TOP STORIES:

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ – ಕೋಟಿ ಚೆನ್ನಯರ ಭವ್ಯ ಆಲಯ ನಿರ್ಮಾಣಗೊಂಡಿದೆ.

ಕ್ಷೇತ್ರದ ನಿರ್ಮಾಣ-ಬ್ರಹ್ಮಕಲಶ ಕಾರ್ಯ ಇಡೀ ತುಳುನಾಡಿದ ಧಾರ್ಮಿಕ ಪರಂಪರೆಯಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ್ದು ಇಂದಿಗೂ ನಿತ್ಯ- ನಿರಂತರ ಕ್ಷೇತ್ರಕ್ಕೆ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದು ಗೆಜ್ಜೆಗಿರಿ ಕಾರಣಿಕ ಶಕ್ತಿಯನ್ನು ಜಗತ್ತಿಗೆ ಸಾರುತ್ತಿದೆ.

ಏರಾರ್ಜೆ ಬರ್ಕೆ ಎಂಬ ಪ್ರತಿಷ್ಠಿತ ಮನೆತನದ ನೆಲವೇ ಗೆಜ್ಜೆಗಿರಿ ನಂದನಬಿತ್ತಲ್, ಸಾವಿರಾರು ವರ್ಷಗಳ ಇತಿಹಾಸ ಇರುವ ಈ ಮನೆತನ ಪಡುಮಲೆ ಅರಸು ಬಳ್ಳಾಲರ ಸಂಸ್ಥಾನದಲ್ಲಿ ಮಹತ್ವದ ಸ್ಥಾನ ಮಾನ ಪಡೆದ ಮಣ್ಣು ಗುರು ಸಾಯನ ಬೈದ್ಯರು ಈ ಮನೆತನದಲ್ಲಿ ಯಜಮಾನರಾಗಿ ಮೆರೆದಿದ್ದು ಸುಮಾರು 500 ವರ್ಷಗಳ ಇತಿಹಾಸವನ್ನು ಕ್ಷೇತ್ರ ಪರಿಚಯಿಸುತ್ತದೆ. ಮಾತೆ ದೇಯಿ ಬೈದೈತಿಗೆ ಗುರು ಸಾಯನರು ಪುನರ್ಜನ್ಮ ನೀಡಿದ ನೆಲ ಗೆಜ್ಜೆಗಿರಿಯಾಗಿದ್ದು, ಕೋಟಿ ಚೆನ್ನಯರ ಜೀವನ ಕಥಾನಕವನ್ನು ಈ ಪುಣ್ಯಭೂಮಿ ಭಕ್ತ ವೃಂದಕ್ಕೆ ವಿವರಿಸುತ್ತದೆ.

ತುಳುನಾಡಿನ ಅವಳಿ ವೀರ ಪುರುಷರಾಗಿ ಮೆರೆದಾಡಿದ ಕೋಟಿ- ಚೆನ್ನಯರು ಬದುಕಿನ ಬಹುಪಾಲನ್ನು ಕಳೆದ ತಾಣವಾಗಿರುವ ಗೆಜ್ಜೆಗಿರಿಯು ವೀರರ ತಾಯಿ, ಮಾವನವರು ವಾಸಿಸಿದ್ದ ಕೌಟುಂಬದ ಮೂಲವಿದು. ಧರ್ಮದೈವ ಧೂಮಾವತಿಯ ತಾಣವಾಗಿಯೂ ಕಾರಣೀಕತೆಯನ್ನು ತೋರಿಸುತ್ತದೆ. ಒಟ್ಟಾರೆಯಾಗಿ ಹೇಳಬೇಕಾದರೆ ಕೋಟಿ ಚೆನ್ನಯರ ಪಾಲಿಗಿದು ಮೂಲಸ್ಥಾನವೇ ಆಗಿದೆ.

