ಉಡುಪಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉಡುಪಿಯ ನೇಜಾರಿನ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಬೇಧಿಸಿದ ಪೊಲೀಸರಿಗೆ 1.42 ಲಕ್ಷ ರೂಪಾಯಿ ನಗದು ಬಹುಮಾನವನ್ನು ಮಂಜೂರು ಮಾಡಲಾಗಿದೆ.
ಪ್ರಕರಣದ ಆರೋಪಿ ಪ್ರವೀಣ್ ಚೌಗುಳೆಯನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಶ್ರಮಿಸಿದ ಉಡುಪಿ, ಮಂಗಳೂರು ಹಾಗೂ ಬೆಳಗಾವಿಯ ಒಟ್ಟು 41 ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ 1,42,500 ರೂಪಾಯಿಯನ್ನು ಬಹುಮಾನವಾಗಿ ಐಜಿಪಿ ಚಂದ್ರಗುಪ್ತ ಅವರ ಶಿಫಾರಸ್ಸಿನಂತೆ ಡಿಜಿಪಿ ಅಲೋಕ್ ಮೋಹನ್ ಅವರು ಮಂಜೂರು ಮಾಡಿದ್ದಾರೆ. ಆರೋಪಿಯ ಚಹರೆ ಪತ್ತೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಈ ಹಿಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತಿದ್ದು ಪ್ರಸ್ತುತ ಆಂತರಿಕ ಭದ್ರತೆ ಇಲಾಖೆಯಲ್ಲಿ ಕರ್ತವ್ಯದಲ್ಲಿರುವ ಎಎಸ್ ಐ ಗೋಪಾಲಕೃಷ್ಣ ಅವರಿಗೆ 2500 ರೂಪಾಯಿ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಲಾಗಿದೆ.