TOP STORIES:

ಮಾನ್ಯ ಸಂಸದರು ಶಾಸಕರುಗಳಿಗೆ. ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ :


ಮಾನ್ಯ ಸಂಸದರು ಶಾಸಕರುಗಳಿಗೆ.!

ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ.

✒️ ಪ್ರಶಾಂತ್ ಪೂಜಾರಿ ಮಸ್ಕತ್, ಪಜೀರ್

ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ನಿವೇದಿಸಿಕೊಳ್ಳುವುದೇನೆಂದರೆ ಸುಮಾರು ಐದು ಶತಮಾನಗಳ ಹಿಂದೆ ತುಳುನಾಡ ಮಣ್ಣಲ್ಲಿ ಅವತಾರ ತಾಳಿ ತಮ್ಮ ಜೀವಿತಾವಧಿಯ ಕಾಲದಲ್ಲಿಯೇ 66 ಗರಡಿ ಮತ್ತು 33 ತಾವು ಗಳನ್ನು ನಿರ್ಮಿಸಿ ಸತ್ಯ, ಧರ್ಮಕ್ಕಾಗಿ ಹೋರಾಡಿ ಅಮರರಾದ ಕಾಯ ಬಿಟ್ಟು ಮಹಾ ಶಕ್ತಿಗಳಾಗಿ ಬ್ರಹ್ಮೈಖ್ಯರಾದ ಕೋಟಿ ಚೆನ್ನಯರನ್ನು ಇಂದಿಗೂ ಕರ್ನಾಟಕದ ಕರಾವಳಿ ಭಾಗ, ಮಡಿಕೇರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ನೆರೆಯ ರಾಜ್ಯವಾದ ಮಹರಾಷ್ಟ್ರದ ಮುಂಬೈ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಸೇರಿದಂತೆ ವಿವಿಧ ಧರ್ಮದವರು ಸುಮಾರು 260 ಕ್ಕೂ ಹೆಚ್ಚು ಗರಡಿಗಳನ್ನು ನಿರ್ಮಿಸಿ ಕೋಟಿ ಚೆನ್ನಯರನ್ನು ಆರಾಧಿಸುತ್ತಿದ್ದು, ಸದರಿ ಗರಡಿಗಳಿಗೆ ಜಾತಿ ಭೇದ ಮರೆತು ಜಾತ್ರಮಹೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ನಾಡಿನಾದ್ಯಂತ ದೇಶ, ವಿದೇಶಗಳಲ್ಲಿ ಕೋಟ್ಯಾಂತರ ಭಕ್ತರಿರುತ್ತಾರೆ. ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕ್ಷೇತ್ರದ ವರ್ಷಂಪ್ರತಿ ಜಾತ್ರೆಗೆ ಜಾತಿ ಭೇದ ಮರೆತು ಲಕ್ಷಾಂತರ ಭಕ್ತರು ದೇಶ ವಿದೇಶಗಳಿಂದ ಆಗಮಿಸುವ ಭಕ್ತಜನ ಸಮೂಹವೇ ಇದಕ್ಕೆ ಸಾಕ್ಷಿಯಾಗಿರುತ್ತದೆ.

           ಪ್ರಸ್ತುತ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡುಮಲೆಯ ಗೆಜ್ಜೆಗಿರಿ ನಂದನ ಬಿತ್ತ್’ಲ್ ಎಂಬಲ್ಲಿ ಮೂಲಸ್ಥಾನ ಗರಡಿ 2020 ರ ಫೆಬ್ರುವರಿ 28 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವದೊಂದಿಗೆ ಲೋಕಾರ್ಪಣೆಗೊಂಡಿದೆ. ಈ ಕಾರ್ಯಕ್ರಮದಲ್ಲಿ 15 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದು ಇದು ತುಳುನಾಡಿನ ಇತಿಹಾಸ ಪುಟದಲ್ಲಿ ಚರಿತ್ರೆ ನಿರ್ಮಾಣ ಆಗಿತ್ತು. ಈ ಸಂದರ್ಭದಲ್ಲಿ ಅವರುಗಳ ಭಕ್ತಾದಿಗಳೆಲ್ಲರ ಅಭಿಲಾಷೆಯಂತೆ, ಸರ್ವ ಧರ್ಮೀಯರು ಆರಾಧಿಸುವ ಆರಾಧ್ಯ ಪುರುಷರು, ಅವಳಿ ವೀರರೆಂದು ವಿರಾಜಮಾನರಾಗಿರುವ ಕೋಟಿ ಚೆನ್ನಯರ ಹೆಸರು ವಿಶ್ವ ಮಟ್ಟದಲ್ಲಿ ಬೆಳಗುವಂತೆ ಮಾಡಲು ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ *”ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು”*  ಎಂಬ ಹೆಸರಿನಲ್ಲಿ ನಾಮಕರಣಗೊಳಿಸಿ ಆದೇಶ ಹೊರಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸುವಂತೆ ವಿನಯ ಪೂರ್ವಕವಾಗಿ ವಿನಂತಿಸುತ್ತೇವೆ.

ನಾಲ್ಕು ವರ್ಷಗಳ ಹಿಂದೆ…

ಗಮನಕ್ಕೆ :-1, ಬಜಪೆ ವಿಮಾನ ನಿಲ್ದಾಣದ ಸ್ಥಳೀಯ ಮಳವೂರು ಗ್ರಾಮ ಪಂಚಾಯತ್ ನ ನಿರ್ಣಯ ಪ್ರತಿಯನ್ನು ಲಗತ್ತಿಸಲಾಗಿದೆ.

2, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡು ಪ್ರಸ್ತಾವಣೆಯು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ..

ಆದುದರಿಂದ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಿಗೆ ತಾವುಗಳು ಶ್ರೀ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಇದೇ ಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಶಿಫಾರಸು ಮಾಡುವ ನಿರ್ಧಾರವನ್ನು ಕೈಗೊಳ್ಳುವಂತೆ ಮನವಿ..


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »