TOP STORIES:

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ

ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman In Public Sector “ (WIPS) ಸಂಸ್ಥೆ ನೀಡುವ ರಾಷ್ಟ್ರ ಮಟ್ಟದ ಶ್ರೇಷ್ಠ ಮಹಿಳಾ ಉದ್ಯೋಗಿ ಪ್ರಶಸ್ತಿ ಯನ್ನು ಹೊಸದಿಲ್ಲಿ ವಿಜ್ಞಾನ ಭವನದಲ್ಲಿ ಇಂದು ನೀಡಲಾಯಿತು. ಈ ಶ್ರೇಷ್ಠ ಮಟ್ಟದ ಪ್ರಶಸ್ತಿ ಸ್ವೀಕರಿಸಿದ MRPL ಸಂಸ್ಥೆಯ ಮೊದಲ ಉದ್ಯೋಗಿಯು ಇವರಾಗಿರುವುದು ಮತ್ತಷ್ಟು ಹೆಮ್ಮೆ […]

ದಾಯ್ಜಿ ವರ್ಲ್ಡ್ ಛಾಯಾಗ್ರಾಹಕ ದಯಾನಂದ ಕುಕ್ಕಾಜೆಗೆ ‘ಡಬಲ್ ಪಿಕ್ಸೆಲ್ ಸಲೂನ್ 2025’ ನಲ್ಲಿ ರಾಷ್ಟ್ರೀಯ ಛಾಯಾಗ್ರಹಣ ಪ್ರಶಸ್ತಿ

ಮಂಗಳೂರು: ಖ್ಯಾತ ಫೋಟೋ ಜರ್ನಲಿಸ್ಟ್ ದಯಾನಂದ ಕುಮಾರ್ ಕುಕ್ಕಾಜೆ ಅವರಿಗೆ “ಡಬಲ್ ಪಿಕ್ಸೆಲ್ ನ್ಯಾಷನಲ್ ಸಲೂನ್ 2025” ಛಾಯಾಗ್ರಹಣ ಸ್ಪರ್ಧೆಯಲ್ಲಿ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.   ಫೊಟೋಜರ್ನಲಿಸಂ ವಿಭಾಗದಲ್ಲಿ ಹೆಲ್ಪ್ ಲೆಸ್ ಹ್ಯಾಂಡ್ ಶೀರ್ಷಿಕೆಯಡಿ ಸೆರೆ ಹಿಡಿದ ಛಾಯಾಗ್ರಹಣಕ್ಕೆ ಪಿ ಎಂ ಪಿ ಸಿಲ್ವರ್ ಅವಾರ್ಡ್ ಹಾಗೂ ಓಪನ್ ಮೊನೋಕ್ರೋಮ್ ವಿಭಾಗದಲ್ಲಿ ಬ್ರೈಟ್ ಪ್ಯೂಚರ್ ಶೀರ್ಷಿಕೆಯಡಿ ಸೆರೆಹಿಡಿದ ಛಾಯಾಗ್ರಹಣವು ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ. ಮಂಗಳೂರಿನ ಹಿರಿಯ ಛಾಯಾಗ್ರಾಹಕರಾದ ದಯಾನಂದ ಕುಕ್ಕಾಜೆ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಹಲವಾರು […]

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ ಗೊಳಿಸಲಾಯಿತು. ದೇಯಿ ಬೈದೆತಿ, ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು, ಸಮಾಜದ ಸಂಘಟನಾತ್ಮಕ ಅಭಿವೃದ್ಧಿ ಪರ ಕಾರ್ಯ ಯೋಜನೆಗಳ ಬಗ್ಗೆ ಮಹತ್ತರವಾದ ಬೆಳವಣಿಗೆಯ ಬಗ್ಗೆ ಸಂತಸ ವ್ಯಕ್ತಪಡಿಸಿ ವಿಶ್ವದ ಬಿಲ್ಲವರು ಸೇರಿ ಒಗ್ಗಟ್ಟಿನ ಮೂಲಕ […]

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ

ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.   ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಸಿಟಿವಿಎಸ್ ತಂಡ ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ 12 ವರ್ಷದ ಬಾಲಕನ ಕುತ್ತಿಗೆಯ ಮೂಲಕ ಎದೆಗೂಡಿಗೆ ಸೇರಿದ ತೆಂಗಿನಗರಿ ಹಾಗೂ ಬಾಲಕನ ಕುತ್ತಿಗೆಗೆ ಹಾಕಿಕೊಂಡಿದ್ದ ಚೈನ್ ಹೊರತೆಗೆಯುವ ಮೂಲಕ ಜೀವದಾನ ನೀಡಿರುವ ವೈದ್ಯರ ಸಾಧನೆಯನ್ನು ಗುರುತಿಸಿ ವೈದ್ಯರ […]

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ

ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ ಸಮಾಜದ ಐಕ್ಯತೆಗಾಗಿ  ಗೆಜ್ಜೆಗಿರಿ ಕ್ಷೇತ್ರದ ಮೂಲಕ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ ಹಾಗೂ ಕ್ಷೇತ್ರಾಡಳಿತ ಸಮಿತಿಗೆ ಶುಭ ಹಾರೈಸಿ ಗುರುದೇವರ  ಫೋಟೋ ನೀಡಿ ಅಭಿನಂದಿಸಿದರು. ಈ ಸಂಧರ್ಭದಲ್ಲಿ ಕಾರ್ಕಳ ತಾಲೂಕು ಬಿಲ್ಲವ ಸಂಘದ […]

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ

ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ. ಅದರಲ್ಲಿಯೂ ಚಳಿಗಾಲದ ಸಂದರ್ಭದಲ್ಲಿ ಇದರ ಸೇವನೆ ಮಾಡುವುದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ. ನಮ್ಮ ಸಾಂಪ್ರದಾಯಿಕ ಆಹಾರದಲ್ಲಿ ಹುರುಳಿಗೆ ವಿಶೇಷ ಸ್ಥಾನವಿದೆ. ನೀವು ಇದರಿಂದ ರುಚಿ ರುಚಿಯಾದ ಅಡುಗೆಗಳನ್ನು ತಯಾರಿಸಿರಬಹುದು. ಇವು […]

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ ಗೆಜ್ಜೆಗಿರಿ ಕ್ಷೇತ್ರದ ಧಾರ್ಮಿಕ ಹಿನ್ನಲೆ ಹಾಗೂ ವಿಶ್ವದ ಬಿಲ್ಲವರು ಒಗ್ಗಟ್ಟಿನ ಮೂಲಕ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಹಾಗೂ ಹೊರೆಕಾಣಿಕೆಯ ಇತಿಹಾಸ ನಿರ್ಮಾಣ ಮಾಡಿದ ಬಗ್ಗೆ ವಿವರಿಸಿ ಬಂಟ್ವಾಳ ತಾಲೂಕಿನ ಮೂಲಕ ಬಿಲ್ಲವ ಸಮಾಜ ಭಾಂಧವರು ಜಾತ್ರಾಮಹೋತ್ಸವದ ಯಶಸ್ವಿಗೆ […]

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ

ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್ ಕೊಡುಗೆ ಹೀಗೆ ಹಲವು ವಿಧಧಲ್ಲಿ ಆಸರೆಯಾಗುತ್ತಿರುವ ಉದಯ ಪೂಜಾರಿ ನೇತೃತ್ವದ ಬಿರುವೆರ್ ಕುಡ್ಲ ಇದೀಗ ಕಳೆದ ಮೂರ್ನಾಲ್ಕು ವರ್ಷದಿಂದ ಫುಡ್ ಫೆಸ್ಟ್ ನಲ್ಲಿ ಭಾಗವಹಿಸಿ ಉಳಿದ ಲಕ್ಷ ಲಕ್ಷ ಲಾಭದ ಹಣವನ್ನು ಸಮಾಜದ ಬಡ ವರ್ಗಕ್ಕೆ ಮೀಸಲಿಟ್ಟು ಅರ್ಹರಿಗೆ ವಿತರಿಸುತ್ತಾ ಬರುತ್ತಿದೆ. ಈ […]

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ ಭಾರತದ ನಾಗಾಸಾದು ಸನ್ಯಾಸಿ ಪರಂಪರೆಯಲ್ಲಿ ಅತ್ಯುನ್ನತ ಹುದ್ದೆಯಾದ ಮಹಾಮಂಡಲೇಶ್ವರ ಪದವಿಯನ್ನು ಜುನಾ ಅಖಾಡದ ಮೂಲಕ ಪಟ್ಟಾಭಿಷೇಕ ನೆರವೇರಿತು. ಧಾರ್ಮಿಕ ಕ್ಷೇತ್ರ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ ಮಹಾಪುರುಷರಿಗೆ ಈ ಪದವಿಯನ್ನು ಪ್ರದಾನ ಮಾಡುವುದು ಅಖಾಡದ ವಾಡಿಕೆಯಾಗಿದೆ. ಈ ಪದವಿಗೆ […]

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ

ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ. ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾಧ್ಯಮ ಶಾಲೆ ಹಾಗೂ ಆಳ್ವಾಸ್‌ […]