ಗೆಜ್ಜೆಗಿರಿಯ ಮಣ್ಣಲ್ಲಿ ಸತ್ಯಧರ್ಮ ಚಾವಡಿ

ಈ ಮೂರು ತಲೆಮಾರುಗಳ ಕಾರಣಿಕ ಶಕ್ತಿಗಳು ಮಾನವ ರೂಪದಲ್ಲಿ ವಾಸಿಸಿದ್ದ ಮನೆ ಪ್ರಸ್ತುತ ಸಂಪೂರ್ಣ ಪುನರುಥಾನಗೊಂಡು ಸತ್ಯಧರ್ಮ ಚಾವಡಿಯಾಗಿ ಕಂಗೊಳಿಸುತ್ತಿದೆ. ಆ ಕಾಲದ ಧರ್ಮದೈವ ಧೂಮಾವತಿ ಮತ್ತು ಸಪರಿವಾರ ದೈವಗಳ ತಾಣವೂ ಸುಂದರವಾಗಿ ನಿರ್ಮಾಣಗೊಂಡಿದೆ. ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆಗೆ ನವಸ್ಪರ್ಶವನ್ನು ಪಡೆದಿದೆ.

ಪಾರಂಪರಿಕ ಶೈಲಿಯಲ್ಲಿ ಪುನರ್ ನಿರ್ಮಾಣ ಗೊಂಡಿರುವ ದೇಯಿ ಮಾತೆಯ ಮಹಾಸಮಾಧಿಯು ಆಸ್ತಿಕ ಬಂಧುಗಳ ಮೈರೋಮಾಂಚನ ಗೊಳಿಸುತ್ತದೆ. ಸಾಯನ ಬೈದ್ಯರ ಗುರುಪೀಠವು ಗುರುಪರಂಪರೆಯ ಭಕ್ತಿಯನ್ನು ಇಮ್ಮಡಿಗೊಳಿಸುತ್ತದೆ. ಅವಳಿ ವೀರರಿಗೆ ಮೂಲ ಮಣ್ಣಲ್ಲಿ ಮೂಲಸ್ಥಾನ ಗರಡಿ ನಿರ್ಮಾಣಗೊಂಡಿದೆ. ಬೆರ್ಮೆರ್ ಗುಂಡವೂ ಮೂಡಿಬಂದಿದ್ದು ಸಮಗ್ರ ಮೂಲಸ್ಥಾನ ಭವ್ಯವಾಗಿ ಪುನರುತ್ಥಾನಗೊಂಡು ಭಕ್ತರ ಪಾಲಿಗೆ ಅಮೃತ ಸಂಜೀವಿನಿಯಾಗಿ ಹತ್ತೂರಿನ ಭಕ್ತರನ್ನೂ ತನ್ನತ್ತ ಕೈಬೀಸಿ ಕರೆಯುತ್ತಿದೆ.

ಇವತ್ತು ಗೆಜ್ಜೆಗಿರಿಯಲ್ಲಿ ನಡೆಯುತ್ತಿರುವ ಆರಾಧನೆ ಇದೇ ಮೂಲಸ್ಥಾನದ ಕಲ್ಪನೆಯಲ್ಲಿದೆ. ಇಲ್ಲಿ ಸಾಯನ ಗುರುಗಳು, ಸಹೋದರಿ ದೇಯಿ ಬೈದೈತಿ ಮತ್ತು ಅಳಿಯಂದಿರಾದ ಕೋಟಿ ಚೆನ್ನಯರ ಆರಾಧನೆ ನಡೆಯುತ್ತದೆ. ಈ ಶಕ್ತಿಗಳು ಅವತಾರ ರೂಪದಲ್ಲಿ ಬದುಕಿದ್ದಾಗ ನಂಬಿಕೊಂಡಿದ್ದ ಧರ್ಮದೈವ ಧೂಮಾವತಿಯ ಉಪಾಸನೆಯೂ ಇಲ್ಲಿದೆ. ಜತೆಗೆ ನಾಗಾರಾಧನೆ, ಸಪರಿವಾದ ದೈವಗಳ ಉಪಾಸನೆಯೂ ಇದೆ. ಒಟ್ಟಾರೆಯಾಗಿ ಹೇಳುವುದಿದ್ದರೆ ತುಳುನಾಡಿನ ಮೂಲಸ್ಥಾನ (ತರವಾಡು) ಕಲ್ಪನೆಯ ಸಮಗ್ರ ಚಿತ್ರಣ ಗೆಜ್ಜೆಗಿರಿಯಲ್ಲಿದೆ.


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »