ಗೆಜ್ಜೆಗಿರಿ ನೂತನ ಪಧಾಧಿಕಾರಿಗಳ ಪದಗ್ರಹಣ
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ ಇವರ ನೇತೃತ್ವದ ಪಧಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗಿತು. ನೂತನ ಪಧಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ಆಡಳಿತ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರೂ ಹಾಗೂ ನೂತನ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಾದ ಪೀತಾಂಬರ ಹೆರಾಜೆಯವರು ತಮ್ಮ ಅವಧಿಯಲ್ಲಿ ಕ್ಷೇತ್ರಾಡಳಿತ ಸಮಿತಿಯು ಸತ್ಯ ನ್ಯಾಯ ಪ್ರಾಮಾಣಿಕತೆಯ ಮೂಲಕ ಸಮಾಜದ ಗೌರವಕ್ಕೆ ಯಾವುದೇ ಚ್ಯುತಿ ಬಾರದ ಹಾಗೆ ಕಾರ್ಯ ನಿರ್ವಹಿಸಿದ […]
ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ!
బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರಗಳು ಅಗ್ರ ಸ್ಥಾನದಲ್ಲಿ ಬರುತ್ತಾರೆ. ಶ್ರೀ ನಾರಾಯಣ ಗುರುಗಳು ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದರು ಎಂದು ಪೋಪ್ ಹೇಳಿದರು. ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ […]
ನಗರ ಪಾಲಿಕೆ ಪ್ರತಿಪಕ್ಷದ ನಾಯಕರಾಗಿ ಅನಿಲ್ ಕುಮಾರ್ ಆಯ್ಕೆ
ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷದ ನಾಯಕರಾಗಿ ನೂತನವಾಗಿ ಆಯ್ಕೆಯಾದ ಜನಪರ ನಿಲುವಿನ ರಾಜಕೀಯ ನಾಯಕ, ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನೆಯ ಪ್ರತಿಪಾದಕ, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿ ಪಂಜಿ ಮೊಗರು 12 ನೇ ವಾರ್ಡ್ ನ ಮ.ನ.ಪಾ ಸದಸ್ಯರಾದ ಅನಿಲ್ ಕುಮಾರ್ ಆಯ್ಕೆಯಾಗಿದ್ದಾರೆ.
ವಿಟ್ಲ :ಯುವವಾಹಿನಿ (ರಿ.)ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮರುವಾಳ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ (ರಿ.) ವಿಟ್ಲ ಘಟಕದ 2024 /25 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು. ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮರುವಾಳ, ಕಾರ್ಯದರ್ಶಿಯಾಗಿ ವಿನೋದ್ ಕುಮಾರ್ ಬೋಳಿಗದ್ದೆ ಆಯ್ಕೆಯಾಗಿದ್ದಾರೆ. 2024-25 ನೇ ಸಾಲಿನ ಪದಾಧಿಕಾರಿಗಳು: ಅಧ್ಯಕ್ಷರು- ಹರೀಶ್ ಪೂಜಾರಿ ಮರುವಾಳ ಒಂದನೇ ಉಪಾಧ್ಯಕ್ಷರು – ಕೆ ಟಿ ಆನಂದ ಎರಡನೇ ಉಪಾಧ್ಯಕ್ಷರು – ಯಶೋಧರ ಪಟ್ಲ ಕಾರ್ಯದರ್ಶಿ – ವಿನೋದ್ ಕುಮಾರ್ ಬೋಳಿಗದ್ದೆ ಜೊತೆ […]
ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ
ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್ ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ ಸಮಾಜಮುಖಿ ಕೆಲಸಗಳ ಪ್ರೇರಣೆಯಿಂದ ಬಿರುವೆರ್ ಕುಡ್ಲ ಸಂಘಟನೆಯ ಅನೇಕ ಶಾಖೆಗಳು ಈಗ ತುಳುನಾಡಿನಾದ್ಯಾಂತ ಕವಲೊಡೆದು ಅಶಕ್ತರಿಗೆ ನೇರವಾಗುತ್ತಾ ಬರುತ್ತಿವೆ. ಇಂತಹ ಶಾಖೆಗಳಲ್ಲಿ ಒಂದು ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ತಂಡ. ಕನಿಷ್ಠ ಪ್ರಮಾಣದ ಉತ್ಸಾಹಿ ಸದಸ್ಯರನ್ನು ಒಳಗೊಂಡ ತಂಡ ಆರಂಭವಾಗಿ […]
ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆ
ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಗೆಜ್ಜೆಗಿರಿಯ ಅಭಿವೃದ್ಧಿಯ ಆರಂಭದ ಕಾಲದಿಂದ ಭಕ್ತಿ ಭಾವದ ಧಾರ್ಮಿಕತೆಯ ಜೊತೆ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ ಕ್ರಿಯಾಶೀಲ ವ್ಯಕ್ತಿತ್ವದ ರವಿ ಪೂಜಾರಿ ಚಿಲಿಂಬಿ ಶ್ರೀ ಕ್ಷೇತ್ರದಲ್ಲಿ ಸಂಘಟನಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, […]
ನಿಜವಾದ ಸತ್ಯ ಮತ್ತು ಧರ್ಮದ ಮೇಲೆ ನಿಂತಿರುವ ಪವಿತ್ರ ನಾಡು ನಮ್ಮ ತುಳುನಾಡು….!!! ಇದು ಶ್ರೀ ಬೆಮ್ಮೆರೆ ಸತ್ಯ.
ತುಳುವರ ಸಭೆ ಸಮಾರಂಭಗಳಲ್ಲಿ ಕೈಗೆ ಮೈಕ್ ಸಿಕ್ಕ ಕೂಡಲೇ- ‘‘ನಮ್ಮದು ಪರಶುರಾಮ ಸೃಷ್ಟಿ’’ ಎಂದು ಹೇಳುತ್ತಲೇ ಭಾಷಣ ಶುರು ಮಾಡುವವರು ಹಲವರಿದ್ದಾರೆ. ಆದರೆ ಈ ಕಥೆಯನ್ನು ಅವರೆಂದೂ ವಿಶ್ಲೇಷಿಸಿರುವುದಿಲ್ಲ. ನಿಜವಾಗಿ ತುಳುನಾಡನ್ನು ಪರಶುರಾಮ ಸೃಷ್ಟಿಸಿದ್ದು ಎಂಬ ಪೌರಾಣಿಕ ಕಥೆಗೆ ಯಾವುದೇ ಐತಿಹಾಸಿಕ ಅಥವಾ ವೈಜ್ಞಾನಿಕ ಆಧಾರಗಳಿಲ್ಲ. ಕೇರಳದ ತ್ರಿವೇಂದ್ರಂನಿಂದ ಹಿಡಿದು ಗುಜರಾತ್‌ನ ಉಮರ್ಗಾಮ್‌ವರೆಗಿನ ನಮ್ಮ ಪಶ್ಚಿಮ ಕರಾವಳಿ ಸೃಷ್ಟಿಯಾಗಿದ್ದು, ಸುಮಾರು ನಾಲ್ಕರಿಂದ ಆರು ಕೋಟಿ ವರ್ಷಗಳ ಹಿಂದೆ, ಅದೂ ಆಫ್ರಿಕಾ ಖಂಡದಿಂದ ತುಂಡಾಗಿ ಸರಿದು ಬಂದ ಭೂಭಾಗವಿದು. […]
ಬೆಳ್ತಂಗಡಿ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಬೆಳ್ತಂಗಡಿ: ವಿಜಯವಾಣಿ, ಕರಾವಳಿ ಅಲೆ ,ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ […]
ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಹಾಗೂ ತಂಡದ ಬಲೆಗೆ ಬಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ
ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ 5 ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು ರೂ 5000 ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಹಿತೇಂದ್ರ ಭಂಡಾರಿಯವರ ದೂರಿನಂತೆ […]
ಮಂಗಳೂರು: ಮೈಸೂರಿನ ಮೂವರು ಯುವತಿಯರು ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಸಾವು
ಮಂಗಳೂರು, ನ.17: ಮೈಸೂರಿನ ಸೋಮೇಶ್ವರ ಉಚ್ಚಿಲದ ವಾ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಆಟವಾಡುತ್ತಿದ್ದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಮೈಸೂರಿನ ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತಾ ಎಂ ಡಿ (21), ಮೈಸೂರಿನ ಕೆ ಆರ್ ಮೊಹಲ್ಲಾದ ರಾಮಾನುಜ ರಸ್ತೆಯ ಪಾರ್ವತಿ ಎಸ್ (20) ಮತ್ತು ಮೈಸೂರಿನ ವಿಜಯನಗರದ ದೇವರಾಜ ಮೊಹಲ್ಲಾ ನಿವಾಸಿ ಕೀರ್ತನಾ ಎನ್ (21) ಎಂದು ಗುರುತಿಸಲಾಗಿದೆ.