TOP STORIES:

ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರಿಡಲು ಮನವಿ


ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ ಸಂಘದ ವಾಣಿಜ್ಯ ಸಂಕೀರ್ಣದ ರೂವಾರಿ; ಸಂಘದ ಗೌರವಾದ್ಯಕ್ಷರಾಗಿದ್ದ ವಸಂತ ಬಂಗೇರರ ಹೆಸರಿನಲ್ಲಿ ಬೆಳ್ತಂಗಡಿ ಪೇಟೆಯ ಹೆದ್ದಾರಿಯ ಮುಖ್ಯ ವೃತ್ತದಲ್ಲಿ ಬಂಗೇರರ ಕಂಚಿನ ಪುತ್ಥಳಿ ನಿರ್ಮಿಸಲು ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣವಾಗುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರು ಇಡುವಂತೆ ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲು ಮೇ 11ರಂದು ನಡೆದ ಸಂಘದ ಮಾಸಿಕ ಸಭೆಯಲ್ಲಿ ಸರ್ವಾನುಮತದ ನಿರ್ಣಯಿಸಲಾಯಿತು. ಸಭೆಯಲ್ಲಿ ವಸಂತ ಬಂಗೇರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೇಶ್ ಎಚ್. ಕೋಟ್ಯಾನ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಜೊತೆ ಕಾರ್ಯದರ್ಶಿ ಸಂತೋಷ್ ಉಪ್ಪಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್, ಮಾಜಿ ಅಧ್ಯಕ್ಷರುಗಳಾದ ಪಿತಾಂಬರ ಹೆರಾಜೆ, ಯೋಗೀಶ್ ಕುಮಾರ್ ನಡಕ್ಕರ, ಚಿದಾನಂದ ಪೂಜಾರಿ, ಜಯರಾಮ ಬಂಗೇರ, ಮಾಜಿ ಉಪಾಧ್ಯಕ್ಷ ಮನೋಹರ ಕುಮಾರ್, ನಿರ್ದೇಶಕರುಗಳಾದ ಸಂಜೀವ ಪೂಜಾರಿ, ಜಯ ಕುಮಾರ್, ಉಷಾ ಶರತ್, ವಿನೋದಿನಿ ರಾಮಪ್ಪ, ರಾಜಶ್ರೀ ರಮಣ್, ಪ್ರಮೋದ್ ಮಚ್ಚಿನ, ರಾಜೀವ ಸಾಲಿಯಾನ್, ರವೀಂದ್ರ ಬಿ. ಅಮೀನ್, ನಾರಾಯಣ ಪೂಜಾರಿ, ವಿಶ್ವನಾಥ ಸಾಲಿಯಾನ್ , ಚಂದ್ರಶೇಖರ ಮತ್ತು ಕಮಲಾಕ್ಷ, ಸುಚೇತ್ ಸಾಲಿಯಾನ್ ಮುಂತಾದವರು ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »