TOP STORIES:

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.

ಜೇಸಿ ಸಂಸ್ಥೆಯ ರಾಷ್ಟ್ರೀಯ ತರಬೇತುದಾರರಾಗಿರುವ ಸುಧಾಕರ್ ಪೂಜಾರಿ ಅವರು ದೇಶದ ವಿವಿಧ ಭಾಗಗಳಲ್ಲಿ ಸಾವಿರಕ್ಕೂ ಹೆಚ್ಚು ತರಬೇತಿಗಳನ್ನು ನೀಡಿದ್ದು, ತಮ್ಮದೇ ಅನುಭವದ ಆಧಾರದಲ್ಲಿ ಪಠ್ಯಕ್ರಮಗಳನ್ನು ತಯಾರಿಸಿ ಉದ್ಯಮಿಗಳಿಗೆ ತರಬೇತಿ ನೀಡಿ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ಈ ಹಿಂದೆ ಪಡೆದಿರುವ ಇವರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸಂಸ್ಥೆಯ ತರಬೇತುದಾರರಿಗೆ ವಿಶೇಷ ತರಬೇತಿ ಪಠ್ಯವನ್ನು ತಯಾರಿಸಿ ತರಬೇತಿಯನ್ನು ಕೂಡ ನೀಡಿರುವುದು ವಿಶೇಷವಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್‌ನ ರಾಷ್ಟ್ರೀಯ ಸಮ್ಮೇಳನದಲ್ಲಿ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ಪಿಪಿಎಫ್ ಎಂ.ಆರ್. ಜಯೇಶ ಅವರು ಸುಧಾಕರ್ ಪೂಜಾರಿ ಅವರಿಗೆ “ಐಕಾನಿಕ್ ಟ್ರೈನರ್” ಗೌರವ ಪದವಿಯನ್ನು ಪ್ರದಾನಿಸಿದರು.

ಈ ಸಂದರ್ಭದಲ್ಲಿ ಸೀನಿಯರ್ ಚಿತ್ರಕುಮಾರ್ ಹಾಗೂ ಸೀನಿಯರ್ ಡಾ. ಶಿವಕುಮಾರ್ ಉಪಸ್ಥಿತರಿದ್ದರು.

JC Sudhakar karkala

#ಟೈಮ್ಸ್ ಆಫ್ ಕಾರ್ಕಳ Times of Karkala


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »