ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು.
ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ ಗೆಜ್ಜೆಗಿರಿ ಕ್ಷೇತ್ರದ ಧಾರ್ಮಿಕ ಹಿನ್ನಲೆ ಹಾಗೂ ವಿಶ್ವದ ಬಿಲ್ಲವರು ಒಗ್ಗಟ್ಟಿನ ಮೂಲಕ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಹಾಗೂ ಹೊರೆಕಾಣಿಕೆಯ ಇತಿಹಾಸ ನಿರ್ಮಾಣ ಮಾಡಿದ ಬಗ್ಗೆ ವಿವರಿಸಿ ಬಂಟ್ವಾಳ ತಾಲೂಕಿನ ಮೂಲಕ ಬಿಲ್ಲವ ಸಮಾಜ ಭಾಂಧವರು ಜಾತ್ರಾಮಹೋತ್ಸವದ ಯಶಸ್ವಿಗೆ ಸಂಪೂರ್ಣ ಸಹಕರಿಸುವಂತೆ ವಿನಂತಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಮ್ ಕೆ ಬಿ, ಕಾರ್ಯದರ್ಶಿ ಜಯವಿಕ್ರಂ, ಬೆಳ್ತಂಗಡಿ ಜಾತ್ರೋತ್ಸವ ಸಂಚಾಲಕರಾದ ಜಯರಾಂ ಬಂಗೇರ ಹೆರಾಜೆ , ಇವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್ ತುಂಬೆ, ಜತೆ ಕಾರ್ಯದರ್ಶಿ ರಾಜೇಶ್ ಸುವರ್ಣ, ಕೋಶಾಧಿಕಾರಿ ಆನಂದ ಸಾಲ್ಯಾನ್ ಶಂಬೂರು, ಆಂತರಿಕ ಲೆಕ್ಕ ಪರಿಶೋಧಕ ಹೇಮಂತ್ ಕುಮಾರ್, ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಸಜಿಪ ಮುನ್ನೂರು ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ ಬೇಬಿ ಕುಂದರ್, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.