ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ. ಕೋಟ ಶ್ರೀನಿವಾಸ ಪೂಜಾರಿ ಅವರ ಮಾತೃಶ್ರೀ ಶ್ರೀಮತಿ ಲಚ್ಚಿ ಪೂಜಾರಿ ಅವರು ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ. ವಯೋ ಸಹಜ ಕಾರಣದಿಂದಾಗಿ ಸುಮಾರು 95 ವರ್ಷ ವಯಸ್ಸಿನ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ ಇಂದು ಇಹಲೋಕ ತ್ಯಜಿಸಿದ್ದಾರೆ.