TOP STORIES:

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ..


ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ ದೃವ್ಯಗುಣಗಳಿವೆ ಎಂಬ ನಂಬಿಕೆ ಇದೆ. ಈ ಪರಿಸರದ ಲೀಲಾವತಿ ನಾಟಿ ವೈದ್ಯರಾಗಿ ಚಿರಪರಿಚಿತರು.

ಸಾವಿರಾರು ಮಂದಿಯ ಬದುಕಿನಲ್ಲಿ ಅಶಾ ಕಿರಣ ಮೂಡಿಸಿರುವುದರೊಂದಿಗೆ ನಾಟಿ

ವೈದ್ಯವನ್ನು ಸೇವಾ ಯಜ್ಞದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಖ್ಯವಾಗಿ ಸರ್ಪಸುತ್ತು, ಕೆಂಪು, ದೃಷ್ಟಿ, ಬೆಸುರುಪು, ಸೊರಿಯಾಸಿಸ್-ಚರ್ಮ ರೋಗವನ್ನೂ ಪರಿಹರಿಸುವ ಚಿಕಿತ್ಸೆ ನೀಡುವಲ್ಲಿ ಪ್ರಖ್ಯಾತರು.

ಮಕ್ಕಳ ಚಿಕಿತ್ಸೆ, ಸಂಧಿವಾತ, ನೋವಿನ ತೈಲ ಅಲ್ಲದೆ ಇವರು ತಯಾರಿಸಿ ಕೊಡುವ ದೇಸೀ ಔಷಧಗಳಿಗೆ ಮತ್ತು ಕೇಶಕಾಂತಿ ತೈಲ, ದೇಯಿ-ಬೈದ್ಯೆತಿ ತೈಲಕ್ಕೆ ಹಲವಾರು ರಾಜ್ಯದಿಂದ ಬೇಡಿಕೆಗಳಿವೆ.

2016 ರಲ್ಲಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಮಹಿಳಾ ಸಮಾಗಮ ಸಂದರ್ಭದಲಿ ಸಮ್ಮಾನ ಪುರಸ್ಕಾರ ಸಂದಿದೆ. ಕೋಟಿ-ಚೆನ್ನಯ, ದೇಯಿ ಬೈದೇತಿ ಮೂಲಸ್ಥಾನ ಗೆಜ್ಜೆಗಿರಿಯಯ ನಂದನಬಿತ್ತಿಲಿನಲ್ಲಿ ನಾಟಿ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕುಟುಂಬದ ಹೆಸರಿನಲ್ಲಿ ‘ವೈದ್ಯೆ’ ಎನ್ನುವ ವಿಶೇಷಣವನ್ನು ಪಡುಮಲೆಯ ಬಲ್ಲಾಳರಿಂದ ಪಡೆದ ಸಾರ್ಥಕತೆಯ ಗೌರವ. ದೇಯಿಬೈದ್ಯೆದಿ ಬಳಸುವ ಮದ್ದಿನಗಿಂಡಿಯಲ್ಲಿ ಔಷಧ ನೀಡುವ ಇಂದಿಗೂ ಸರ್ಪರೊಗಗಳಿಗೆ ಮದ್ದನ್ನು ಮಾಡುವ ಇವರ ಕೈಗುಣದ ಬಗ್ಗೆ ಜನರಿಗೆ ಅಪಾರ ಭಕ್ತಿ, ಶ್ರದ್ಧೆ ಮತು ಗೌರವದ ವಿಶ್ವಾಸ. ಸಾವಿರಾರು ಮಂದಿಯ ಬದುಕಿನ ಸಂಕಟವನ್ನು ದೂರಮಾಡುತ್ತಿರುವ ಸಂಜೀವಿನಿ ಸಸ್ಯೌಷಧ ಜ್ಞಾನ ಪರಂಪರೆಯಿಂದ ಸಂರಕ್ಷಿಸಿಕೊಂಡು ಬಂದಿರುವ ಇವರ ಮನೆತನ ಮತು ಇವರು ನೀಡುವ ಪ್ರತಿ ಔಷಧಿಯಲ್ಲಿ ಅಮೃತಸಿದ್ಧಿ ನೀಡುವ ದೇಯಿಬೈದ್ಯೆದಿ ಶ್ರೀ ರಕ್ಷೆ ಆಶೀರ್ವಾದ ಇರಲಿದೆ ಎಂಬುದು ಜನರ ವಿಶ್ವಾಸವಾಗಿದೆ.


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »