TOP STORIES:

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು ಭಾಗವಹಿಸಿದ್ದರು ಈ ವೇಳೆ ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಮಹಾವೀರ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತರಾಗಿದ್ದರು ಎನ್ನಲಾಗಿದೆ.

ರವಿ ಕಲ್ಕಾರ್ ರವರು ಹಲವಾರು ವರ್ಷ ವಿದೇಶದಲ್ಲಿ ದುಡಿದು ಬಳಿಕ ಶಾಂತಿಗೋಡು ಕಲ್ಕಾರ್ ಎಂಬಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು. ಮೃತ ರವಿ ಕಲ್ಕಾರ್ ರವರು ಪುತ್ತೂರು ತಾಲೂಕು ಬಿಲ್ಲವ ಸಂಘದ ವಿದ್ಯಾನಿಧಿ ಸಂಚಾಲಕರಾಗಿ, ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಪುತ್ತೂರು ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ, ಕೂಡುರಸ್ತೆ ಮುಂಡೋಡಿ ನವಶಕ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ, ರೋಟರಿ ಕ್ಲಬ್ ಪುತ್ತೂರು ಸಿಟಿಯ ಸದಸ್ಯರಾಗಿ ಹೀಗೆ ಹಲವು ಸಂಘಟನೆಗಳಲ್ಲಿ ಸೇವೆಗೈಯ್ಯುವ ಮೂಲಕ ಗುರುತಿಸಿಕೊಂಡಿದ್ದರು.

ಮೃತರು ಕೆಪಿಟಿಸಿಎಲ್(ಕೆಇಬಿ) ಇದರಲ್ಲಿ ಕಿರಿಯ ಅಭಿಯಂತರರಾದ ಪವಿತ್ರ, ಪುತ್ರಿ ರನ್ನಿ, ಪುತ್ರ ರವೀಶ್, ಸಹೋದರ ದಿನೇಶ್ ಕಲ್ಕಾರ್, ಸಹೋದರಿಯರನ್ನು ಅಗಲಿದ್ದಾರೆ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »