ಮಂಗಳೂರು/ಬೆಂಗಳೂರು:
ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು.
ಸಾಮಾಜಿಕ, ಸಂಘಟನಾ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ತೋರಿದ ಸಾಧನೆ ಮತ್ತು ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ. ಈ ಪುರಸ್ಕಾರ ಯುವವಾಹಿನಿಗೆ ಹೆಮ್ಮೆಯ ವಿಷಯವಾಗಿದ್ದು, ಸಂಘಟನೆಯ ಮಹಿಳಾ ಶಕ್ತಿಗೆ ಸ್ಫೂರ್ತಿಯಾಗಿದೆ.
ಯುವವಾಹಿನಿ (ರಿ.) ಕೇಂದ್ರ ಸಮಿತಿಯು ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದೆ.

ಪ್ರಚಾರ ನಿರ್ದೇಶಕರು
ಯುವವಾಹಿನಿ (ರಿ) ಕೇಂದ್ರ ಸಮಿತಿ

