ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ ಗೊಳಿಸಲಾಯಿತು.
ದೇಯಿ ಬೈದೆತಿ, ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು, ಸಮಾಜದ ಸಂಘಟನಾತ್ಮಕ ಅಭಿವೃದ್ಧಿ ಪರ ಕಾರ್ಯ ಯೋಜನೆಗಳ ಬಗ್ಗೆ ಮಹತ್ತರವಾದ ಬೆಳವಣಿಗೆಯ ಬಗ್ಗೆ ಸಂತಸ ವ್ಯಕ್ತಪಡಿಸಿ ವಿಶ್ವದ ಬಿಲ್ಲವರು ಸೇರಿ ಒಗ್ಗಟ್ಟಿನ ಮೂಲಕ ಮಾರ್ಚ್ 1 ರಿಂದ 5ರ ವರೆಗೆ ಶ್ರೀ ಕ್ಷೇತ್ರದಲ್ಲಿ ನಡೆಯುವ ಜಾತ್ರಾ ಮಹೋತ್ಸವ ಮತ್ತು ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಸಹಕರಿಸುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರಾಜ್ ಸುವರ್ಣ, ಉಪಾಧ್ಯಕ್ಷರಾದ ಚರನ್ ಕುಮಾರ್, ಮಾಜಿ ಅಧ್ಯಕ್ಷರು ಅಜಿತ್ ಬಂಗೇರ, ಮಾಜಿ ಪ್ರಧಾನ ಕಾರ್ಯದರ್ಶಿ ಸಂಪತ್ ಸುವರ್ಣ, ಕಮಿಟಿ ಸದಸ್ಯರು ಸಮಿತಿಯ ಇನ್ನಿತರ ಸದಸ್ಯರುಗಳು ಉಪಸ್ಥಿತರಿದ್ದರು.