ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ
ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ದಿನಾಂಕ 30-08-2025 ರಂದು ಜರುಗಿದ ಜಿಲ್ಲಾಮಟ್ಟದ ಪದವಿ ಪೂರ್ವ ಬಾಲಕಿಯರ ಕುಸ್ತಿ ವಿಭಾಗದಲ್ಲಿ
ಬಾರ್ಕೂರು ನಾಗರ ಮಠ ಶ್ರೀ ವಿದ್ಯಾ ಗಣಪತಿ ಆಗ್ರೋ ಇಂಡಸ್ಟ್ರೀಸ್ (ಪರಿಶುದ್ಧ ಬಾರ್ಕೂರು ಬೆಲ್ಲ ) ಇದರ ಮಾಲೀಕರಾದ
ಶ್ರೀ ಗಣೇಶ್ ಪೂಜಾರಿ ಮತ್ತು ಶ್ರೀಮತಿ ಶಿಲ್ಪಾ ಗಣೇಶ್ ಪೂಜಾರಿ ದಂಪತಿಗಳ ಪುತ್ರಿ ಪ್ರಸ್ತುತ ಬ್ರಹ್ಮಾವರ ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿಯವರು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ*
ಜಿಲ್ಲಾಡಳಿತ & ಜಿಲ್ಲಾ ಪಂಚಾಯತ್ ಉಡುಪಿ ತಾಲೂಕು ಪಂಚಾಯತ್ ಉಡುಪಿ, ಯುವ ಸಬಲೀಕರಣ,ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕುಸ್ತಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ ಹಾಗೂಧನ್ವಿತಾ ಪೂಜಾರಿಯವರ ನೇತ್ರತ್ವದ ಬ್ರಹ್ಮಾವರ ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜು ಮಹಿಳಾ ತಂಡ ತ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತದೆ
ಅಭಿನಂದನೆಗಳು, ಕುಮಾರಿ ಧನ್ವಿತಾ ಮತ್ತು ತಂಡಕ್ಕೆ ಮುಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ನಿಮಗೆ ಇನ್ನಷ್ಟು ಹೆಚ್ಚಿನ ಯಶಸ್ಸು ಸಿಗಲಿ ಎಂದು ಶುಭ ಹಾರೈಸುತ್ತೇವೆ

