ನಮ್ಮ ಕುಡ್ಲ ವಾಹಿನಿ ಆಯೋಜಿಸಿದ್ದ 25ನೇ ವರ್ಷದ ಗೂಡುದೀಪ ಸ್ಪರ್ಧೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಕುದ್ರೋಳಿ ಕ್ಷೇತ್ರದ ನವೀಕರಣ ರೂವಾರಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಹಾಗೂ ಅವರ ಧರ್ಮಪತ್ನಿ ಮಾಲತಿ ಜೆ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಗೂಡುದೀಪ ಸ್ಪರ್ಧೆಯನ್ನು ಉದ್ಘಾಟಿಸಿದ್ದಾರೆ. ಗೂಡುದೀಪವನ್ನು ಏರಿಸಿ ದೀಪ ಉರಿಸುವ ಮೂಲಕ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅವರು ಚಾಲನೆ ನೀಡಿದ್ದಾರೆ.
ದೀಪಾವಳಿಯ ಸಂದೇಶ ನೀಡಿದ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್, ನಮ್ಮಕುಡ್ಲ ವಾಹಿನಿ 25 ವರ್ಷದಿಂದ ಗೂಡುದೀಪ ಸ್ಪರ್ಧೆ ಆಯೋಜಿಸಿದ ಕಾರಣ ಇಂದಿಗೂ ಗೂಡುದೀಪದ ಬಗ್ಗೆ ಜನರಲ್ಲಿ ಆಸಕ್ತಿಯನ್ನು ಉಳಿಸುವಲ್ಲಿ ಯಶಸ್ವಿಯಾಗಿದೆ. ಕರಾವಳಿಯ ಕಲೆ, ಸಂಸ್ಕೃತಿಯನ್ನು ಪೋಷಿಸುವ ಕೆಲಸ ನಮ್ಮ ಕುಡ್ಲದಿಂದ ಆಗುತ್ತಿದೆ. ಇದರ ಜೊತೆಗೆ ಇನ್ನಷ್ಟು ಹೆಚ್ಚಿನ ಕಾರ್ಯ ಕರ್ಕೇರ ಸಹೋದರರಿಂದ ಆಗಲಿ ಎಂದು ಶುಭ ಹಾರೈಸಿದರು. ಇದೇ ವೇಳೆ ಮಾನ್ಯ ಜನಾರ್ಧನ ಪೂಜಾರಿ ಅವರು ಎಲ್ಲರಿಗೂ ದೀಪಾವಳಿಯ ಶುಭ ಹಾರೈಸಿದರು.
ಗೂಡುದೀಪ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕೋಡಿಕಲ್, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ದಾಸ್ ಬೋಳಾರ್, ಕುದ್ರೋಳಿ ಕ್ಷೇತ್ರದ ಹರಿಕೃಷ್ಣ ಬಂಟ್ವಾಳ,ಬಿ.ಜಿ.ಸುವರ್ಣ,ಮಾಜಿ ಸಚಿವ ಅಭಯಚಂದ್ರ ಜೈನ್, ಕೆಎಂಎಫ್ ನಿರ್ದೇಶಕ ಸುಚರಿತ ಶೆಟ್ಟಿ ಹಾಗೂ ಕುದ್ರೋಳಿ ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ನಮ್ಮಕುಡ್ಲ ನಿರ್ದೇಶಕರುಗಳಾದ ಕರ್ಕೇರ ಸಹೋದರರು ಅತಿಥಿಗಳನ್ನು ಸ್ವಾಗತಿಸಿ ಗೌರವ ಸಲ್ಲಿಸಿದರು. ಬಾಸ್ಕರ್ ರೈ ಕುಕ್ಕುವಳ್ಳಿ, ಕದ್ರಿ ನವನೀತ ಶೆಟ್ಟಿ ಹಾಗೂ ಎಂ ಎಸ್ ಕೊಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.