TOP STORIES:

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್ ಪಡು ಆಯ್ಕೆಯಾಗಿದ್ದು ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024ರ ಅ.2ರಂದು ಪ್ರಕಟವಾಗಿದ್ದ ‘ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್’ ವರದಿಗೆ ಪ್ರಶಸ್ತಿ ಲಭಿಸಿದೆ.

ಇಂದು ಜೂ.25 ಬೆಳಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರಶಸ್ತಿ ಪ್ರದಾನಿಸಿದರು.

ಹೊಸದಿಗಂತ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿದ್ದ ವಿಜಯ ಕೋಟ್ಯಾನ್ ವಿಜಯ ಕರ್ನಾಟಕದಲ್ಲಿ 22 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. 2019-20ನೇ ಸಾಲಿನ ಪ.ಗೋ. ಪ್ರಶಸ್ತಿ, 2022ರಲ್ಲಿ ಕಲಬುರಗಿಯಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಡ್ರಗ್ಸ್ ಸಂಬಂಧಿತ ಸ್ಕೂಪ್ ವರದಿಗೆ ಬಿ.ಎಸ್. ವೆಂಕಟರಾಂ ರಾಜ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡುವ ಪ್ರತಿಷ್ಠಿತ ‘ಅಭಿಮಾನಿ ದತ್ತಿ ಪ್ರಶಸ್ತಿ’ ಲಭಿಸಿದೆ. ನೀರುಮಾರ್ಗ ಪಡು ಬೊಂಡಂತಿಲ ಗ್ರಾಮದ ಗೋಪಾಲ ಪೂಜಾರಿ ಮತ್ತು ಕಮಲ ದಂಪತಿಯ ಪುತ್ರ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »