TOP STORIES:

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು.

ಈ ಸಮಯದಲ್ಲಿ ಶಾಲೆಗೆ ಬ್ರಹತ್ ಮೊತ್ತದ ಕೊಡುಗೆ ನೀಡಿದ ಶಾಲೆಯ ಹಳೆ ವಿಧ್ಯಾರ್ಥಿ ಮತ್ತು ಉದ್ಯಮಿಗಳಾದ ಸುಭಾಷ್ ಪೂಜಾರಿಯವರು 9 ಲಕ್ಷದ ಮೌಲ್ಯದ ಶಾಲಾ ವಾಹನವನ್ನು ಶಾಲೆಗೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ದಾನಿಗಳಾದ ಸುಭಾಷ್ ಪೂಜಾರಿ ಹಾಗೂ ಶಾಲೆಯ ವಾಹನ ಇಂಧನ ವ್ಯೆವಸ್ಥೆ ಮಾಡಿದ ರಾಜೇಶ್ ಪೂಜಾರಿ ಇವರನ್ನು ಕೂಡಾ ಸನ್ಮಾನಿಸಲಾಯಿತು.

ಈ ಸಮಯದಲ್ಲಿ ಶಾಲೆಗೆ ಮಕ್ಕಳ ಸಂಖ್ಯೆ ಕಡಿಮೆಯಾಗಿದ್ದು ಊರಿನ ಪ್ರತಿಯೊಬ್ಬರು ಸರಕಾರಿ ಶಾಲೆ ಉಳಿಸುವಲ್ಲಿ ಯಶಸ್ವಿಯಾಗ ಬೇಕೆಂದರೆ ಶಾಲೆಗೆ ಮಕ್ಕಳ ಸಂಖ್ಯೆ ಹೆಚ್ಚಿಸುವಲ್ಲಿ ನಿಮ್ಮ ಪಾತ್ರ ಮುಖ್ಯವಾಗಿರುತ್ತದೆ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ವಲಯ ಶಿಕ್ಷಣ ಸಂಯೋಜಕರಾದ ಚಂದ್ರ ದೇವಾಡಿಗ ಹೇಳಿದರು.

ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಹೆಗ್ಡೆ, ಶಂಕರ ಪೂಜಾರಿ, ಬಿ.ಜೆ.ಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಯದರ್ಶಿ ಸುಧಾಕರ ಮೋಗವೀರ, ಎಸ್.ಡಿ.ಎಂ.ಸಿ  ಸದಸ್ಯೆ ನಾಗವೇಣಿ, ವಿಧ್ಯಾರ್ಥಿ ನಾಯಕ ವಿನಿತ್ ಕುಮಾರ್, ಉಪಸ್ಥಿತರಿದ್ದರು ಶಾಲಾ ಮುಖ್ಯೋಪಾಧ್ಯಾಯರಾದ ಮುಕ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಸಾರೀಕಾ ನಿರೂಪಿಸಿದರು, ಸಂಗೀತ ವಂದಿಸಿದರು…


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »