TOP STORIES:

ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50ಲ.ರೂ ಚಿಕಿತ್ಸೆಗೆ ಹಸ್ತಾಂತರ


ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50ಲ.ರೂ ಚಿಕಿತ್ಸೆಗೆ ಹಸ್ತಾಂತರ

ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ

ಕುದ್ರೋಳಿ,ಜ.31: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ಯುವಕರ ಸಮೂಹ ಮಾಡುತ್ತಿರುವ ಸಮಾಜಮುಖೀ ಕೆಲಸವು ಮನಸ್ಸಿದ್ದರೆ ಮಾರ್ಗ ಎಂಬುದಕ್ಕೆ ಉತ್ತಮ ನಿದರ್ಶನ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬುಧವಾರ  ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿರುವ ಸ್ಟ್ರೀಟ್ ಫುಡ್ ಉತ್ಸವದಲ್ಲಿ ಲಸ್ಸಿ ಸ್ಟಾಲ್ ಇಟ್ಟಿದ್ದು, ಇದರಲ್ಲಿ ಬಂದ  2.50 ಲಕ್ಷ ರೂ.ಪೂರ್ಣ ಲಾಭಾಂಶವನ್ನು ಐದು ಕುಟುಂಬಗಳ ಚಿಕಿತ್ಸೆಗಾಗಿ ಧನ ಸಹಾಯವನ್ನು ಹಸ್ತಾಂತರಿಸಿ ಮಾತನಾಡಿದರು.

ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ, ವೀಲ್‍ಚೇರ್ ಸೇರಿದಂತೆ ವಿವಿಧ ಸಲಕರಣೆಯ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ಹಿಂದೂ ಸಮಾಜದ ಒಗ್ಗಟ್ಟು ಹೀಗೆ ವಿವಿಧ ರೀತಿಯಲ್ಲಿ ಕೆಲಸ ಮಾಡುತ್ತಾ ಬರುತ್ತಿದೆ.ಇಂತಹ ಉತ್ತಮ ಕೆಲಸಗಳಿಗೆ ನಮ್ಮ ಬೆಂಬಲ ಸದಾ ಇದೆ ಎಂದರು.

*ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ ಖಾದರ್* ಅವರು ಮಾತನಾಡಿ, ಯಾವುದೇ ಜಾತಿ ಮತ ನೋಡದೆ ಬಿರುವೆರ್ ಕುಡ್ಲ ಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡುತ್ತಾ ಬರುತ್ತಿರುವುದನ್ನು ಗಮನಿಸಿದ್ದೇನೆ.ಇಂತಹ ಸಂಘಟನೆಗಳ ಸಂಖ್ಯೆ ಇನ್ನೂ ಹೆಚ್ಚಾಗಬೇಕು.ಬಡವರ್ಗಕ್ಕೆ ನೆರವು ಸಿಗುವಂತಾಗಬೇಕೆಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಬಿರುವೆರ್ ಕುಡ್ಲ ಸಂಸ್ಥೆಗೆ ಸಮಾಜದಲ್ಲಿನ ಕಷ್ಟಗಳನ್ನು ನೀಗಿಸಲು ದೇವರು ಶಕ್ತಿ ನೀಡಲಿ,ಒಗ್ಗಟ್ಟಿನಿಂದ ಈ ಸಂಸ್ಥೆಯಿಂದ ಉತ್ತಮ ಸಮಾಜ ಮುಖಿ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ಅಧ್ಯಕ್ಷರಾದ  ಎಚ್. ಎಸ್ ಸಾಯಿರಾಮ್, ಮುಡಾ ಮಾಜಿ ಅಧ್ಯಕ್ಷ ರವಿ ಶಂಕರ್ ಮಿಜಾರ್,ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವ ಅಧ್ಯಕ್ಷ  ಗಿರಿಧರ್ ಶೆಟ್ಟಿ, ರಣದೀಪ್ ಕಾಂಚನ್,ಜೋಸೆಫ್ ಕ್ರಾಸ್ತ ಮಾರ್ಟೀನ್,ರಾಧಾಕೃಷ್ಣ, ವಸಂತ ಪೂಜಾರಿ, ಉದಯಪೂಜಾರಿ ಬಳ್ಳಾಲ್‍ಬಾಗ್, ಜಿತೇಶ್ ಜೈನ್,ದರ್ಶನ್ ಜೈನ್, ಪ್ರಕಾಶ್ ಪಾಂಡೇಶ್ವರ,ಪ್ರಮೋದ್ ಬಳ್ಳಾಲ್ ಭಾಗ್,ರಜನಿ ಶೆಟ್ಟಿ,ರಾಕೇಶ್ ಪೂಜಾರಿ,ಲತೀಶ್ ಪೂಜಾರಿ,ರಾಕೇಶ್ ಚಿಲಿಂಬಿ, ವಿನೀತ್ ಬಂಗೇರ, ಮಹೇಶ್ ಪೂಜಾರಿ,ಕಿರಣ್ ಪೂಜಾರಿ ಬಂಟ್ವಾಳ,ರಾಮ , ಲೋಹಿತ್ ಗಟ್ಟಿ,ದಿನಿಲ್, ವಿಖ್ಯಾತ್ ಪೂಜಾರಿ,ರೋಷನ್ ಮೆನೆಜಸ್ ಬೋಳೂರು,ರಾಜೇಶ್ ಉರ್ವ,ವಾಝಿ ಪದವಿನಂಗಡಿ,ಕಿರಣ್ ಶೆಟ್ಟಿ,ರೋಷನ್ ಬಳ್ಳಾಲ್‍ಬಾಗ್, ಸುನೀಲ್ ಶೆಟ್ಟಿ ಬಳ್ಳಾಲ್‍ಬಾಗ್, ಜಗದೀಶ್ ಕದ್ರಿ,ರೂಪೇಶ್ ಶೆಟ್ಟಿ,ಪೃಥ್ವಿ ಅಂಬರ್,ಶರಣ್, ವಾಸೀಮ್ ಮತ್ತಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »