TOP STORIES:

Whatsapp New Feature: ವಾಟ್ಸ್ ಆ್ಯಪ್ ಪರಿಚಯಿಸುತ್ತಿರುವ ಹೊಸ ಅಪ್ಡೇಟ್ ಕಂಡು ಸ್ಮಾರ್ಟ್ ಫೋನ್ ಕಂಪನಿಗಳು ಶಾಕ್: ಯಾಕೆ ಗೊತ್ತೇ?


Whatsapp Schedule Call: ಯಾವುದೇ ಸ್ಮಾರ್ಟ್ ಫೋನ್ ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ ಆ್ಯಪ್ ಇದೇಮೊದಲ ಬಾರಿಗೆ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ.

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ ಆ್ಯಪ್ ಕಳೆದ ವರ್ಷದಂತೆ ವರ್ಷ ಕೂಡ ಕುತೂಹಲಕಾರಿನೂತನ ಆಯ್ಕೆಗಳನ್ನು ಪರಿಚಯಿಸಲು ಶುರು ಮಾಡಿಕೊಂಡಿದೆ. ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವವಾಟ್ಸ್ ಆ್ಯಪ್ (WhatsApp) ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. 2023 ವರ್ಷದ ಮೊದಲ ತಿಂಗಳಲ್ಲೇ ಕೆಲ ಅಪ್ಡೇಟ್ ಗಳನ್ನು ನೀಡಿರುವ ವಾಟ್ಸ್ ಆ್ಯಪ್ ನಲ್ಲಿ ತಿಂಗಳು ಕೆಲ ಹೊಸ ಫೀಚರ್ ಗಳುಬರಲಿಕ್ಕಿವೆ. ವರಿಜಿನಲ್ ಕ್ವಾಲಿಟಿಯಲ್ಲಿ ಫೋಟೋ ಕಳುಹಿಸುವ ಆಯ್ಕೆಯನ್ನು ಪರಿಚಯಿಸುವುದಾಗಿ ಇತ್ತೀಚೆಗಷ್ಟೆ ಘೋಷಿಸಿದ್ದಕಂಪನಿ ಇದೀಗ ವಾಟ್ಸ್ ಆ್ಯಪ್ ಕರೆಯನ್ನು ಶೆಡ್ಯುಲ್‌ (Schedule Call) ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲುಮುಂದಾಗಿದೆ.

ಹೌದು, ಯಾವುದೇ ಸ್ಮಾರ್ಟ್ ಫೋನ್ ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ ಆ್ಯಪ್ ಇದೇ ಮೊದಲ ಬಾರಿಗೆ ತನ್ನಕರೆಗಳನ್ನು ಶೆಡ್ಯುಲ್‌ ಮಾಡುವ ಆಯ್ಕೆ ನೀಡುತ್ತಿದೆ. ಅಂದರೆ ವಾಟ್ಸ್ ಆ್ಯಪ್ ನಲ್ಲಿ ಬಳಕೆದಾರರು ಮುಂಚಿತವಾಗಿಯೇ ಕರೆಯನ್ನುನಿಗದಿಪಡಿಸುವ ಸಮಯಕ್ಕೆ ಮಾಡಬಹುದಾಗಿದೆ. ಮೂಲಕ ಪ್ರಮುಖ ಸಂಭಾಷಣೆಯನ್ನು ಯಾರೂ ಸಹ ಮಿಸ್‌ಮಾಡಿಕೊಳ್ಳುವ ಸಂಭವ ಇರುವುದಿಲ್ಲ ಎಂದು ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ ಯಾರನ್ನಾದರೂ ಕೆಲಸಕ್ಕೆ ನೇಮಿಸಿಕೊಳ್ಳಲುಸಂದರ್ಶನ ಮಾಡಬೇಕು ಎಂದಿದ್ದರೆ, ವೇಳೆ ಸಂದರ್ಶಕರು ಸಂದರ್ಶನಕ್ಕೆ ಹಾಜರಾಗುವ ವ್ಯಕ್ತಿ ಜೊತೆ ಯಾವ ಸಮಯದಲ್ಲಿಮಾತನಾಡಬೇಕು ಎಂಬುದನ್ನು ಶೆಡ್ಯುಲ್‌ ಮಾಡಬಹುದು.

Tech Tips: ಮೊಬೈಲ್ ನಲ್ಲಿ ನಂಬರ್ ಸೇವ್ ಮಾಡದೆ ವಾಟ್ಸ್ ಆ್ಯಪ್ ನಲ್ಲಿ ಮೆಸೇಜ್ ಕಳುಹಿಸುವುದು ಹೇಗೆ?: ಇಲ್ಲಿದೆಟ್ರಿಕ್

ಮೊದಲಿಗೆ ಶೆಡ್ಯುಲ್‌ ಕರೆ ಸೌಲಭ್ಯ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿರಲಿದ್ದು, ನಂತರದಲ್ಲಿ ಐಒಎಸ್ ಬಳಕೆದಾರರಿಗೂಸಿಗಲಿದೆ. ಕರೆಗಳನ್ನು ಶೆಡ್ಯುಲ್‌ ಮಾಡುವ ಸಂದರ್ಭ ಬಳಕೆದಾರರಿಗೆ ಶೀರ್ಷಿಕೆ, ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಲುಕೇಳಲಾಗುತ್ತದೆ. ಹಾಗೆಯೇ ಗ್ರೂಪ್‌ ಕರೆ ವಿಚಾರದಲ್ಲೂ ನಿಗದಿತ ಕರೆಯನ್ನು ಯಾವಾಗ ಮಾಡಲಾಗುತ್ತದೆ ಎಂಬುದರ ಕುರಿತುಗುಂಪಿನಲ್ಲಿರುವ ಪ್ರತಿಯೊಬ್ಬರೂ ತಿಳಿದುಕೊಳ್ಳಬಹುದಾಗಿದೆ. ಸದ್ಯಕ್ಕೆ ಫೀಚರ್ಸ್ ಅಭಿವೃದ್ಧಿ ಹಂತದಲ್ಲಿದ್ದು, ಶೀಘ್ರದಲ್ಲೇ ವಾಟ್ಸ್ಆ್ಯಪ್ 2.23.4.4 ಅಪ್ಡೇಟ್ ನಲ್ಲಿ ಆಯ್ಕೆ ಸಿಗಲಿದೆ ಎಂದು ಹೇಳಲಾಗಿದೆ.

ಸ್ಟೇಟಸ್ ನಲ್ಲಿ ವಾಯ್ಸ್ ಮೆಸೇಜ್:

ಸದ್ಯದಲ್ಲೇ ವಾಟ್ಸ್ ಆ್ಯಪ್ ಸ್ಟೇಟಸ್ ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದು. ವಾಯ್ಸ್ ನೋಟ್ ಅನ್ನು ಸ್ಟೇಟಸ್ ನಲ್ಲಿಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ. ಈಗಾಗಲೇ ಇದು ಆಂಡ್ರಾಯ್ಡ್ ಬೇಟಾ ವರ್ಷನ್ನಲ್ಲಿ ಲಭ್ಯವಾಗಿದೆ. ಈವರೆಗೆ ಸ್ಟೇಟಸ್ ನಲ್ಲಿ ವಿಡಿಯೋ, ಫೋಟೋ, ಲಿಂಕ್ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಿತ್ತು. ಇದೀಗ ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಳಕೆದಾರರು ಸ್ಟೇಟಸ್ ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್ ಗಳನ್ನುಶೇರ್ ಮಾಡಬಹುದಾಗಿದೆ. 30 ಸೆಕೆಂಡ್ ಗಳ ಕಾಲ ಇದು ಇರಲಿದೆ.

ಒರಿಜಿನಲ್ ಕ್ವಾಲಿಟಿಯಲ್ಲಿ ಫೋಟೋ ಕಳುಹಿಸಿ:

ವಾಟ್ಸ್ ಆ್ಯಪ್ ನಲ್ಲಿ ಈಗ ಒಂದು ಫೋಟೋ ಕಳುಹಿಸಿದರೆ ಅದು ರಿಸೀವ್ ಮಾಡಿಕೊಂಡ ಬಳಕೆದಾರನಿಗೆ ಒರಿಜಿನಲ್ ಕ್ವಾಲಿಟಿಯಲ್ಲಿಸಿಗುವುದಿಲ್ಲ. ತನ್ನ ನೈಜ್ಯ ಗುಣಮಟ್ಟವನ್ನು ಕಳೆದುಕೊಳ್ಳುತ್ತದೆ. ಇದಕ್ಕಾಗಿ ವಾಟ್ಸ್ ಆ್ಯಪ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೂಲಗುಣಮಟ್ಟದ ಫೋಟೋಗಳನ್ನು ಸೆಂಡ್‌ ಮಾಡಲು ಅನುಮತಿಸುವ ಹೊಸ ಫೀಚರ್ಸ್‌ ಪರಿಚಯಿಸುವುದಕ್ಕೆ ತಯಾರಿ ನಡೆಸಿದೆ. ವಾಟ್ಸ್ ಆ್ಯಪ್ ಪರಿಚಯಿಸಲಿರುವ ಹೊಸ ಫೀಚರ್ಸ್‌ ನಿಮಗೆ ಫೋಟೋ ಗುಣಮಟ್ಟವನ್ನು ಆಯ್ಕೆ ಮಾಡಲು ಅನುಮತಿಸಲಿದೆ. ಅಂದರೆ ನೀವು ಸೆಂಡ್‌ ಮಾಡುವ ಫೋಟೋ ಗುಣಮಟ್ಟ ಹೇಗಿರಬೇಕು ಎಂಬುದನ್ನು ನೀವೇ ನಿರ್ಧಾರ ಮಾಡಬಹುದು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »