TOP STORIES:

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ. ಅದರಲ್ಲಿಯೂ ಚಳಿಗಾಲದ ಸಂದರ್ಭದಲ್ಲಿ ಇದರ ಸೇವನೆ ಮಾಡುವುದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ನಮ್ಮ ಸಾಂಪ್ರದಾಯಿಕ ಆಹಾರದಲ್ಲಿ ಹುರುಳಿಗೆ ವಿಶೇಷ ಸ್ಥಾನವಿದೆ. ನೀವು ಇದರಿಂದ ರುಚಿ ರುಚಿಯಾದ ಅಡುಗೆಗಳನ್ನು ತಯಾರಿಸಿರಬಹುದು. ಇವು ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ. ಅದರಲ್ಲಿಯೂ ಚಳಿಗಾಲದ ಸಂದರ್ಭದಲ್ಲಿ ಇದರ ಸೇವನೆ ಮಾಡುವುದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ಅಜೀರ್ಣ ಸಮಸ್ಯೆಗೆ ಪರಿಹಾರ ನೀಡುತ್ತದೆ

ಸಾಮಾನ್ಯವಾಗಿ ಹುರುಳಿ ಕಾಳಿನಲ್ಲಿ ಫೈಬರ್ ಅಧಿಕವಾಗಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಹಾಗಾಗಿ ಪದೇ ಪದೇ ಅಜೀರ್ಣ ಸಮಸ್ಯೆ ಕಾಡುತ್ತಿದ್ದರೆ ಪ್ರತಿದಿನ ಹುರುಳಿ ಕಾಳಿನ ಸೇವನೆ ಮಾಡುವ ಮೂಲಕ ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ಪಡೆದುಕೊಳ್ಳಬಹುದು. ಜೊತೆಗೆ ಇದು ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಇದರಲ್ಲಿರುವ ನಾರಿನಾಂಶ ದೇಹಕ್ಕೆ ತಕ್ಷಣದ ಶಕ್ತಿಯನ್ನು ಒದಗಿಸುತ್ತವೆ ಮತ್ತು ಆಯಾಸದಿಂದ ದೂರವಿಡುತ್ತವೆ.

ಮಧುಮೇಹಿಗಳಿಗೆ ಒಳ್ಳೆಯದು

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಹುರುಳಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ ಇದು ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ. ಈ ಗುಣಲಕ್ಷಣಗಳಿಂದಾಗಿ, ಮಧುಮೇಹ ಇರುವವರು ಈ ಕಾಳುಗಳನ್ನು ಆಹಾರದಲ್ಲಿ ಸೇರಿಸಬಹುದು.

ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ

ರಕ್ತಹೀನತೆಯ ಸಮಸ್ಯೆಗಳನ್ನು ಕಡಿಮೆ ಮಾಡಲು ಹುರುಳಿ ಬಹಳ ಉಪಯುಕ್ತವಾಗಿವೆ. ರಕ್ತಹೀನತೆಯಿಂದ ಬಳಲುತ್ತಿರುವವರು ಈ ಧಾನ್ಯವನ್ನು ಸೇವನೆ ಮಾಡಿದಲ್ಲಿ ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಬಹುದು. ಇದಲ್ಲದೆ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುವಲ್ಲಿ ಇದು ಪ್ರಮುಖ ಪಾತ್ರವಹಿಸುತ್ತವೆ. ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತನಾಳಗಳ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ.

ತೂಕ ಕಡಿಮೆ ಮಾಡಿಕೊಳ್ಳಲು ಸಹಕಾರಿ

ಹುರುಳಿಯಲ್ಲಿರುವ ಪ್ರೋಟೀನ್ ಮತ್ತು ಫೈಬರ್ ಅಂಶವು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ತೂಕವನ್ನು ಸುಲಭವಾಗಿ ನಿಯಂತ್ರಿಸಬಹುದು. ಜೊತೆಗೆ ಇದನ್ನು ಸೂಪ್ ಅಥವಾ ಕಷಾಯದ ರೂಪದಲ್ಲಿ ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕೂದಲಿನ ಪೋಷಣೆಗೆ ಒಳ್ಳೆಯದು

ಹುರುಳಿ ಚರ್ಮದ ಆರೋಗ್ಯ ಮತ್ತು ಕೂದಲಿನ ಪೋಷಣೆಗೆ ಬಹಳ ಒಳ್ಳೆಯದು. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು, ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಉತ್ಕರ್ಷಣ ನಿರೋಧಕಗಳು ಮತ್ತು ಖನಿಜ ಲವಣಗಳು ಚರ್ಮಕ್ಕೆ ಅಗತ್ಯವಾದ ಪೋಷಣೆಯನ್ನು ಒದಗಿಸುತ್ತವೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಇದರೊಂದಿಗೆ, ದೇಹವು ದಿನವಿಡೀ ಸಕ್ರಿಯವಾಗಿರುತ್ತದೆ.


Related Posts

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌


Share         ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ


Read More »