ಟೋಕಿಯೋ ಓಲಂಪಿಕ್ -2020 | ಮಹಿಳಾ ಹಾಕಿ ತಂಡದ ತರಬೇತುದಾರ ಕು. ಅಂಕಿತಾ ಬಿಲ್ಲವ ಸುರೇಶ ಸನ್ಮಾನ

ಟೋಕಿಯೋ-2020 ಓಲಂಪಿಕ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಕು. ಅಂಕಿತಾ ಬಿಲ್ಲವ ಸುರೇಶ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ‌ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಮಹಿಳಾ ತಂಡ ಗೆದ್ದಿದ್ದು, ತಂಡದ ತರಬೇತಿದಾರರಿಗೆ ತುಂಬು ಹೃದಯದ ಶುಭಾಶಯ ಕೋರಲಾಯಿತು. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ.

ಅಂಕಿತ ಅವರು ಮಡಿಕೇರಿ ಮೂಲದವರು. ಇವರ ತರಬೇತಿಯಲ್ಲಿ ಪಳಗಿದ ದೇಶದ ಮಹಿಳಾ ಹಾಕಿ ತಂಡ ಬಲಿಷ್ಠವಾಗಿದೆ. ಕಳೆದ ಎರಡು ವರ್ಷಗಳಿಂದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅಂಕಿತಾ ತರಬೇತಿ ನೀಡುತ್ತಿದ್ದಾರೆ. ಪ್ರಥಮ ಬಾರಿಗೆ ಓಲಂಪಿಕ್ ನಲ್ಲಿ ಮಹಿಳಾ ತಂಡ ಸೆಮಿಫೈನಲ್ ಹಂತಕ್ಕೆ ತಲುಪಿ ಅಭೂತಪೂರ್ವ ಅಮೋಘ ಸಾಧನೆ ಮಾಡಿದ್ದು ಅವರಿಗೆ ಹಾಗೂ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅಭಿನಂದನೆಗಳು.

Leave a Reply

Your email address will not be published. Required fields are marked *