TOP STORIES:

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ

ಪ್ರದೀಪ್ ಪೂಜಾರಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ರವರು  2010ನೇ ಸಾಲಿನಲ್ಲಿ ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಆಗಿ ಆಯ್ಕೆ ಗೊಂಡಿರುತ್ತಾರೆ. ಇವರು ನಿವೃತ್ತ ಸರ್ವೆ ಸೂಪರ್ ವೈಸರ್ ಬಾಲಕೃಷ್ಣ ಪೂಜಾರಿ ಕೆಂಗುಡೇಲು ಮತ್ತು ಗುಣವತಿ ದಂಪತಿಗಳ ಪುತ್ರ. ಇವರು ರಾಜಾನುಕುಂಟೆ, ಆವಲಹಳ್ಳಿ, ಕಮರ್ಷಿಯಲ್ ಸ್ಟ್ರೀಟ್, ಶಿಡ್ಲಘಟ್ಟ ಗ್ರಾಮಾಂತರ, ವಿಶ್ವನಾಥಪುರ ಹಾಗೂ ಹಾಲಿ  ಚಿಕ್ಕಬಳ್ಳಾಪುರ ಗ್ರಾಮಾಂತರ ಮತ್ತು ಹೊರವಲಯ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಇವರ ಸೇವಾ ಅವಧಿಯಲ್ಲಿ ಆರೋಪಿತರು ವಿಮಾನದಲ್ಲಿ ಬೆಂಗಳೂರು ನಗರಕ್ಕೆ ಮತ್ತು ಬೆಂಗಳೂರು ಹೊರ ವಲಯ ಬಂದು ಬಾಡಿಗೆಗೆ ಬೈಕನ್ನು ಪಡೆದು  ಬೆಂಗಳೂರು ನಗರದಲ್ಲಿ ಸರಗಳ್ಳತನವನ್ನು ಮಾಡಿ, ವಿಮಾನದಲ್ಲಿ ವಾಪಸ್ ಹೋಗುವ ಪ್ರವೃತ್ತಿವುಳ್ಳ ಬವೇರಿಯಾ ಗ್ಯಾಂಗ್ ಅನ್ನು ಪಂಜಾಬಿನಲ್ಲಿ ಪತ್ತೆ ಮಾಡಿ ಆರೋಪಿತರಿಂದ 500 ಗ್ರಾಂ ಚಿನ್ನವನ್ನು ಅಮಾನತ್ತುಪಡಿಸಿ ನೊಂದವರಿಗೆ ನ್ಯಾಯಾಲಯದ ಮುಖಾಂತರ ಹಿಂದಿರುಗಿಸಿರುತ್ತಾರೆ. 2022ನೇ ಸಾಲಿನಲ್ಲಿ ಪೆರೇಸಂದ್ರ ಗ್ರಾಮದ ಶ್ರೀನಾರಾಯಣಸ್ವಾಮಿ ಎ.ಎಸ್.ಐ ರವರ ಮನೆಯಲ್ಲಿ ನಡೆದ ಡಕಾಯಿತಿ ಪ್ರಕರಣದಲ್ಲಿ ಪಡೆದ ದೇಶದಲ್ಲಿಯೇ  ಗ್ಯಾಂಗ್ ಸ್ಟರ್ ಎಂದು ಕುಖ್ಯಾತಿ ಪಡೆದ ಉತ್ತರಪ್ರದೇಶ ಹೈದರ್ ಮತ್ತು ತಂಡವನ್ನು ಉತ್ತರಾಖಾಂಡ್ ರಾಜ್ಯದಲ್ಲಿ ಪತ್ತೆ ಮಾಡಿ ಅವರಿಂದ 12 ಲಕ್ಷ ರೂಪಾಯಿ  ನಗದು 4 ಪಿಸ್ತೂಲ್, 24 ಜೀವಂತ ಗುಂಡುಗಳು ಮತ್ತು ಬಂಗಾರದ ವಡವೆಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ತಲೆ, ರುಂಡ, ಮುಂಡವನ್ನು ಬೇರ್ಪಡಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿತರನ್ನು ಹಿಡಿಯುವಲ್ಲಿ ಯಶಸ್ವಿಯಾಗಿರುತ್ತಾರೆ.  16 ಜಿಲ್ಲೆಗಳಲ್ಲಿ ಎಟಿಎಂ ಕೇಂದ್ರಗಳ ಬಳಿ ಹಣ ಡ್ರಾ ಮಾಡಲು ಬರುವ  ಸಾರ್ವಜನಿಕರನ್ನು ಯಾಮಾರಿಸಿ ಅವರ ಕಾರ್ಡುಗಳನ್ನು ಬದಲಾಯಿಸಿ ಹಣವನ್ನು ಡ್ರಾ ಮಾಡಿ ಮೋಸ ಮಾಡುತ್ತಿದ್ದ ಸಾಗರ್ & ಕಿರಣ್ ಕುಮಾರ್ ಎಂಬುವರನ್ನು ಪತ್ತೆ ಮಾಡಿ ಪ್ರಕರಣಗಳನ್ನು ಬೆಳಕಿಗೆ ತಂದಿರುತ್ತಾರೆ.


Related Posts

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »