TOP STORIES:

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ . ಬೆಂಗಳೂರಿನ” ಆರ್ಯಭಟ ಕಲ್ಚರಲ್ ಆರ್ಗನೈಶೇಶನ್ “ಕೊಡಮಾಡುವ ಈ ಪ್ರಶಸ್ತಿಯನ್ನು ವಿಶ್ವನಾಥ ಪೂಜಾರಿ ಕಡ್ತಲ ಇವರ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯನ್ನು ಗುರುತಿಸಿ ನೀಡಲಾಗಿದೆ . ಮೇ 22 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಲಿದೆ . ಸಂಸ್ಥೆಯು ಪ್ರತೀ ವರ್ಷ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ . 

 ವಿಶ್ವನಾಥ ಪೂಜಾರಿಯವರು ಪುಣೆಯಲ್ಲಿ ಹೋಟೆಲ್ ಉದ್ಯಮದಲ್ಲಿ ಯಶಸ್ಸನ್ನು ಕಂಡವರು . ಕೇವಲ ತಾನೊಬ್ಬನೇ ನೆಮ್ಮದಿಯಿಂದ ಇದ್ದರಷ್ಟೇ ಜೀವನವಲ್ಲ” ಪರರೆಲ್ಲ ನಮ್ಮವರು “ಎಂಬ ಮನೋಭಾವವನ್ನು ರೂಢಿಸಿಕೊಂಡು ಸಾಮಾಜಿಕ ಸೇವೆಯನ್ನು ನಿರಂತರವಾಗಿ ಅನುಸಂಧಾನಿಸಿಕೊಂಡು ಅದರಲ್ಲಿ ತೃಪ್ತಿಯನ್ನು ಕಂಡಿರುವವರು . ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಚುಕ್ಕಾಣಿ ಹಿಡಿದು ಸಂಘದಲ್ಲಿ ಹೊಸ ಸಂಚಲನವನ್ನು ಮೂಡಿಸಿ  ಹಿರಿಕಿರಿಯರೆಲ್ಲರ ವಿಶ್ವಾಸಗಳನ್ನು ಗಳಿಸಿ ಮಾದರಿ ಸಂಘವನ್ನಾಗಿಸುವಲ್ಲಿ ಅವರ ಶ್ರಮ ಶ್ಲಾಘನೀಯವಾಗಿದೆ . ಸಂಘದ ಮೂಲಕ ವಿವಿಧ  ಸಾಂಸ್ಕೃತಿಕ ,ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುವುದಲ್ಲದೆ ಸಮಾಜಬಾಂಧವರ ಒಗ್ಗಟ್ಟಿಗಾಗಿ ಅಪಾರವಾಗಿ ಶ್ರಮಿಸುತ್ತಿದ್ದಾರೆ . ಪುಣೆ ರೆಸ್ಟೋರೆಂಟ್ & ಹೋಟೆಲಿಯರ್ಸ್ ಅಸೋಸಿಯೇಷನ್ ನಲ್ಲಿಯೂ ಸಕ್ರಿಯವಾಗಿದ್ದುಕೊಂಡು ಪುಣೆಯಲ್ಲಿರುವ ಯಾವುದೇ ಹೊಟೇಲಿಗರಿಗೆ ಅನ್ಯಾಯವಾದರೆ ತುರ್ತಾಗಿ ಧಾವಿಸಿ ಅವರಿಗೆ ನೈತಿಕ ಸ್ಥೈರ್ಯವನ್ನು ತುಂಬುವ ಮನೋಭಾವ ಅವರದ್ದಾಗಿದೆ . ಪುಣೆಯಲ್ಲಿರುವ ತುಳು ಕನ್ನಡಿಗರೆಲ್ಲರಲ್ಲೂ ಅನ್ಯೋನ್ಯವಾಗಿ ಗುರುತಿಸಿಕೊಂಡಿರುವುದಲ್ಲದೆ ನಾಡಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೂ ತನ್ನದೇ ಆದ  ಕೊಡುಗೆಯನ್ನು ನೀಡುತ್ತಾ ಬಂದಿರುತ್ತಾರೆ . ಅಲ್ಲದೆ ತುಳುನಾಡಿನ ಭಾಷೆ ,ಸಂಸ್ಕೃತಿಗಳ ಬಗ್ಗೆ ಅಪಾರವಾದ ಆಸ್ಥೆಯಿರಿಸಿಕೊಂಡಿರುವುದಲ್ಲದೆ   ಯಕ್ಷಗಾನ ,ನಾಟಕ ,ಚಲನಚಿತ್ರ ಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುತ್ತಾರೆ .ಇತ್ತೀಚಿಗೆ ಪುಣೆ ಬಿಲ್ಲವ ಸಮಾಜಸೇವಾ ಸಂಘದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆ ಇವರದ್ದಾಗಿದೆ . 

ಭವಿಷ್ಯದಲ್ಲಿ  ಇನ್ನಷ್ಟು ಸಾಮಾಜಿಕ ಸೇವೆಯ ಮೂಲಕ ಯಶಸ್ಸನ್ನು ಪಡೆಯಲಿ  ಮತ್ತಷ್ಟು ಕೀರ್ತಿ ಗೌರವಗಳು ತಮ್ಮನ್ನು ಅರಸಿ ಬರಲಿ ಎಂಬ ಶುಭ ಹಾರೈಕೆಗಳು …... 


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »