TOP STORIES:

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ ಮುಖಂಡರು ಆಗ್ರಹಿಸಿದ್ದಾರೆ.

ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಲ್ಲವ ಮುಖಂಡರು, ಸರಕಾರದ ಎಲ್ಲಾ ಮೀಸಲಾತಿ, ಸವಲತ್ತು ಸೌಲಭ್ಯಗಳು ಜನಸಂಖ್ಯೆಯ ಆಧಾರದ ಮೇಲೆಯೇ ನಿರ್ಧಾರ ಆಗುತ್ತದೆ. ನಮ್ಮ ಹೆಸರಿನ ಜೊತೆಗೆ ನಾವು ನಮ್ಮ ‘ಬರಿ’ ನಮೂದಿಸುವ ಪರಿಪಾಠ ಬೆಳೆಸಿಕೊಂಡಿದ್ದರೂ ಜಾತಿ ಎನ್ನುವ ಕಾಲಂನಲ್ಲಿ “ಬಿಲ್ಲವ” ಎಂಬ ಹೆಸರಿನಿಂದಲೇ ಗುರುತಿಸಿಕೊಂಡು ನಮ್ಮ ಸಮಾಜದ ಸರಿಯಾದ ಜನಸಂಖ್ಯೆಯ ಲೆಕ್ಕ ಸಿಗಬೇಕೆಂದು ವಿನಂತಿ ಮಾಡುತ್ತಿದ್ದೇವೆ. ಕಾಂತರಾಜು ಆಯೋಗದ ವರದಿಯಲ್ಲಿ ಸರಕಾರದ ಈಡಿಗ 26 ಪಂಗಡಗಳಲ್ಲಿ ಬಿಲ್ಲವ ಮತ್ತು ಪೂಜಾರಿ ಎಂದು ಎರಡಾಗಿ ಪ್ರತ್ಯೇಕವಾಗಿ ನಮೂದಿಸಿದ್ದರೂ ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಕೆಲವೊಂದು ವ್ಯತ್ಯಾಸಗಳಾಗುವ ಸಾಧ್ಯತೆಗಳೂ ಇವೆ.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಅಧ್ಯಕ್ಷ ಡಾ. ರಾಜಶೇಖರ್ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಮ ನಿಯನ್ (ರಿ.) ಕುದ್ರೋಳಿ ಇದರ ಅಧ್ಯಕ್ಷ ನವೀನ್ ಡಿ. ಡಿ. ಸುವರ್ಣ, ಶ್ರೀಗೋಕರ್ಣನಾಥ ಕ್ಷೇತ್ರ, ಕುದ್ರೋಳಿ ಆಡಳಿತ ಸಮಿತಿ ಅಧ್ಯಕ್ಷ ಯರಾಜ್ ಹೆಚ್. ಸೋಮಸುಂದರಮ್, ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಆಡಳಿತ ಸಮಿತಿ ಅಧ್ಯಕ್ಷ ಮಹೇಶ್‌ ಅಂಚನ್, ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಬಿಲ್ಲವರ ಒಕ್ಕೂಟ, ಚಿಕ್ಕಮಗಳೂರು ಅಧ್ಯಕ್ಷ ಹೆಚ್.ಎಂ. ಸತೀಶ್, ಬಿಲ್ಲವ ಸಮಾಜ ಸೇವಾ ಸಂಘ, ಬ್ರಹ್ಮಾವರ, ಉಡುಪಿ , ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ನಾರಾಯಣಗುರು ಅರ್ಬನ್ ಕೋ.ಆಪ್. ಬ್ಯಾಂಕ್ ಲಿ. ಚೆರ್‌ಮೆನ್ ಹರಿಶ್ಚಂದ್ರ ಅಮೀನ್, ಪರಮೇಶ್ವರ ಪೂಜಾರಿ ಮಂಗಳೂರು ಉಪಸ್ಥಿತರಿದ್ದರು


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »