TOP STORIES:

ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಹಾಗೂ ತಂಡದ ಬಲೆಗೆ ಬಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ


ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.

ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ 5 ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು ರೂ 5000 ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಹಿತೇಂದ್ರ ಭಂಡಾರಿಯವರ ದೂರಿನಂತೆ ಶನಿವಾರ ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಅವರ ತಂಡ ಹಾಗೂ ಮಂಗಳೂರು ಲೋಕಾಯುಕ್ತ ಪಿಐ ಪಿ ಸುರೇಶ್ ಹಾಗೂ ಕೆ ಎನ್ ಚಂದ್ರ ಶೇಖರ್ ಅವರನ್ನೊಳಗೊಂಡ ತಂಡ ಲಂಚ ಸ್ವೀಕರಿಸುತ್ತಿದ್ದ ವೇಳೆ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »