TOP STORIES:

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ.

ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು ನಿವಾಸಿ, ಎಂಜಿಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿನಿ ಛಾಯಾ ಕರಾಟೆಯಲ್ಲಿ ರಾಷ್ಟ್ರಮಟ್ಟದ ಸಾಧಕಿಯಾಗಿದ್ದು, ಪ್ರಸ್ತುತ ಖೇಲೋ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮೇಘಾ ಲಯದ ಶಿಲ್ಲಾಂಗ್‌ನಲ್ಲಿಭಾರತೀಯ ಕ್ರೀಡಾ ಪ್ರಾಧಿಕಾರ ಆಯೋಜಿಸಿದ್ದ ರಾಷ್ಟ್ರೀಯ ಕರಾಟೆ ತಂಡದ ಆಯ್ಕೆ ಶಿಬಿರದಲ್ಲಿ 68 ಕೆಜಿ ಕುಮಿಟೆ ವಿಭಾ ಗದಲ್ಲಿ ಟಾಪ್ 4 ಕ್ರೀಡಾಪಟುಗಳಲ್ಲಿ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಉಡುಪಿ ಜಿಲ್ಲೆಯ ಮೊದಲ ಕ್ರೀಡಾ ಪಟು ಎಂಬ ಹೆಗ್ಗಳಿಕೆ ಇವರದ್ದು. ಈ ಸಾಧನೆಯು ಅವರು ಮುಂಬರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಸಾಧ್ಯತೆ ಹೆಚ್ಚಿಸಿದೆ.

2015ರಿಂದ ಕರಾಟೆಯಲ್ಲಿ ತೊಡಗಿಸಿಕೊಂಡಿರುವ ಒಂದೊಂದೇ ಮೆಟ್ಟಿಲನ್ನು ಏರುತ್ತಾ ಮುನ್ನಡೆಯುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ 66 ಚಿನ್ನದ ಪದಕಗಳು, 30 ಬೆಳ್ಳಿಯ ಪದಕಗಳು ಮತ್ತು 1 ಕಂಚಿನ ಪದಕ ಗಳಿಸಿ ತನ್ನ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. 14 ಬಾರಿ ಗ್ರಾಂಡ್ ಚಾಂಪಿಯನ್ ಪ್ರಶಸ್ತಿ, ಭಾರತೀಯ ಶಾಲಾ ಕ್ರೀಡಾಕೂಟದಲ್ಲಿ 3 ಬಾರಿ ಪ್ರಥಮ ಸ್ಥಾನ, ಕರಾಟೆ ಅಸೋಸಿಯೇಶನ್‌ ಆಫ್ ಇಂಡಿಯಾ ಆಯೋಜಿಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ 4 ಚಿನ್ನದ ಪದಕಗಳು ಮತ್ತು ರಾಷ್ಟ್ರಮಟ್ಟದಲ್ಲಿ 1 ಕಂಚಿನ ಪದಕ ಇವರ ಖಾತೆಯಲ್ಲಿವೆ. ಮಂಗಳೂರು ವಿವಿ ಅಂತರ್‌ಕಾಲೇಜು ಕ್ರೀಡಾಕೂಟದಲ್ಲಿ 2 ಬಾರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

2024-25ರಲ್ಲಿ ಹರಿಯಾಣದಲ್ಲಿ ನಡೆದ ಅಖಿಲ ಭಾರತ ಅಂತರ್ ವಿವಿ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದಿದ್ದರು. ಈ ಸಾಧನೆಗಾಗಿ ಹುಟ್ಟೂರಿನಲ್ಲಿ ಸ್ವಾಗತ, ಸಾರ್ವಜನಿಕ ಸಮ್ಮಾನವೂ ಸಂದಿದೆ.

ಪ್ರವೀಣಾ ಸುವರ್ಣ ನೇತೃತ್ವದ ಪಿಕೆಸಿ ಕರಾಟೆ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಅವರು ಹೆರ್ಗದ  ಕಾಂತಾ ಬೆಟ್ಟು ಕೋಟಿ ಪೂಜಾರಿ ಮೊಮ್ಮಗಳು ಮತ್ತು ಸದಾನಂದ ಪೂಜಾರಿ ಸುನೀತಾ ದಂಪತಿಯ ಪುತ್ರಿ.


Related Posts

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »