ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ.
11 ನವೆಂಬರ್ 1969 ನವೀನ್ ಡಿ ಪಡೀಲ್ ಒಬ್ಬ ಭಾರತೀಯ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ ಗುರುತಿಸಿಕೊಂಡಿದ್ದಾರೆ. ತುಳು ಭಾಷೆಯಲ್ಲಿ ಸಾವಿರಕ್ಕೂ ಹೆಚ್ಚು ನಾಟಕಗಳನ್ನು ಪ್ರದರ್ಶಿಸಿದ್ದಾರೆ. “ಮಾಸ್ಟರ್ ಆಫ್ ಕಾಮಿಡಿ ಅಂಡ್ ಟ್ರಾಜಿಡಿ” ಆಗಿ ನಟನೆಯ ಮೂಲಕ ತುಳು ರಂಗಭೂಮಿಯ ವಲಯಗಳಲ್ಲಿ ವ್ಯಾಪಕವಾಗಿ ಹೆಸರುವಾಸಿಯಾಗಿರುವ ವಿನ್ ಡಿ. ಪಡೀಲ್ ಅನ್ನು “ಕುಸಲ್ದ ಅರಸೆ” ಎಂದು ಕರೆಯಲಾಗುತ್ತದೆ.
ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ವಿಶ್ವಪ್ರಭಾ ಪುರಸ್ಕಾರ-2025 ಅನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿ ಕಲಾವಿದ ನವೀನ್ ಡಿ.
ಪಡೀಲ್ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸ್ಥಾಪಕ ವಿಶ್ವನಾಥ ಶೆಣೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪುರಸ್ಕಾರವು 1ಲಕ್ಷ ರೂ. ನಗದು, ಪ್ರಶಸ್ತಿ ಪತ್ರ ಫಲಕ ಒಳಗೊಂಡಿರುತ್ತದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷೆ ಸಂಧ್ಯಾ ಶೆಣೈ, ವಿಶ್ವೇಶ್ವರ ಅಡಿಗ, ರವಿರಾಜ್ ಎಸ್.ಪಿ ಉಪಸ್ಥಿತರಿದ್ದರು.