TOP STORIES:

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?


ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ ಆಷಾಢ ಮಾಸವು ಜುಲೈ 6 ರಂದು ಪ್ರಾರಂಭವಾಗಿ ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಆಂಧ್ರ ಪ್ರದೇಶದಲ್ಲಿ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಕೂಡ ಜೊತೆಯಾಗಿರಬಾರದು ಎನ್ನಲಾಗುತ್ತದೆ

ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಏಪ್ರಿಲ್ ತಿಂಗಳಿನಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು ಎನ್ನುವ ವೈಜ್ಞಾನಿಕ ಕಾರಣವು ಇದೆ.

ಅಷ್ಟೇ ಅಲ್ಲದೇ ಈ ಆಷಾಢ ತಿಂಗಳಿನಲ್ಲಿ ರೈತಾಪಿ ವರ್ಗಕ್ಕೆ ಕೆಲಸಗಳು ಸ್ವಲ್ಪ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಜೊತೆಗಿದ್ದರೆ, ಪತಿಯು ಪತ್ನಿಯ ಜೊತೆಗೆ ಸಮಯ ಕಳೆಯಬಹುದು. ಹೀಗಾದಾಗ ಕೃಷಿ ಕೆಲಸಗಳು ಪೂರ್ಣಗೊಳ್ಳದೇ ಇರಬಹುದು. ಆತನು ಸಂಪೂರ್ಣವಾಗಿ ಕೆಲಸದಲ್ಲಿ ತೊಡಗಿಕೊಳ್ಳಲಿ ಎನ್ನುವ ಕಾರಣಕ್ಕೆ ಆಷಾಢದಲ್ಲಿ ತವರಿಗೆ ಹೆಣ್ಣು ಮಕ್ಕಳನ್ನು ಕಳುಹಿಸಿಕೊಡುತ್ತಾರೆ.

ದೂರವಿರುವ ಅತ್ತೆ ಸೊಸೆ ನಡುವೆ ಪ್ರೀತಿ ಹೆಚ್ಚುತ್ತೆ

ಇನ್ನೊಂದು ನಂಬಿಕೆಯ ಪ್ರಕಾರ ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ತನ್ನ ಅತ್ತೆಯೊಂದಿಗಿದ್ದರೆ ಜಗಳಗಳು ಉಂಟಾಗುತ್ತದೆ. ಹೀಗಾಗಿ ಸೊಸೆಯನ್ನು ಒಂದು ತಿಂಗಳ ಕಾಲ ತವರು ಮನೆಗೆ ಕಳುಹಿಸಲಾಗುತ್ತದೆ. ಇಬ್ಬರೂ ದೂರವಿದ್ದರೆ ಅತ್ತೆ ಸೊಸೆಯ ನಡುವೆ ಪ್ರೀತಿ ಕಾಳಜಿಯು ಹೆಚ್ಚುತ್ತದೆ. ಅದಲ್ಲದೇ ತಾಯಿ ಮಗಳು ಸಂಬಂಧವು ಗಟ್ಟಿಯಾಗುತ್ತದೆ ಎನ್ನಲಾಗಿದೆ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »