TOP STORIES:

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ, ಅನಿತಾ ಪಿ. ತಾಕೊಡೆ ಅವರ ಸುವರ್ಣಯುಗ ಕೃತಿ  ಆಯ್ಕೆಯಾಗಿದೆ. ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಜಿ.ಎನ್.ಉಪಾಧ್ಯ, ಪ್ರತಿಷ್ಠಾನದ ಸಂಸ್ಥಾಪಕರಾದ ಡಾ.ವಿಶ್ವನಾಥ ಕಾರ್ನಾಡ್, ಕೋಶಾಧಿಕಾರಿ ಶರತ್ ಕಾರ್ನಾಡ್ ಅವರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು

ಈ ಪುರಸ್ಕಾರವು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಗ್ರಂಥ ಗೌರವವನ್ನು ಒಳಗೊಂಡಿದ್ದು ಫೆಬ್ರವರಿ ತಿಂಗಳಲ್ಲಿ ಮುಂಬೈ ವಿಶ್ವವಿದ್ಯಾಲಯದಲ್ಲಿ ಈ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಅನಿತಾ ಪೂಜಾರಿಯವರು ಕವಿಯಾಗಿ, ಲೇಖಕರಾಗಿ, ಕಥೆಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರಾಗಿದ್ದಾರೆ. ಇವರು  ಕೆ.ಎಸ್.ಒ.ಯು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ. ಪದವಿ ಪಡೆದಿದ್ದಾರೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇದೀಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ.ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ “ಮುಂಬಯಿ ಬಿಲ್ಲವರು ಸಾಂಸ್ಕೃತಿಕ ಅಧ್ಯಯನ” ಈ ವಿಷಯದ ಕುರಿತು ಪಿಎಚ್.ಡಿ ಅಧ್ಯಯನದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಅನಿತಾ ಅವರ ಒಟ್ಟು ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ.

ಪಿಎಚ್.ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸಿ. ಸುವರ್ಣರ ಕುರಿತು ಸಿದ್ಧಪಡಿಸಿದ ‘ಸುವರ್ಣಯುಗ’ ಶೋಧ ಪ್ರಬಂಧಕ್ಕೆ ಮುಂಬೈ ವಿಶ್ವವಿದ್ಯಾಲಯದ ವತಿಯಿದ ಸಂಶೋಧಕಿ ಡಾ.ಲೀಲಾ ಬಿ. ಅವರು ಕೊಡಮಾಡುವ ‘ಶೋಧಸಿರಿ’ ಪುರಸ್ಕಾರ, ನಿವಾಳಿಸಿ ಬಿಟ್ಟ ಕೋಳಿ ಕಥಾಕವನಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಮಾಡುವ 2022ನೆಯ ಸಾಲಿನ ಕೆ. ವಸುದೇವಾಚಾರ್ಯ ದತ್ತಿ ಪ್ರಶಸ್ತಿ  ಮಾಣಿಕ್ಯ ಪ್ರಕಾಶನದ ವತಿಯಿಂದ ಪದ್ಮಾವತಿ ವೆಂಕಟೇಶ ದತ್ತಿ ಪುರಸ್ಕಾರ, ‘ಅಂತರಂಗದ ಮೃದಂಗ’ದ ಹಸ್ತಪ್ರತಿಗೆ, ಜಗಜ್ಯೋತಿ ಕಲಾವೃಂದ ಮುಂಬೈ ವತಿಯಿಂದ ‘ಶ್ರೀಮತಿ ಸುಶೀಲಾ ಎಸ್. ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ’, ಜನಸ್ಪಂದನ ಟ್ರಸ್ಟ್(ರಿ) ಸುವ್ವಿ ಪಬ್ಲಿಕೇಷನ್ಸ್, ಶಿಕಾರಿಪುರ ಕೊಡಮಾಡುವ ‘ಅಲ್ಲಮ ಸಾಹಿತ್ಯ ಪ್ರಶಸ್ತಿ’, ಕನ್ನಡ ಕಲರವ ಮತ್ತು ಅವ್ವ ಪುಸ್ತಕಾಲಯದ ವತಿಯಿಂದ ‘ಸೃಜನಶೀಲ ಸಾಹಿತಿ ಪ್ರಶಸ್ತಿ’ ಲಭಿಸಿದೆ. ಮೋಹನ ತರಂಗ’ ಈ ಕೃತಿಗೆ 2019-20ನೆಯ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗದು ಪುರಸ್ಕಾರ ಪ್ರಾಪ್ತಿಯಾಗಿದೆ. ಗ್ರಾಮಾಂತರ ಬುದ್ಧಿಜೀವಿಗಳ ಬಳಗ ವತಿಯಿಂದ  ಎರಡು ಬಾರಿ ‘ಪ್ರೇಮಕಾವ್ಯ ಪುರಸ್ಕಾರ’ ಹಾಗೂ ‘ವಿಶ್ವ ಕವಿ ಕುವೆಂಪು ಕಾವ್ಯ ಪುರಸ್ಕಾರ’ ಲಭಿಸಿದೆ.

ಮಹಾರಾಷ್ಟ್ರ ನವಚಿಂತನ ಸಂಸ್ಥೆಯಿಂದ ಕವಿರತ್ನ ಪುರಸ್ಕಾರ, ಮುಂಬಯಿ ಕಲಾಜಗತ್ತು ಸಂಸ್ಥೆಯ ವತಿಯಿಂದ ‘ದಿ ಗೋಪಾಲಕೃಷ್ಣ ಸ್ಮಾರಕ ಪ್ರಶಸಿ’್ತ, ಡೊಂಬಿವಲಿ ತುಳುಕೂಟದ ವತಿಯಿಂದ ‘ತುಳುಸಿರಿ ಪ್ರಶಸ್ತಿ’, ಕನ್ನಡ ಕವಿವಾಣಿ ಪತ್ರಿಕಾ ಬಳಗದ ವತಿಯಿಂದ  ‘ಕಾವ್ಯಸಿರಿ ಪ್ರಶಸ್ತಿ’, ಕಲಾ ಸೌರಭ ಮುಂಬಯಿ ವತಿಯಿಂದ ‘ಅಮೃತ ಸೌರಭ ಪುರಸ್ಕಾರ’, ಶ್ರೀಕೃಷ್ಣ ವಿಠ್ಠಲ ಪ್ರತಿಷ್ಠಾನದ ವತಿಯಿಂದ ‘ಶ್ರೀ ಕೃಷ್ಣ ವಿಠ್ಠಲ ಪ್ರಶಸ್ತಿ’ ಲಭಿಸಿದೆ. ಇವರು 2019ರಲ್ಲಿ  ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿರುತ್ತಾರೆ. ಇವರ ಕತೆ ಕವಿತೆಗಳಿಗೆ ಲಭಿಸಿದ ಹಲವಾರು ಬಹುಮಾನ, ಪುರಸ್ಕಾರಗಳು ಇವರ ಸಾಹಿತ್ಯ ಶಕ್ತಿಗೆ ಸಾಕ್ಷಿಯಾಗಿವೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ.

ಮುಂಬಯಿ ಮತ್ತು ಮಂಗಳೂರು ಆಕಾಶವಾಣಿಯಲ್ಲಿ ಇವರ ಕತೆ, ಭಾವಗೀತೆ ಮತ್ತು ಕವನಗಳು ಪ್ರಸಾರಗೊಂಡಿವೆ. ಇವರು 2019ರಲ್ಲಿ  ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿದ್ದಾರೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »