನ್ನೆಲೆ ಧ್ವನಿ […]
ಪುತ್ತೂರು: ಕೋಟಿ ಚೆನ್ನಯರ ಹುಟ್ಟೂರ ಗೆಜ್ಜೆಗಿರಿ ಮೂಲಸ್ಥಾನದ ಈ ಗ್ರಾಮದ ಶಾಲೆಯಲ್ಲಿ ಅಷ್ಟ ಅವಳಿ ಮಕ್ಕಳು

ಪುತ್ತೂರು: ಈ ಶಾಲಾ ವಠಾರದಲ್ಲಿ ಓಡಾಡಿದರೆ ತತ್‌ಕ್ಷಣ ನಿಮ್ಮ ಕಣ್ಣಿಗೆ ಆಗಾಗ ಒಬ್ಬರಂತೆಯೇ ಇರುವ ಇನ್ನೊಬ್ಬ ಮಕ್ಕಳು ಕಂಡರೆ ಅಚ್ಚರಿಪಡಬೇಡಿ. ಯಾಕೆಂದರೆ, ಈ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಎಂಟು ಅವಳಿಗಳು ಇದ್ದಾರೆ! ಕೆಲವು ದಿನಗಳ ಹಿಂದೆ ಎಣ್ಣೂರಿನ ಶಾಲೆಯಲ್ಲಿ ಪಂಚ ಅವಳಿಗಳಿರುವ ಸುದ್ದಿ ಸದ್ದು ಮಾಡಿತ್ತು. ಈಗ ಈಶ್ವರಮಂಗಲದ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ಅವಳಿಗಳ ಕಥೆ. ವಿಶೇಷವೆಂದರೆ ಎಣ್ಣೂರು ಮತ್ತು ಈ ಶಾಲೆ ಇರುವ ಊರು ಎರಡಕ್ಕೂ ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯ್ಯರ ನಂಟಿದೆ! ಅವಳಿ […]
ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್

ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು. ಬಾಸೆಲ್ ಮಿಶನ್ ವರದಿಯಲ್ಲಿ ದಾಖಲಾಗಿರುವ ಬಿಲ್ಲವರ ಕುರಿತು ಓದಿ ಆಸಕ್ತಿಯಿಂದ ಅಧ್ಯಯನವನ್ನು ನಡೆಸುತ್ತಿರುವೆ. ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಮಂಗಳೂರಿಗೆ ಭೇಟಿ ನೀಡುತ್ತಿದ್ದೇನೆ. ತಳಮಟ್ಟಕ್ಕೆ ತಳ್ಳಲ್ಪಟ್ಟ ಬಿಲ್ಲವ ಸಮಾಜವು ನಾರಾಯಣ ಗುರುಗಳ ಪ್ರೇರಣೆಯಿಂದ ಹೇಗೆ ಉನ್ನತಿಯನ್ನು ಕಂಡಿತು ಎಂದು ತಿಳಿಯುವುದು ನನ್ನ ಅಧ್ಯಯನದ […]
ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಜರುಗಿತು. ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಕೃತಿನ್ ದೀರಜ್ ಅಮೀನ್, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧಕ್ಷ ಬಿ.ಜಿ.ಸುವರ್ಣ, ಅಭಿವೃದ್ಧಿ […]